ತುಮಕೂರು: ಜಿಲ್ಲೆಯ ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಪದವಿ, ಬಿ.ಇ(ಸಿವಿಲ್) ಹಾಗೂ ಡಿಪ್ಲೋಮಾ(ಸಿವಿಲ್) ಪಾಸಾದ ಅಭ್ಯರ್ಥಿಗಳಿಗೆ ಉದ್ಯೋಗ ಒದಗಿಸಲು ಡಿಸೆಂಬರ್ 6ರಂದು ಬೆಳಿಗ್ಗೆ 10 ಗಂಟೆಗೆ ಮಿನಿ ಉದ್ಯೋಗ ಮೇಳವನ್ನು ಆಯೋಜಿಸಲಾಗಿದ್ದು, ಅರ್ಹ ಅಭ್ಯರ್ಥಿಗಳು ಮೇಳದಲ್ಲಿ ಭಾಗವಹಿಸಿ ಪ್ರಯೋಜನ ಪಡೆಯಬಹುದಾಗಿದೆ ಎಂದು ಉದ್ಯೋಗಾಧಿಕಾರಿ ಕಿಶೋರ್ ಕುಮಾರ್ ತಿಳಿಸಿದ್ದಾರೆ.
ಉದ್ಯೋಗ ಮೇಳವು ನಗರದ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ನಡೆಯಲಿದ್ದು, ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 0816–2278488, 9071021143, 9513136642ನ್ನು ಸಂಪರ್ಕಿಸಬಹುದು ಎಂದು ಅವರು ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx