ಬೆಂಗಳೂರು: 5 ವರ್ಷ ಮಾತ್ರವಲ್ಲ ಮುಂದಿನ 15 ವರ್ಷವೂ ಸಿದ್ದರಾಮಯ್ಯನವರೇ ಸಿಎಂ ಆಗಿರಬೇಕು ಎನ್ನುವುದು ನಮ್ಮ ಅಭಿಲಾಷೆ ಎಂದು ಸಚಿವ ಕೆ.ಎನ್.ರಾಜಣ್ಣ ಹೇಳಿದರು.
ಹಾಸನ ಜನಕಲ್ಯಾಣ ಸಮಾವೇಶದ ನಡುವೆ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಸಿದ್ದರಾಮಯ್ಯ ಶಕ್ತಿಹೀನರಲ್ಲ. ಅವರಿಗೆ ಈಗಿರುವ ಶಕ್ತಿ ತುಂಬಿ ತುಳುಕುತ್ತಿದೆ. ಹೀಗಾಗಿ ಅವರಿಗೆ ಶಕ್ತಿ ತುಂಬುವ ಸಲುವಾಗಿ ಸಮಾವೇಶ ನಡೆಯುತ್ತಿದೆ ಎಂಬುದು ಅವಾಸ್ತವಿಕ ಎಂದರು.
ಕಾಂಗ್ರೆಸ್ನಲ್ಲಿ ಅಧಿಕಾರ ಕೊಡುವುದು ಅಥವಾ ತೆಗೆದುಕೊಳ್ಳುವುದು ಹೈಕಮಾಂಡ್ ನ ನಿರ್ಧಾರಕ್ಕೆ ಬಿಟ್ಟ ವಿಚಾರ. ನಮ ಅನಿಸಿಕೆ ಪ್ರಕಾರ, ಇನ್ನೂ 15 ವರ್ಷ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿಯಾಗಬೇಕು ಎಂಬುದಾಗಿದೆ ಎಂದು ಹೇಳಿದರು.
ಕಾಂಗ್ರೆಸ್ ಪಕ್ಷದಿಂದ ಸಮಾವೇಶ ನಡೆಸಲಾಗುತ್ತಿದೆ. ಇದರಲ್ಲಿ ಅಧಿಕಾರ ದುರುಪಯೋಗಪಡಿಸಿಕೊಳ್ಳುವ ಪ್ರಶ್ನೆಯೇ ಇಲ್ಲ. ಹಾಸನ ಜೆಡಿಎಸ್ ನ ಭದ್ರಕೋಟೆಯಲ್ಲ. ಲೋಕಸಭೆ ಚುನಾವಣೆಯಲ್ಲಿ ಫಲಿತಾಂಶ ಏನಾಗಿದೆ?, ಅನಗತ್ಯವಾಗಿ ಭದ್ರಕೋಟೆ ಎಂಬ ಭ್ರಮೆ ಹುಟ್ಟಿಸುವುದು ಬೇಡ ಎಂದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx