nammatumakuru

    Subscribe to Updates

    Get the latest creative news from FooBar about art, design and business.

    What's Hot

    ಹಂಪಲಾಪುರ: ಭೂಮಿ ಹಕ್ಕಿಗಾಗಿ ಆಗ್ರಹಿಸಿ ಅಹೋರಾತ್ರಿ ಪ್ರತಿಭಟನೆ

    March 10, 2026

    ಗುಬ್ಬಿ: ಸಮರ್ಪಕ ವಿದ್ಯುತ್ ಪೂರೈಕೆಗೆ ಆಗ್ರಹಿಸಿ ಬೆಸ್ಕಾಂ ಕಚೇರಿ ಮುಂದೆ ರೈತರಿಂದ ಪ್ರತಿಭಟನೆ

    March 10, 2026

    ಒಳ ಮೀಸಲಾತಿ ಜಾರಿಗೆ ಆಗ್ರಹ: ಮಾದರ ಮಹಾಸಭಾವತಿಯಿಂದ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ

    March 10, 2026
    Facebook Twitter Instagram
    ಟ್ರೆಂಡಿಂಗ್
    • ಹಂಪಲಾಪುರ: ಭೂಮಿ ಹಕ್ಕಿಗಾಗಿ ಆಗ್ರಹಿಸಿ ಅಹೋರಾತ್ರಿ ಪ್ರತಿಭಟನೆ
    • ಗುಬ್ಬಿ: ಸಮರ್ಪಕ ವಿದ್ಯುತ್ ಪೂರೈಕೆಗೆ ಆಗ್ರಹಿಸಿ ಬೆಸ್ಕಾಂ ಕಚೇರಿ ಮುಂದೆ ರೈತರಿಂದ ಪ್ರತಿಭಟನೆ
    • ಒಳ ಮೀಸಲಾತಿ ಜಾರಿಗೆ ಆಗ್ರಹ: ಮಾದರ ಮಹಾಸಭಾವತಿಯಿಂದ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ
    • ಔರಾದ್: ಶಿವಾಜಿ ಮಹಾರಾಜರ ಮೂರ್ತಿ ನಿರ್ಮಾಣಕ್ಕೆ ಭೀಮಸೇನರಾವ್ ಸಿಂದೆ ₹2.50 ಲಕ್ಷ ಆರ್ಥಿಕ ನೆರವು
    • ತುಮಕೂರು: ರೈತರ ಭೂಸ್ವಾಧೀನ ಕೈ ಬಿಡುವಂತೆ ಒತ್ತಾಯಿಸಿ ಪ್ರತಿಭಟನೆ
    • ಮಧುಗಿರಿ: ಅಪ್ರಾಪ್ತೆಯ ಮದುವೆಗೆ ಬ್ರೇಕ್: ಪೊಲೀಸರು ಬರುವಷ್ಟರಲ್ಲಿ ವಧು-ವರ ಎಸ್ಕೇಪ್!
    • ಮಹಿಳೆಯರಿಂದಲೇ ಮಹಿಳೆಯರ ಮೇಲೆ ನಡೆಯುವ ಶೋಷಣೆಗಳು ಮೊದಲು ನಿಲ್ಲಲಿ: ತಹಶೀಲ್ದಾರ್ ಮಮತಾ ಎಂ.
    • ಕೊರಟಗೆರೆ: ಮೂಢನಂಬಿಕೆಯಿಂದಾಗಿ ಬಳಕೆಯಾಗದೆ ಪಾಳುಬಿದ್ದ ಬಾಲಿಕಾ ವಿದ್ಯಾರ್ಥಿನಿಲಯ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕನ್ನಡವೇ ಪ್ರತಿಯೊಬ್ಬರ ಮನೋಧರ್ಮವಾಗಬೇಕು: ಡಾ.ಹೆಚ್.ಕೆ.ನರಸಿಂಹಮೂರ್ತಿ
    ಪಾವಗಡ December 6, 2024

    ಕನ್ನಡವೇ ಪ್ರತಿಯೊಬ್ಬರ ಮನೋಧರ್ಮವಾಗಬೇಕು: ಡಾ.ಹೆಚ್.ಕೆ.ನರಸಿಂಹಮೂರ್ತಿ

    By adminDecember 6, 2024No Comments2 Mins Read
    kannada

    ವೈ.ಎನ್.ಹೊಸಕೋಟೆ : ಕನ್ನಡದ ಉಳಿವಿಗೆ ಕನ್ನಡವೇ ಪ್ರತಿಯೊಬ್ಬರ ಮನೋಧರ್ಮವಾಗಬೇಕು ಎಂದು ಗಡಿನಾಡು ಚಿಂತಕ ಡಾ.ಹೆಚ್.ಕೆ.ನರಸಿಂಹಮೂರ್ತಿ ತಿಳಿಸಿದರು.

    ಕನ್ನಡ ಕಲಾ ಮತ್ತು ಸಾಂಸ್ಕöÈತಿಕ ಮಂಡಲಿಯು ೬೯ನೇ ಕನ್ನಡ ರಾಜ್ಯೋತ್ಸವ ಮತ್ತು ಮಂಡಲಿಯ ೩೮ನೇ ವಾರ್ಷಿಕೋತ್ಸವದ ಅಂಗವಾಗಿ ಬುಧವಾರ ಹಮ್ಮಿಕೊಂಡಿದ್ದ ನಮ್ಮೂರ ಕನ್ನಡಹಬ್ಬ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ವಿಶಾಲವಾಗಿ ಹಬ್ಬಿ ಹರಡಿ ಸಮೃದ್ಧವಾಗಿರುವ ಕನ್ನಡ ಸಂಸ್ಕೃತಿಯು ಮತ್ತಷ್ಟು ಪ್ರಬಲವಾಗಲು, ಕನ್ನಡದ ಹೆಮ್ಮೆಯ ಕುವರರು ಹೇಳುವಂತೆ ಕನ್ನಡಿಗರು ವಿಶ್ವಮಾನವರಾಗಬೇಕು. ಜಾತಿ, ಪಕ್ಷ, ಪಂಥ, ಮತಗಳನ್ನು ಮೀರಿ ಕನ್ನಡವೇ ಮನೋಧರ್ಮವಾಗಬೇಕು. ವಿಶೇಷವಾಗಿ ಗಡಿನಾಡಿನಲ್ಲಿ ಭಾಷಾ ಅಸ್ಮಿತೆಯನ್ನು ಉಳಿಸಿಕೊಂಡು ಉಲುಸಾಗಿ ಬೆಳೆಯಲು ಕನ್ನಡ ಕಲಿಯುವುದು ಜೊತೆಗೆ ಕನ್ನಡ ಉಲಿಯುವುದು ಪ್ರತಿಯೊಬ್ಬರ ಅಂತರಾಳದಲ್ಲಿ ಬೇರೂರಬೇಕು ಎಂದು ತಿಳಿಸಿದರು.


    Provided by
    Provided by

    ಕಾರ್ಯಕ್ರಮವನ್ನು ಉದ್ಘಾಟಿಸಿದ ಎನ್.ಆರ್.ಅಶ್ವಥ್ ಕುಮಾರ್ ಮಾತನಾಡಿ, ತೆಲುಗುಮಯವಾಗಿದ್ದ ಈ ಗಡಿಭಾಗದಲ್ಲಿ ಕನ್ನಡ ಕಂಪನ್ನು ಹರಡಿಸಲು ನಿರಂತರ ಕನ್ನಡ ಕಾರ್ಯಕ್ರಮಗಳು ನಡೆಯಬೇಕು. ಸರ್ಕಾರಗಳು ಗಡಿಭಾಗಗಳಿಗೆ ಹೆಚ್ಚು ಒತ್ತು ನೀಡಬೇಕು. ಇಂತಹ ಕಾರ್ಯವನ್ನು ಸ್ಥಳೀಯ ಸಂಘಟನೆ ನಿರಂತರವಾಗಿ ಮಾಡುತ್ತಾ ಬರುತ್ತಿರುವುದು ಹೆಮ್ಮೆಯ ಸಂಗತಿ. ಅದರ ಭಾಗವಾಗಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಪ್ರತಿವರ್ಷ ಕನ್ನಡಶ್ರೀ ಪ್ರಶಸ್ತಿ ನೀಡಿ ಕನ್ನಡ ಜ್ಞಾನ ಬೆಳೆಸುತ್ತಿರುವ ಕಾರ್ಯ ಎಲ್ಲರೂ ಮೆಚ್ಚುವಂತಹದ್ದು ಎಂದರು.

    ಕಾರ್ಯಕ್ರಮದ ಅಧ್ಯಕ್ಷತೆವಹಿಸಿ ಮಾತನಾಡಿದ ಗ್ರಾ.ಪಂ. ಅಧ್ಯಕ್ಷ ರಾಮಚಂದ್ರಪ್ಪ, ಈ ಗಡಿಭಾಗದಲ್ಲಿ ಕನ್ನಡ ಉಳಿವಿಗೆ ಬೆಳವಿಗೆ ಸತತ ೩೮ ವರ್ಷಗಳಿಂದ ಕನ್ನಡ ಕಲಾ ಮತ್ತು ಸಾಂಸ್ಕೃತಿಕ ಮಂಡಲಿ ಶ್ರಮಿಸುತ್ತಿದ್ದು, ಕನ್ನಡ ವಾತಾವರಣ ಸೃಷ್ಟಿಸುವಲ್ಲಿ ಸಫಲವಾಗಿದೆ ಎಂದು ತಿಳಿಸಿದರು.

    ಕನ್ನಡಶ್ರೀ ಪ್ರಶಸ್ತಿಯ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಅತಿಹೆಚ್ಚು ಅಂಕಗಳಿಸಿದ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳಾದ ಪಿ.ಜಿ.ಕಾವ್ಯ ಮತ್ತು ಧನಲಕ್ಷ್ಮೀ ಕನ್ನಡಶ್ರೀ ೨೦೨೪ ರ ಪ್ರಶಸ್ತಿಯನ್ನು ಪ್ರಥಮ ಸ್ಥಾನ ಪಡೆದ  ವಾಸವಿ ವಿದ್ಯಾನಿಕೇತನ ಶಾಲೆಯ ಅಮೋಘವರ್ಷ ಮತ್ತು ದ್ವಿತೀಯ ಸ್ಥಾನ ಪಡೆದ ರಾಷ್ಟ್ರೀಯ ವಿದ್ಯಾಪೀಠ ಶಾಲೆಯ ತನುಜ ಹಾಗೂ ತರಬೇತಿಗೊಳಿಸಿದ ಶಿಕ್ಷಕರಾದ ಅನಿಲ್ ಕುಮಾರ್ ಮತ್ತು ಕೆ.ಎನ್.ಕಾರ್ತೀಕ್ ರವರನ್ನು ಸನ್ಮಾನಿಸಿ ಗೌರವಿಸಲಾಯಿತು.

    ವಿವಿಧ ಶಾಲಾ ಕಾಲೇಜುಗಳ ವಿದ್ಯಾರ್ಥಿಗಳು ಜಾನಪದ ಸೊಗಡಿನ ಮನೋರಂಜನ ನೃತ್ಯಗಳನ್ನು ಪ್ರದರ್ಶಿಸಿದರು.

    ಕಾರ್ಯಕ್ರಮದಲ್ಲಿ ಮುಖಂಡರಾದ ಎಸ್.ಸಾಧಿಕ್‌ ಸಾಬ್, ಹೆಚ್.ಕೆ.ಶ್ರೀನಿವಾಸ, ಜೆ.ಮಧುಸೂಧನ, ಶಿಕ್ಷಕ ಹನುಮಂತರಾಯ, ಮಂಡಲಿಯ ಪದಾಧಿಕಾರಿಗಳಾದ ಎ.ಓ.ನಾಗರಾಜು, ಪಿ.ಬಿ.ವಿಶ್ವನಾಥ, ಹೊ.ಮ.ನಾಗರಾಜು, ಪಿ.ಎಂ.ಗಿರೀಶ್, ಕೃಷ್ಣಕುಮಾರ್, ನಾಗಪ್ಪ, ಜಮೀಲ್, ಪ್ರಶಾಂತ್, ಚಿಕ್ಕೋಬಯ್ಯ, ಇರ್ಪಾನ್, ಮಣಿಕಂಠ, ನೂರುದ್ದೀನ್, ಆದಿಲ್, ನಂದೀಶ್ ಇತರರು ಇದ್ದರು.

    ವರದಿ: ನಂದೀಶ್ ನಾಯ್ಕ, ಪಾವಗಡ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

    admin
    • Website

    Related Posts

    ಪಾವಗಡ: ಸಾಧಕರಿಗೆ ಸಮಾಜ ಕಲ್ಯಾಣ ಇಲಾಖೆಯಿಂದ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಜಿ ಆಹ್ವಾನ

    March 6, 2026

    ಪಾವಗಡ: ಜಾತಿ ನಿಂದನೆ, ಆಯುಧ ತೋರಿಸಿ ಕೊಲೆ ಬೆದರಿಕೆ: ಇಬ್ಬರ ವಿರುದ್ಧ ದೂರು ದಾಖಲು

    February 8, 2026

    ಶಿಕ್ಷಣ ವ್ಯವಸ್ಥೆಯ ನಿರ್ಲಕ್ಷ್ಯ  ದೇಶ—ಪ್ರಜಾಪ್ರಭುತ್ವಕ್ಕೆ ಅಪಾಯಕಾರಿ: ಬರಗೂರು ರಾಮಚಂದ್ರಪ್ಪ

    February 5, 2026

    Comments are closed.

    Our Picks

    ಇಸ್ರೇಲ್–ಇರಾನ್ ಸಂಘರ್ಷ: ದುಬೈನಲ್ಲಿರುವ ಕನ್ನಡಿಗರ ನೆರವಿಗೆ ಸಹಾಯವಾಣಿ ಆರಂಭ

    March 3, 2026

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುರುವೇಕೆರೆ

    ಹಂಪಲಾಪುರ: ಭೂಮಿ ಹಕ್ಕಿಗಾಗಿ ಆಗ್ರಹಿಸಿ ಅಹೋರಾತ್ರಿ ಪ್ರತಿಭಟನೆ

    March 10, 2026

    ತುರುವೇಕೆರೆ: ತಾಲ್ಲೂಕಿನ ದಂಡಿನಶಿವರ ಹೋಬಳಿಯ ಹಂಪಲಾಪುರ ಸಮೀಪದ ಜಮೀನಿನಲ್ಲಿ ದಲಿತರಿಗೆ ಮಂಜೂರಾಗಿರುವ ಭೂಮಿಯನ್ನು ಉಳುಮೆ ಮಾಡಲು ಬಿಡದೆ, ತಾಲ್ಲೂಕು ಆಡಳಿತ…

    ಗುಬ್ಬಿ: ಸಮರ್ಪಕ ವಿದ್ಯುತ್ ಪೂರೈಕೆಗೆ ಆಗ್ರಹಿಸಿ ಬೆಸ್ಕಾಂ ಕಚೇರಿ ಮುಂದೆ ರೈತರಿಂದ ಪ್ರತಿಭಟನೆ

    March 10, 2026

    ಒಳ ಮೀಸಲಾತಿ ಜಾರಿಗೆ ಆಗ್ರಹ: ಮಾದರ ಮಹಾಸಭಾವತಿಯಿಂದ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ

    March 10, 2026

    ಔರಾದ್: ಶಿವಾಜಿ ಮಹಾರಾಜರ ಮೂರ್ತಿ ನಿರ್ಮಾಣಕ್ಕೆ ಭೀಮಸೇನರಾವ್ ಸಿಂದೆ ₹2.50 ಲಕ್ಷ ಆರ್ಥಿಕ ನೆರವು

    March 10, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.