nammatumakuru

    Subscribe to Updates

    Get the latest creative news from FooBar about art, design and business.

    What's Hot

    ನೊಣವಿನಕೆರೆ ಅಜ್ಜಯ್ಯನ ದರ್ಶನ ಪಡೆದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್:  ಕುಣಿಗಲ್ ನಲ್ಲಿ ಅಭಿಮಾನಿಗಳಿಂದ ಸ್ವಾಗತ

    June 6, 2026

    6 ವರ್ಷದ ಮಗುವಿನ ನಿಗೂಢ ಸಾವು: ತಾಯಿ, ಲಿವ್–ಇನ್ ಪಾರ್ಟ್ನರ್ ವಿರುದ್ಧ ಕೊಲೆ ಪ್ರಕರಣ ದಾಖಲು!

    June 6, 2026

    ಮಾಯಸಂದ್ರ: ಲಿಲೋ ಮಾರ್ಗ ನಿರ್ಮಾಣ: ಆಕ್ಷೇಪಣೆಗೆ ಅವಕಾಶ

    June 6, 2026
    Facebook Twitter Instagram
    ಟ್ರೆಂಡಿಂಗ್
    • ನೊಣವಿನಕೆರೆ ಅಜ್ಜಯ್ಯನ ದರ್ಶನ ಪಡೆದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್:  ಕುಣಿಗಲ್ ನಲ್ಲಿ ಅಭಿಮಾನಿಗಳಿಂದ ಸ್ವಾಗತ
    • 6 ವರ್ಷದ ಮಗುವಿನ ನಿಗೂಢ ಸಾವು: ತಾಯಿ, ಲಿವ್–ಇನ್ ಪಾರ್ಟ್ನರ್ ವಿರುದ್ಧ ಕೊಲೆ ಪ್ರಕರಣ ದಾಖಲು!
    • ಮಾಯಸಂದ್ರ: ಲಿಲೋ ಮಾರ್ಗ ನಿರ್ಮಾಣ: ಆಕ್ಷೇಪಣೆಗೆ ಅವಕಾಶ
    • ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್: ಅರ್ಜಿ ಆಹ್ವಾನ
    • ಸರ್ಕಾರದ ಆದೇಶ ಪಾಲನೆ ನಿರ್ಲಕ್ಷ್ಯ: ಗ್ರಾಮ ಆಡಳಿತಾಧಿಕಾರಿಗಳಿಗೆ ನೋಟೀಸ್
    • ಹೊಸ ಬಾಟಲಿಯಲ್ಲಿ ಹಳೆಯ ಮದ್ಯ, ಡಿಕೆಶಿ ಪ್ರಾಮಾಣಿಕ ಆಡಳಿತ ನೀಡಲು ಹೇಗೆ ಸಾಧ್ಯ?: ಸುರೇಶ್ ಗೌಡ ಟೀಕೆ
    • ತುಮಕೂರು: ಜೂನ್ 9ರಂದು ಉದ್ಯೋಗಾಕಾಂಕ್ಷಿಗಳಿಗೆ ನೇರ ಸಂದರ್ಶನ
    • ಪಾವಗಡದಲ್ಲಿ ವಿಶ್ವ ಪರಿಸರ ದಿನಾಚರಣೆ: ‘ಗಿಡ ಬೆಳೆಸುವುದು ನಮ್ಮ ಕರ್ತವ್ಯ’: ಸಿಡಿಪಿಓ ಸುನಿತಾ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಅಂಬೇಡ್ಕರ್ ನಮ್ಮ ಸಾಮಾಜಿಕ ಬದುಕಿಗೆ ಅಗತ್ಯವಾದ ಸಂವಿಧಾನ ಕೊಟ್ಟಿದ್ದಾರೆ: ಸಿಎಂ ಸಿದ್ದರಾಮಯ್ಯ
    ರಾಜ್ಯ ಸುದ್ದಿ December 6, 2024

    ಅಂಬೇಡ್ಕರ್ ನಮ್ಮ ಸಾಮಾಜಿಕ ಬದುಕಿಗೆ ಅಗತ್ಯವಾದ ಸಂವಿಧಾನ ಕೊಟ್ಟಿದ್ದಾರೆ: ಸಿಎಂ ಸಿದ್ದರಾಮಯ್ಯ

    By adminDecember 6, 2024No Comments2 Mins Read
    siddaramaiah (1)

    ಬೆಂಗಳೂರು: ದೇಶದಲ್ಲಿ ಬಸವಣ್ಣ, ಬುದ್ಧನ ನಂತರ ಸಮಾನತೆಗಾಗಿ ಹೋರಾಡಿದವರು ಬಾಬಾ ಸಾಹೇಬ್ ಅಂಬೇಡ್ಕರ್ ಅವರು, ಈ ದೇಶಕ್ಕೆ ಹಾಗೂ ನಮ್ಮ ಸಾಮಾಜಿಕ ಬದುಕಿಗೆ ಅಗತ್ಯವಾದಂತಹ ಸಂವಿಧಾನವನ್ನು ಕೊಟ್ಟಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

    ಅಂಬೇಡ್ಕರ್ ಅವರ ಪರಿನಿರ್ವಾಣ ದಿನವಾದ ಇಂದು ಅಂಬೇಡ್ಕರ್ ಪ್ರತಿಮೆಗೆ ಪುಷ್ಪಾರ್ಚನೆ ಮಾಡಿದ ನಂತರ ಅವರು ಮಾತನಾಡಿದರು.ಅಂಬೇಡ್ಕರ್ ಅವರು 1956 ಡಿಸೆಂಬರ್ 6ರಂದು ನಮ್ಮನ್ನೆಲ್ಲಾ ಅಗಲಿದರು. ಈ ದಿನವನ್ನೇ ಪರಿನಿರ್ವಾಣ ದಿನಾಚರಣೆ ಎಂದು ಆಚರಿಸಲಾಗುತ್ತಿದೆ. ಅವರು ತಮ್ಮ ಬದುಕನ್ನು ಸಾಮಾಜಿಕ ಹೋರಾಟದಲ್ಲಿ ಹಾಗೂ ಸಮಾಜದ ಪರಿವರ್ತನೆಗಾಗಿ ತೊಡಗಿಸಿಕೊಂಡರು.


    Provided by
    Provided by

    ಅಂಬೇಡ್ಕರ್ ಅವರು ಈ ದೇಶಕ್ಕೆ ಹಾಗೂ ನಮ್ಮ ಸಾಮಾಜಿಕ ಬದುಕಿಗೆ ಅಗತ್ಯವಾದಂತಹ ಸಂವಿಧಾನವನ್ನು ಕೊಟ್ಟಿದ್ದಾರೆ. ಜಗತ್ತಿನಲ್ಲಿಯೇ ಶ್ರೇಷ್ಠ ಲಿಖಿತ ಸಂವಿಧಾನವೆಂದು ನಮ್ಮ ಸಂವಿಧಾನ ಖ್ಯಾತಿ ಪಡೆದಿದೆ. ಸಂವಿಧಾನದ ಶ್ರೇಷ್ಠತೆ ತಿಳಿಯಬೇಕಾದರೆ ಒಳ್ಳೆಯವರ ಕೈಯಲ್ಲಿ ಅನುಷ್ಟಾನವಾಗಬೇಕು. ಕೆಟ್ಟವರ ಕೈಗೆ ಹೋದರೆ ಕೆಟ್ಟದಾಗುತ್ತದೆ ಎಂದು ಅಂಬೇಡ್ಕರ್ ಅವರು ಸ್ಪಷ್ಟವಾಗಿ ಈ ದೇಶದ ಜನರಿಗೆ ಎಚ್ಚರಿಕೆಯನ್ನು ಕೊಟ್ಟಿದ್ದರು ಎಂದರು.

    ದಲಿತರಿಗೆ ಮಾತ್ರವಲ್ಲದೇ ಸಮಸ್ತ ವರ್ಗದವರಿಗೂ ಸಾಮಾಜಿಕ ಅವಕಾಶಗಳನ್ನು ದೊರಕಿಸಲು ಅವರು ಶ್ರಮಿಸಿದರು. ಅವಕಾಶ ವಂಚಿತರು, ಶೋಷಣೆ, ಅನ್ಯಾಯಕ್ಕೆ, ಅವಮಾನಕ್ಕೆ, ದೌರ್ಜನ್ಯಕ್ಕೆ ಒಳಪಟ್ಟ ಎಲ್ಲಾ ಜನರ ಪರವಾಗಿ ಕೆಲಸ ಮಾಡಿದ್ದರು. ಸಮಾಜದಲ್ಲಿ ಸಮಾನತೆ ಬಯಸಿ ಅದನ್ನೇ ನಿರ್ಮಿಸಲು ಬಹಳ ಸ್ಪಷ್ಟವಾಗಿ ಹೇಳಿದ್ದರು. ಸಂವಿಧಾನದ ಧ್ಯೇಯೋದ್ದೇಶಗಳೂ ಅದನ್ನೇ ಹೇಳುತ್ತದೆ ಎಂದರು.

    ಸಂವಿಧಾನದಿಂದ ಅನುಕೂಲ ಪಡೆದವರು ಅವರ ಸೋದರ ಜನಾಂಗಗಳಿಗೆ ಸಹಾಯ ಮಾಡಬೇಕು. ಎಲ್ಲರೂ ಸಂವಿಧಾನವನ್ನು ಅರ್ಥ ಮಾಡಿಕೊಳ್ಳಬೇಕೆಂದು ಬಯಸಿದ್ದರು. ಬಹಳ ಜನ ಸಂವಿಧಾನವನ್ನು ವಿರೋಧಿಸುತ್ತಾರೆ . ಭಾರತ ಬಹುಸಂಸ್ಕೃತಿಯ, ಬಹುತ್ವದ ದೇಶ. ಅನೇಕ ಜಾತಿ, ಧರ್ಮಗಳಿವೆ. ಅನೇಕ ಭಾಷೆಗಳೂ ಇವೆ. ಇದಕ್ಕೆ ಯೋಗ್ಯವಾದ ಸಂವಿಧಾನವನ್ನು ಕೊಟ್ಟವರು ಅಂಬೇಡ್ಕರ್. ಎಲ್ಲಾ ಧರ್ಮಗಳೂ, ಜಾತಿಗಳೂ ಸಮಾನವಾದುದು. ಮಾನವ ಧರ್ಮಕ್ಕೆ ಒತ್ತು ನೀಡಿದ್ದರು. ಮೂಲಭೂತವಾಗಿ ನಾವೆಲ್ಲಾ ಮನುಷ್ಯರು. ಮಾನವರು ಪರಸ್ಪರ ಪ್ರೀತಿಸಬೇಕೇ ಹೊರತು ದ್ವೇಷ ಸಲ್ಲದು. ಇದನ್ನು ಅಂಬೇಡ್ಕರ್ ಅವರು ತಮ್ಮ ಬದುಕಿನದುದ್ದಕ್ಕೂ ಸಾರಿದ್ದರು ಎಂದರು.

    ಜಾತಿ ವ್ಯವಸ್ಥೆ ವಿರುದ್ಧ ಹೋರಾಡಿದ್ದ ನಾನು ಹಿಂದೂ ಆಗಿ ಹುಟ್ಟಿದ್ದು, ಹಿಂದೂ ಆಗಿ ಸಾಯುವುದಿಲ್ಲ ಎಂದು ತಮ್ಮ ಕಡೇ ದಿನಗಳಲ್ಲಿ ಬೌದ್ಧ ಧರ್ಮ ಸ್ವೀಕಾರ ಮಾಡಿದರು. ಸ್ವೀಕಾರ ಮಾಡಿದ ನಂತರ ಬಹಳ ದಿನಗಳ ಕಾಲ ಉಳಿಯಲಿಲ್ಲ. ಅವರು ಕೊಟ್ಟ ಸಂವಿಧಾನದ ಪ್ರಕಾರ ಮತ್ತು ಅವರ ಹೋರಾಟದ ದಾರಿಯಲ್ಲಿ ನಡೆಯುವ ಪ್ರಾಮಾಣಿಕ ಪ್ರಯತ್ನ ಮಾಡುವುದೇ ಅವರಿಗೆ ನಾವು ಸಲ್ಲಿಸುವ ಗೌರವ. ಅದೇ ರೀತಿಯಲ್ಲಿ ಸಂವಿಧಾನದಲ್ಲಿರುವಂತೆ ಪ್ರಜಾಪ್ರಭುತ್ವ, ಸಮಾನತೆ ತರುವ ಪ್ರಯತ್ನವನ್ನು ಸರ್ಕಾರ ಮಾಡುತ್ತಿದೆ. ಬಳ್ಳಾರಿಯ ಜಿಲ್ಲಾಸ್ಪತ್ರೆಯಲ್ಲಿ ಸಂಭವಿಸಿದ ಬಾಣಂತಿಯರ ಸಾವು ಪ್ರಕರಣವನ್ನು ಸರ್ಕಾರವು ಗಂಭೀರವಾಗಿ ಪರಿಗಣಿಸಿದೆ. ಈ ಬಗ್ಗೆ ಈಗಾಗಲೇ ಸಭೆ ನಡೆಸಿ ಡ್ರಗ್ಸ್ ಕಂಟ್ರೋಲರ್ ರನ್ನು ಅಮಾನತು ಮಾಡಲಾಗಿದೆ. ಈ ಪ್ರಕರಣದಲ್ಲಿ ಸಾವು ಏಕೆ ಸಂಭವಿಸಿದೆ ಎಂದು ಪರಿಶೀಲಿಸಲಾಗುವುದು ಎಂದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

    admin
    • Website

    Related Posts

    6 ವರ್ಷದ ಮಗುವಿನ ನಿಗೂಢ ಸಾವು: ತಾಯಿ, ಲಿವ್–ಇನ್ ಪಾರ್ಟ್ನರ್ ವಿರುದ್ಧ ಕೊಲೆ ಪ್ರಕರಣ ದಾಖಲು!

    June 6, 2026

    ಖಾತೆ ಹಂಚಿಕೆ ಅಸಮಾಧಾನ: ಸಚಿವ ಸ್ಥಾನಕ್ಕೆ ರಾಮಲಿಂಗಾರೆಡ್ಡಿ ರಾಜೀನಾಮೆ; ಮಾತಾಡಿ ಬಗೆಹರಿಸಿಕೊಳ್ಳುತ್ತೇವೆ ಎಂದ ಡಿಕೆಶಿ!

    June 5, 2026

    ರಾಜ್ಯದ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್: ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ

    June 5, 2026

    Comments are closed.

    Our Picks

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026

    ಥಿಯೇಟರ್‌ ಗಳಲ್ಲಿ ಹೊಸ ತಮಿಳು ಸಿನಿಮಾಗಳಿಗೆ ದಿನಕ್ಕೆ 5 ಶೋ ಪ್ರದರ್ಶನ: ಸಿಎಂ ವಿಜಯ್ ಮಹತ್ವದ ಆದೇಶ

    May 26, 2026

    ಬಾಲಕನ ಬಲಿ ಪಡೆದಿದ್ದ ಚಿರತೆ ಕೊನೆಗೂ ಸೆರೆ: 14 ದಿನಗಳ ಕಾರ್ಯಾಚರಣೆ ಬಳಿಕ ಸ್ಥಳೀಯರು ನಿಟ್ಟುಸಿರು

    May 25, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕುಣಿಗಲ್

    ನೊಣವಿನಕೆರೆ ಅಜ್ಜಯ್ಯನ ದರ್ಶನ ಪಡೆದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್:  ಕುಣಿಗಲ್ ನಲ್ಲಿ ಅಭಿಮಾನಿಗಳಿಂದ ಸ್ವಾಗತ

    June 6, 2026

    ಕುಣಿಗಲ್: ರಾಜ್ಯದ ನೂತನ ಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ್ ರವರನ್ನು ಅಂಚೆ ಪಾಳ್ಯದ ಕೈಗಾರಿಕಾ ವಲಯದದಲ್ಲಿ ಶಾಸಕ ಡಾ.ಎಚ್.ಡಿ.ರಂಗನಾಥ್ ಹಾಗೂ ಕಾಂಗ್ರೆಸ್…

    6 ವರ್ಷದ ಮಗುವಿನ ನಿಗೂಢ ಸಾವು: ತಾಯಿ, ಲಿವ್–ಇನ್ ಪಾರ್ಟ್ನರ್ ವಿರುದ್ಧ ಕೊಲೆ ಪ್ರಕರಣ ದಾಖಲು!

    June 6, 2026

    ಮಾಯಸಂದ್ರ: ಲಿಲೋ ಮಾರ್ಗ ನಿರ್ಮಾಣ: ಆಕ್ಷೇಪಣೆಗೆ ಅವಕಾಶ

    June 6, 2026

    ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್: ಅರ್ಜಿ ಆಹ್ವಾನ

    June 6, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.