nammatumakuru

    Subscribe to Updates

    Get the latest creative news from FooBar about art, design and business.

    What's Hot

    WhatsApp ಬಳಕೆದಾರರೇ ಎಚ್ಚರ! ಈ 2 ಸೆಟ್ಟಿಂಗ್‌ ಆನ್ ಮಾಡಿ, ಸೈಬರ್ ವಂಚನೆಯ ಅಪಾಯ ತಗ್ಗಿಸಿ

    October 14, 2026

    ರೈತರ ಬೇಡಿಕೆ ಈಡೇರುವವರೆಗೆ ಸಕ್ಕರೆ ಮುಟ್ಟಲ್ಲ! ಫಕೀರ ದಿಂಗಾಲೇಶ್ವರ ಸ್ವಾಮೀಜಿ ಪ್ರತಿಜ್ಞೆ

    October 14, 2026

    ಜಗನ್ನಾಥನ ರಥದ ಚಕ್ರ ಮನೆಗೆ ತರಬೇಕಾ? ಖರೀದಿಸಲು ಎಷ್ಟು ಹಣ ಕೊಡಬೇಕು?

    October 14, 2026
    Facebook Twitter Instagram
    ಟ್ರೆಂಡಿಂಗ್
    • WhatsApp ಬಳಕೆದಾರರೇ ಎಚ್ಚರ! ಈ 2 ಸೆಟ್ಟಿಂಗ್‌ ಆನ್ ಮಾಡಿ, ಸೈಬರ್ ವಂಚನೆಯ ಅಪಾಯ ತಗ್ಗಿಸಿ
    • ರೈತರ ಬೇಡಿಕೆ ಈಡೇರುವವರೆಗೆ ಸಕ್ಕರೆ ಮುಟ್ಟಲ್ಲ! ಫಕೀರ ದಿಂಗಾಲೇಶ್ವರ ಸ್ವಾಮೀಜಿ ಪ್ರತಿಜ್ಞೆ
    • ಜಗನ್ನಾಥನ ರಥದ ಚಕ್ರ ಮನೆಗೆ ತರಬೇಕಾ? ಖರೀದಿಸಲು ಎಷ್ಟು ಹಣ ಕೊಡಬೇಕು?
    • ನಿಮ್ಮ ಮೊಬೈಲ್ ರೀಚಾರ್ಜ್‌ನಿಂದ ಟೆಲಿಕಾಂ ಕಂಪನಿಗಳಿಗೆ ಎಷ್ಟು ಲಾಭ?
    • ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಹಿಂದೆ ಯಾರು? ಕೆ.ಎನ್.ರಾಜಣ್ಣ ಹೇಳಿದ್ದೇನು?
    • “ದಮ್ಮು, ತಾಕತ್ತು ಇದ್ದರೆ ಹೋರಾಟಕ್ಕೆ ಬನ್ನಿ”; ನಟ ಸುದೀಪ್‌ ಗೆ ಉಗ್ರಪ್ಪ ಸವಾಲು?
    • ಸಿಹಿ ತಿನ್ನದಿದ್ದರೂ ಮಧುಮೇಹ ಬರಬಹುದು! ಈ ಲಕ್ಷಣಗಳನ್ನು ನಿರ್ಲಕ್ಷಿಸಬೇಡಿ
    • ತುಮಕೂರು ದಸರಾ ಉತ್ಸವ-2026: ಪಂಜಿನ ಕವಾಯತು ತಾಲೀಮು ವೀಕ್ಷಣೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಬೆಳಗಾವಿ ಚಳಿಗಾಲದ ಅಧಿವೇಶನಕ್ಕೆ ಆಗುವ ಖರ್ಚೆಷ್ಟು?
    ರಾಜ್ಯ ಸುದ್ದಿ December 7, 2024

    ಬೆಳಗಾವಿ ಚಳಿಗಾಲದ ಅಧಿವೇಶನಕ್ಕೆ ಆಗುವ ಖರ್ಚೆಷ್ಟು?

    By adminDecember 7, 2024No Comments3 Mins Read
    Mohammed Roshan

    ಬೆಳಗಾವಿ: ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ಡಿ.9ರಿಂದ 19ರವರೆಗೆ 9 ದಿನ ಚಳಿಗಾಲದ ಅಧಿವೇಶನ ನಡೆಯಲಿದೆ. ಈ ಅಧಿವೇಶನಕ್ಕೆ 19 ಕೋಟಿ ರೂ. ವೆಚ್ಚವಾಗಲಿದೆ ಎಂದು ಬೆಳಗಾವಿ ಜಿಲ್ಲಾಧಿಕಾರಿ ಸಲ್ಲಿಸಿರುವ ಪ್ರಸ್ತಾವನೆಯಲ್ಲಿ ತಿಳಿಸಿದ್ದಾರೆ.
    ಅಧಿವೇಶನಕ್ಕೆ ಆಗಮಿಸುವ ಸಚಿವರು, ಶಾಸಕರು ಹಾಗೂ ಅಧಿಕಾರಿಗಳ ವಾಸ್ತವ್ಯಕ್ಕೆ 7 ಕೋಟಿ ರೂ. ಖರ್ಚಾಗಲಿದ್ದು, ಹಿಂದಿನ ವರ್ಷ ಒಟ್ಟು 18 ಕೋಟಿ ಖರ್ಚಾಗಿತ್ತು. ಆ ವೆಚ್ಚವನ್ನು ಆಧರಿಸಿ ಪ್ರಸ್ತಾವನೆಯನ್ನು ಸರ್ಕಾರಕ್ಕೆ ಸಲ್ಲಿಸಲಾಗಿದೆ ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಮಾಹಿತಿ ನೀಡಿದ್ದಾರೆ.

    ಇನ್ನೂ ನಿರ್ಮಾಣವಾಗದ ಶಾಸಕರ ಭವನ:

    ಪ್ರತೀ ವರ್ಷವೂ ಅಧಿವೇಶನದ ಖರ್ಚಿನಲ್ಲಿ ವಾಸ್ತವ್ಯಕ್ಕೆ ಸಿಂಹ ಪಾಲಿದೆ. ಈ ಹಣ ಉಳಿಸುವ ನಿಟ್ಟಿನಲ್ಲಿ ಸುವರ್ಣ ವಿಧಾನಸೌಧದ ಬಳಿ ಶಾಸಕರ ಭವನ ನಿರ್ಮಿಸುವ ದಶಕದ ಬೇಡಿಕೆ ಬೇಡಿಕೆಯಾಗಿಯೇ ಉಳಿದಿದೆ.

    ಭದ್ರತೆಗೆ ₹5 ಕೋಟಿ, ಊಟಕ್ಕೆ ₹2.80 ಕೋಟಿ ವೆಚ್ಚ:

    ಭದ್ರತೆಗೆ 5 ಕೋಟಿ ರೂ ಖರ್ಚಾಗಲಿದೆ. ಸಚಿವ, ಶಾಸಕ, ಅಧಿಕಾರಿ ಹಾಗೂ ಸಿಬ್ಬಂದಿಯ ಊಟದ ಖರ್ಚಿಗೆ 2.80 ಕೋಟಿ ರೂ ಖರ್ಚಾಗಲಿದೆ. ಇನ್ನು ಮಾರ್ಷಲ್ಗಳ ಓಡಾಟ, ಪೊಲೀಸ್ ಬಂದೋಬಸ್ತ್ ಹಾಗೂ ಸಾರಿಗೆ ಸಂಸ್ಥೆಯ ಬಸ್ ಸೇವೆ ಸೇರಿ ಒಟ್ಟಾರೆ 1.20 ಕೋಟಿ ರೂ. ವೆಚ್ಚವಾಗಲಿದೆ. ಸುವರ್ಣ ವಿಧಾನಸೌಧ ಸೇರಿ ಗಣ್ಯರು ತಂಗಿದ ಸ್ಥಳಗಳಲ್ಲಿ ಇಂಟರ್ನೆಟ್ ಸೌಲಭ್ಯ, ದೂರವಾಣಿ ವ್ಯವಸ್ಥೆಗೆ 44 ಲಕ್ಷ ರೂ. ವಾಹನಗಳ ಇಂಧನಕ್ಕಾಗಿ 45 ಲಕ್ಷ ರೂ ಅಧಿವೇಶನ ವೇಳೆ ತುರ್ತಾಗಿ ಬಾಡಿಗೆ ವಾಹನ ಪಡೆಯಲು 25 ಲಕ್ಷ ರೂ. ವಾಹನ ಚಾಲಕರ ವಸತಿ ವ್ಯವಸ್ಥೆಗೆ 20 ಲಕ್ಷ ರೂ. ಸೌಧವನ್ನು ಹೂಗಳಿಂದ ಅಲಂಕಾರಗೊಳಿಸಲು 15 ಲಕ್ಷ ರೂ. ಖರ್ಚಾಗಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ಧರಣಿ ಸ್ಥಳಕ್ಕೆ ₹8.50 ಲಕ್ಷ:

    ಅಧಿವೇಶನದ ವೇಳೆ ಪ್ರತಿಭಟನಾ ಸ್ಥಳಕ್ಕಾಗಿ 8.50 ಲಕ್ಷ ರೂ. ಸ್ವಚ್ಛತಾ ಸಿಬ್ಬಂದಿ, ಬಿಸಿ ನೀರಿನ ವ್ಯವಸ್ಥೆ, ಲೇಖನ ಸಾಮಗ್ರಿಗೆ 25 ಲಕ್ಷ ರೂ. ಸುವರ್ಣ ವಿಧಾನಸೌಧ ಮುಂಭಾಗದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಕ್ಕಾಗಿ 15 ಲಕ್ಷ ರೂ. ಅಧಿವೇಶನ ಮಾಹಿತಿ ಕೈಪಿಡಿ, ವಿವಿಧ ಗುರುತಿನ ಚೀಟಿಗಾಗಿ 4 ಲಕ್ಷ ರೂ. ಜಿಲ್ಲಾ ತರಬೇತಿ ಕೇಂದ್ರದಲ್ಲಿ ಕರ್ತವ್ಯದಲ್ಲಿರುವ ಸರ್ಕಾರಿ ವಾಹನ ಚಾಲಕರಿಗೆ ನಿರ್ವಹಣಾ ವೆಚ್ಚ 25 ಸಾವಿರ ರೂ ಅಗತ್ಯವಿದೆ ಎಂದು ಜಿಲ್ಲಾಧಿಕಾರಿ ಬೇಡಿಕೆ ಸಲ್ಲಿಸಿದ್ದಾರೆ.

    ಬರೀ ಆಶ್ವಾಸನೆ ಮಾತ್ರ:

    ಈ ಕುರಿತು ಹಿರಿಯ ಪತ್ರಕರ್ತ ಮೆಹಬೂಬ್ ಮಕಾನದಾರ್ ಮಾತನಾಡಿ, ”ಬೆಳಗಾವಿಯಲ್ಲಿ ಸೌಧ ನಿರ್ಮಾಣವಾದ ಸಂದರ್ಭದಲ್ಲೇ ಅಂದಿನ ಮುಖ್ಯಮಂತ್ರಿ ಯಡಿಯೂರಪ್ಪನವರು ಇಲ್ಲಿ ಶಾಸಕರ ಭವನ ನಿರ್ಮಾಣದ ವಾಗ್ದಾನ ಮಾಡಿದ್ದರು. ಆದರೆ, ಅದು ಇನ್ನೂ ಕೂಡ ಸಾಕಾರವಾಗಿಲ್ಲ. ಅನೇಕ ಸರ್ಕಾರಗಳು ಬಂದು ಹೋದರೂ ಬರೀ ಆಶ್ವಾಸನೆ ಮಾತ್ರ ಕೊಡುತ್ತಿದ್ದಾರೆ. ಅಧಿವೇಶನಕ್ಕೆ ಗಂಟು ಮೂಟೆ ಕಟ್ಟಿಕೊಂಡು ಬರುವ ಮಂತ್ರಿಗಳು, ಶಾಸಕರು ಹಾಗೂ ಅಧಿಕಾರಿಗಳ ವಾಸ್ತವ್ಯಕ್ಕೆ ಬೆಳಗಾವಿಯಲ್ಲಿರುವ ಎಲ್ಲಾ ಹೋಟೆಲ್, ಲಾಡ್ಜ್ಗಳನ್ನು ಬುಕ್ ಮಾಡಲಾಗುತ್ತದೆ. ಇದಕ್ಕೆ ಕೋಟ್ಯಂತರ ರೂ. ಖರ್ಚಾಗುತ್ತದೆ. ಈವರೆಗೆ ನಡೆದ ಅಧಿವೇಶನಗಳಲ್ಲಿ ವಸತಿಗೆ ವ್ಯಯಿಸಿದ ಖರ್ಚಿನಿಂದ ಒಂದು ಸುಸಜ್ಜಿತ ಶಾಸಕರ ಭವನ ನಿರ್ಮಿಸಬಹುದಿತ್ತು. ಈ ಬಾರಿಯಾದರೂ ಸಿದ್ದರಾಮಯ್ಯನವರ ಸರ್ಕಾರ ಈ ಬಗ್ಗೆ ಚಿಂತನೆ ನಡೆಸಲಿ” ಎಂದು ಆಗ್ರಹಿಸಿದ್ದಾರೆ.

    ಶಾಸಕ ಆಸೀಫ್ ಸೇಠ್ ಹೇಳಿದ್ದೇನು?:

    ”ಬೆಳಗಾವಿಯಲ್ಲಿ ಸಾರ್ವಜನಿಕ ಖಾಸಗಿ ಸಹಭಾಗಿತ್ವ(PPP)ದಲ್ಲಿ ಶಾಸಕ ಭವನ ನಿರ್ಮಾಣಕ್ಕೆ ಸರ್ಕಾರ ಚಿಂತನೆ ನಡೆಸಿದೆ. ಅಧಿವೇಶನದ ಸಂದರ್ಭದಲ್ಲಿ ಸರ್ಕಾರಕ್ಕೆ ಕಟ್ಟಡ ಬಿಟ್ಟುಕೊಡಬೇಕು. ಇನ್ನುಳಿದ ಸಮಯದಲ್ಲಿ ಖಾಸಗಿಯಾಗಿ ಬಳಕೆ ಮಾಡುವ ವಿಚಾರವಿದೆ. ಈ ಅಧಿವೇಶನದಲ್ಲಿಯೇ ನಿರ್ಧಾರ ಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮನವಿ ಸಲ್ಲಿಸುತ್ತೇವೆ” ಎಂದು ಶಾಸಕ ಆಸೀಫ್ ಸೇಠ್ ತಿಳಿಸಿದ್ದಾರೆ.

    ಧರಣಿ ಸ್ಥಳಕ್ಕೆ ₹8.50 ಲಕ್ಷ:

    ಅಧಿವೇಶನದ ವೇಳೆ ಪ್ರತಿಭಟನಾ ಸ್ಥಳಕ್ಕಾಗಿ 8.50 ಲಕ್ಷ ರೂ. ಸ್ವಚ್ಛತಾ ಸಿಬ್ಬಂದಿ, ಬಿಸಿ ನೀರಿನ ವ್ಯವಸ್ಥೆ, ಲೇಖನ ಸಾಮಗ್ರಿಗೆ 25 ಲಕ್ಷ ರೂ. ಸುವರ್ಣ ವಿಧಾನಸೌಧ ಮುಂಭಾಗದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಕ್ಕಾಗಿ 15 ಲಕ್ಷ ರೂ. ಅಧಿವೇಶನ ಮಾಹಿತಿ ಕೈಪಿಡಿ, ವಿವಿಧ ಗುರುತಿನ ಚೀಟಿಗಾಗಿ 4 ಲಕ್ಷ ರೂ. ಜಿಲ್ಲಾ ತರಬೇತಿ ಕೇಂದ್ರದಲ್ಲಿ ಕರ್ತವ್ಯದಲ್ಲಿರುವ ಸರ್ಕಾರಿ ವಾಹನ ಚಾಲಕರಿಗೆ ನಿರ್ವಹಣಾ ವೆಚ್ಚ 25 ಸಾವಿರ ರೂ ಅಗತ್ಯವಿದೆ ಎಂದು ಜಿಲ್ಲಾಧಿಕಾರಿ ಬೇಡಿಕೆ ಸಲ್ಲಿಸಿದ್ದಾರೆ.

    ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರನ್ನು ಸಂಪರ್ಕಿಸಿದಾಗ ಅವರು, ”ಅಧಿವೇಶನದ ಯಶಸ್ಸಿಗೆ 10 ತಂಡಗಳನ್ನು ರಚಿಸಲಾಗಿದೆ. ಸುವರ್ಣ ವಿಧಾನಸೌಧ ಸ್ವಚ್ಛತೆ, ಬಣ್ಣ ಬಳಿಯುವುದು, ಸೌಧ ಸುತ್ತ ಉದ್ಯಾನ ಸೇರಿ ಎಲ್ಲ ರೀತಿ ಕೆಲಸಗಳೂ ನಡೆಯುತ್ತಿವೆ. ಇನ್ನು ಎರಡು ದಿನಗಳಲ್ಲಿ ಅಧಿವೇಶನಕ್ಕೆ ಸೌಧ ಸಂಪೂರ್ಣ ಸಜ್ಜಾಗಲಿದೆ. ಈ ಬಾರಿಯ ಅಧಿವೇಶನ ಖರ್ಚಿಗೆ 19 ಕೋಟಿ ರೂ. ಖರ್ಚಾಗಲಿದ್ದು, ಹಿಂದಿನ ಅಧಿವೇಶನಕ್ಕಿಂತ ಶೇ.10ರಷ್ಟು ಖರ್ಚು ಹೆಚ್ಚಾಗಿದೆ. ಅಧಿವೇಶನ ಯಶಸ್ವಿಯಾಗಿ ನಡೆಯಲಿದ್ದು, ಯಾವುದೇ ರೀತಿ ಅನುದಾನ ಕೊರತೆ ಇಲ್ಲ” ಎಂದು ಹೇಳಿದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

    admin
    • Website

    Related Posts

    ರೈತರ ಬೇಡಿಕೆ ಈಡೇರುವವರೆಗೆ ಸಕ್ಕರೆ ಮುಟ್ಟಲ್ಲ! ಫಕೀರ ದಿಂಗಾಲೇಶ್ವರ ಸ್ವಾಮೀಜಿ ಪ್ರತಿಜ್ಞೆ

    October 14, 2026

    ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಹಿಂದೆ ಯಾರು? ಕೆ.ಎನ್.ರಾಜಣ್ಣ ಹೇಳಿದ್ದೇನು?

    October 14, 2026

    “ದಮ್ಮು, ತಾಕತ್ತು ಇದ್ದರೆ ಹೋರಾಟಕ್ಕೆ ಬನ್ನಿ”; ನಟ ಸುದೀಪ್‌ ಗೆ ಉಗ್ರಪ್ಪ ಸವಾಲು?

    October 14, 2026

    Comments are closed.

    Our Picks

    ಜಗನ್ನಾಥನ ರಥದ ಚಕ್ರ ಮನೆಗೆ ತರಬೇಕಾ? ಖರೀದಿಸಲು ಎಷ್ಟು ಹಣ ಕೊಡಬೇಕು?

    October 14, 2026

    ನಿಮ್ಮ ಮೊಬೈಲ್ ರೀಚಾರ್ಜ್‌ನಿಂದ ಟೆಲಿಕಾಂ ಕಂಪನಿಗಳಿಗೆ ಎಷ್ಟು ಲಾಭ?

    October 14, 2026

    ದೆಹಲಿಯ ಬೀದಿಯಲ್ಲಿ ಕಾರ್ಯಕರ್ತರೊಂದಿಗೆ ಸರಳತೆಯ ಸಹಭೋಜನ: ಜನರ ನಡುವಿನ ನಾಯಕ ಬಿ.ಕೆ. ಹರಿಪ್ರಸಾದ್

    October 13, 2026

    ‘We’re Sorry’: ಸಿಜೆಪಿ ನಾಯಕ ಅಭಿಜಿತ್ ದೀಪ್ಕೆಗೆ ಅಜ್ಜಿಯ ಸಾವಿನ ಸುದ್ದಿ ಮುಟ್ಟಿಸಿದ ಪೊಲೀಸ್; ವೈರಲ್ ವೀಡಿಯೊ

    October 12, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಸ್ಪೆಷಲ್ ನ್ಯೂಸ್

    WhatsApp ಬಳಕೆದಾರರೇ ಎಚ್ಚರ! ಈ 2 ಸೆಟ್ಟಿಂಗ್‌ ಆನ್ ಮಾಡಿ, ಸೈಬರ್ ವಂಚನೆಯ ಅಪಾಯ ತಗ್ಗಿಸಿ

    October 14, 2026

    ಸ್ಮಾರ್ಟ್‌ಫೋನ್ ಬಳಕೆ ಹೆಚ್ಚಾದಂತೆ ಸೈಬರ್ ವಂಚನೆಯ ಪ್ರಕರಣಗಳೂ ಆತಂಕ ಮೂಡಿಸುತ್ತಿವೆ. ವಾಟ್ಸ್‌ಆಯಪ್ ಮೂಲಕ ಅಪರಿಚಿತ ನಂಬರ್‌ಗಳಿಂದ ಕರೆ ಮಾಡಿ, ಸರ್ಕಾರಿ…

    ರೈತರ ಬೇಡಿಕೆ ಈಡೇರುವವರೆಗೆ ಸಕ್ಕರೆ ಮುಟ್ಟಲ್ಲ! ಫಕೀರ ದಿಂಗಾಲೇಶ್ವರ ಸ್ವಾಮೀಜಿ ಪ್ರತಿಜ್ಞೆ

    October 14, 2026

    ಜಗನ್ನಾಥನ ರಥದ ಚಕ್ರ ಮನೆಗೆ ತರಬೇಕಾ? ಖರೀದಿಸಲು ಎಷ್ಟು ಹಣ ಕೊಡಬೇಕು?

    October 14, 2026

    ನಿಮ್ಮ ಮೊಬೈಲ್ ರೀಚಾರ್ಜ್‌ನಿಂದ ಟೆಲಿಕಾಂ ಕಂಪನಿಗಳಿಗೆ ಎಷ್ಟು ಲಾಭ?

    October 14, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.