nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮಂಡ್ಯ: ಮಾಜಿ ಶಾಸಕ ಡಾ.ಅನ್ನದಾನಿ ವಿರುದ್ಧ ಅಕ್ರಮ ಸಂಬಂಧದ ಗಂಭೀರ ಆರೋಪ; ಕುಮಾರಸ್ವಾಮಿ ಕಾಲಿಗೆ ಬಿದ್ದು ಪತಿಯ ಗೋಳಾಟ!

    April 7, 2026

    ‘ಪೆಟ್ರೋಲ್‌ ಗೆ ಬದಲಾಯಿಸಿಕೊಳ್ಳಿ’: ಆಟೋ LPG ಸಮಸ್ಯೆಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸಲಹೆ

    April 7, 2026

    ಶಿವಣ್ಣನ ಜೊತೆ ಮದುವೆ; ಹರಿದಾಡುತ್ತಿರುವ ಸುಳ್ಳು ಸುದ್ದಿಗೆ ನಟಿ ಸುಧಾರಾಣಿ ಆಕ್ರೋಶ!

    April 7, 2026
    Facebook Twitter Instagram
    ಟ್ರೆಂಡಿಂಗ್
    • ಮಂಡ್ಯ: ಮಾಜಿ ಶಾಸಕ ಡಾ.ಅನ್ನದಾನಿ ವಿರುದ್ಧ ಅಕ್ರಮ ಸಂಬಂಧದ ಗಂಭೀರ ಆರೋಪ; ಕುಮಾರಸ್ವಾಮಿ ಕಾಲಿಗೆ ಬಿದ್ದು ಪತಿಯ ಗೋಳಾಟ!
    • ‘ಪೆಟ್ರೋಲ್‌ ಗೆ ಬದಲಾಯಿಸಿಕೊಳ್ಳಿ’: ಆಟೋ LPG ಸಮಸ್ಯೆಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸಲಹೆ
    • ಶಿವಣ್ಣನ ಜೊತೆ ಮದುವೆ; ಹರಿದಾಡುತ್ತಿರುವ ಸುಳ್ಳು ಸುದ್ದಿಗೆ ನಟಿ ಸುಧಾರಾಣಿ ಆಕ್ರೋಶ!
    • ಸರ್ಕಾರಿ ಶಾಲಾ ಶಿಕ್ಷಕಿಯ ಭೀಕರ ಕೊಲೆ; ಮಾರಕಾಸ್ತ್ರಗಳಿಂದ ಕೊಚ್ಚಿ ಶವಕ್ಕೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು
    • ಉಪಚುನಾವಣೆಯ ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು ನಿಶ್ಚಿತ: ಡಿ.ಕೆ.ಸುರೇಶ್ ವಿಶ್ವಾಸ
    • ಶಿರಾ: ಕಾರ್ಯಕರ್ತರೇ ಶಾಶ್ವತ, ಬಿಜೆಪಿ ಅಧಿಕಾರದಲ್ಲಿ ಪುನಃ ಹಿಂದಿ ಜಾರಿ: ಬಿಜೆಪಿ 46ನೇ ವರ್ಷದ ಸಂಸ್ಥಾಪನಾ ದಿನ ಆಚರಣೆ
    • ಬಿಜೆಪಿ ಇತಿಹಾಸ, ಸಿದ್ಧಾಂತ ಜನರಿಗೆ ತಿಳಿಸಿ: ಕಾರ್ಯಕರ್ತರಿಗೆ ಶಾಸಕ ಜ್ಯೋತಿ ಗಣೇಶ್ ಕರೆ
    • ಹೊನ್ನುಡಿಕೆಯಲ್ಲಿ ನರ ಮತ್ತು ಮನೋರೋಗ ತಪಾಸಣಾ ಶಿಬಿರ: ಮಾನಸಿಕ ಆರೋಗ್ಯದ ಬಗ್ಗೆ ಎಚ್ಚರಿಕೆ ಅಗತ್ಯ ಎಂದ ಮಾಜಿ ಶಾಸಕ ಎಚ್.ನಿಂಗಪ್ಪ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮಠಗಳು ಹೆಚ್ಚಾದರೆ ನಮ್ಮ ಸಮಾಜ ಹೆಚ್ಚು ಸಂಘಟನೆಯಾಗುತ್ತದೆ: ವಚನಾನಂದ ಸ್ವಾಮೀಜಿ
    ರಾಜ್ಯ ಸುದ್ದಿ January 24, 2022

    ಮಠಗಳು ಹೆಚ್ಚಾದರೆ ನಮ್ಮ ಸಮಾಜ ಹೆಚ್ಚು ಸಂಘಟನೆಯಾಗುತ್ತದೆ: ವಚನಾನಂದ ಸ್ವಾಮೀಜಿ

    By adminJanuary 24, 2022No Comments2 Mins Read
    vachananda swamiji

    ಹರಿಹರ: ಪಂಚಮಸಾಲಿ ಸಮಾಜದವರು ಮತಾಂತರ ಆಗುತ್ತಿದ್ದಾರೆ. ಆದಕಾರಣ ಧಾರ್ಮಿಕವಾಗಿ ಸಂಘಟನೆಯ ಮೂಲಕ ಸಮಾಜದಲ್ಲಿ ಮತಾಂತರ ಕಾರ್ಯ ನಿಲ್ಲಬೇಕು ಎಂದು ಪಂಚಮಸಾಲಿ ಮಠದ ಶ್ರೀ ವಚನಾನಂದ ಸ್ವಾಮೀಜಿ ಹೇಳಿದರು.

    ತಾಲೂಕಿನ ಹನಗವಾಡಿ ಗ್ರಾಮದ ಹೊರವಲಯದಲ್ಲಿರುವ ಪಂಚಮಸಾಲಿ ಮಠದಲ್ಲಿ ಮೂರನೇ ಮಠ ಸ್ಥಾಪನೆ ವಿಚಾರದ ಗೊಂದಲದ ಹಿನ್ನಲೆಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಶ್ರೀಗಳು, ನಾಡಿನಲ್ಲಿ ಪಂಚಮಸಾಲಿ ಮಠಗಳು ಹೆಚ್ಚಾದರೆ ನಮ್ಮ ಪೀಠಕ್ಕೆ ಬರುವ ಭಕ್ತರ ಸಂಖ್ಯೆ ಕಡಿಮೆಯಾಗುತ್ತದೆ ಎನ್ನುವ ಭೀತಿ ನಮಗೆ ಇಲ್ಲ. ಮಠಗಳು ಹೆಚ್ಚಾದರೆ ನಮ್ಮ ಸಮಾಜ ಹೆಚ್ಚು ಸಂಘಟನೆಯಾಗುತ್ತದೆ ಎಂದರು.


    Provided by
    Provided by

    ಹರಿಹರ ತಾಲೂಕಿನಲ್ಲಿರುವ ಪಂಚಮಸಾಲಿ ಪೀಠವು 20 ವರ್ಷಗಳಿಂದ ಸಂಘಟನೆ ಮಾಡಿಕೊಂಡು ಬಂದಿದೆ. ಈ ಹಿಂದೆ ಮಠಕ್ಕೆ ಭೇಟಿ ನೀಡಿದ್ದ ವೀರಶೈವ ಪಂಚಮಸಾಲಿ ಒಕ್ಕೂಟದ ಪದಾಧಿಕಾರಿಗಳು, ಪಂಚಮಸಾಲಿ ಸಮಾಜದ ಮೂಲ ಪೀಠ ಎಂದರೆ ಅದು ಹರಿಹರದ ಪಂಚಮಸಾಲಿ ಪೀಠ ಎಂದು ತಿಳಿಸಿದ್ದಾರೆ. ಮೂರನೆ ಪೀಠದ ನಿರ್ಮಾಣಕ್ಕೆ ನಿಮ್ಮ ಸಹಕಾರ ಬೇಕು ಎಂದು ಕೇಳಿದ್ದರು, ನಾವು ಸಹಕಾರ ಕೊಡುತ್ತೇವೆ ಎಂದು ಭರವಸೆ ನೀಡಿದ್ದೇವೆ ಎಂದರು.

    ಮೂರನೇ ಪೀಠದ ನಿರ್ಮಾಣಕ್ಕೆ ನಾವು ಸಹಕಾರ ಕೊಡುತ್ತೇವೆ, ನಮ್ಮ ಸಮಾಜಕ್ಕೆ ಪ್ರತಿ ಜಿಲ್ಲೆಗೊಂದು ಪೀಠಗಳಾಗಲಿ ಭಯವಿಲ್ಲ. ಪೀಠಗಳು ಹೆಚ್ಚಾದರೆ ನಮ್ಮ ಪೀಠಕ್ಕೆ ಬರುವ ಭಕ್ತರ ಸಂಖ್ಯೆ ಕಡಿಮೆಯಾಗುತ್ತದೆ ಎನ್ನುವ ಭೀತಿ ನಮಗಿಲ್ಲ.  ಮೂರನೇ ಪೀಠದ ಬಗ್ಗೆ ಕೆಲವರು ಗೊಂದಲಗಳನ್ನು ಮಾಡುತ್ತಿದ್ದಾರೆ. ಅಲ್ಲದೆ ನಿರಾಣಿಯವರು ಎಂದಿಗೂ ಪೀಠಗಳನ್ನು ಬಳಸಿಕೊಂಡಿಲ್ಲ, ಪೀಠಗಳೇ ನಿರಾಣಿಯವರನ್ನು ಉಪಯೋಗಿಸಿಕೊಂಡಿದ್ದಾರೆ ಎಂದು ಪರೋಕ್ಷವಾಗಿ ಜಯಮೃತ್ಯುಂಜಯ ಶ್ರೀಗಳ ವಿರುದ್ಧ ವಚನಾನಂದ ಶ್ರೀ ವಾಗ್ದಾಳಿ ನಡೆಸಿದರು.

    ಮುರಗೇಶ್ ನಿರಾಣಿಯವರು ತಮ್ಮ ಸ್ವಾರ್ಥಕ್ಕಾಗಿ ಪೀಠಗಳನ್ನು ಬಳಸಿಲ್ಲ. ನಮ್ಮ ಸಮಾಜದ ನಾಲ್ಕು ಸಾವಿರಕ್ಕೂ ಹೆಚ್ಚು ಜನರಿಗೆ ಉದ್ಯೋಗ ನೀಡಿದ್ದಾರೆ. ಸುಖಾಸುಮ್ಮನೆ ನಿರಾಣಿಯವರ ಮೇಲೆ ಆರೋಪ ಸರಿಯಲ್ಲ. ಇನ್ನು ಪಾದಯಾತ್ರೆ ಹೋರಾಟ ಮಾಡಿದ್ದೇವೆ ಅಂತ ಪದೇ ಪದೇ ನಾವು ಹೇಳಿಲ್ಲ. ನಾವು ಈಗಾಗಲೇ ಮೀಸಲಾತಿ ಬಗ್ಗೆ ನ್ಯಾಯಬದ್ದವಾಗಿ ಹೋರಾಟ ಮಾಡುತ್ತಿದ್ದೇವೆ. ಸಮಾಜಕ್ಕೋಸ್ಕರ ಹೋರಾಟ ಮಾಡುವುದು ಅವರ ಕರ್ತವ್ಯ ಎಂದು ಕಿಡಿಕಾರಿದರು.

    ಸುತ್ತು ಕಟ್ಟು ಸಮಾಜ ಎನ್ನುವ ಸಂದೇಶದಿಂದ ಎಲ್ಲಾರೂ ಸೇರಿ ಸಮಾಜ ಸಂಘಟನೆ ಮಾಡುತ್ತೇವೆ. ಒಕ್ಕೂಟು ಕೇಳಿದ್ದಕ್ಕೆ ನಮ್ಮ ಸಂಪೂರ್ಣ ಬೆಂಬಲವನ್ನು ನೀಡಿದ್ದೇವೆ ಎಂದು ಹೇಳಿದರು.

    ಸಮಾಜದ ಹಿರಿಯ ಮುಖಂಡ ಬಸವರಾಜ್ ದಿಂಡೂರು ಮಾತನಾಡಿ, ಮಾಜಿ ಶಾಸಕ ವಿಜಯಾನಂದ ಕಾಶಪ್ಪನವರು ಪಂಚಮಸಾಲಿ ಸಂಘ 20 ಕೋಟಿ ಹಣವನ್ನು ದುರುಪಯೋಗ ಮಾಡಿಕೊಂಡಿದೆ ಎಂದು ಹೇಳುತ್ತಿದ್ದಾರೆ ಅವರಿಗೆ ತಾಕ್ಕತ್ತು ಇದ್ದರೆ ಅದನ್ನು ಸಾಭೀತ ಮಾಡಲಿ. 2030ರ ಇಸವಿ ಒಳಗೆ ನಾಡಿನಲ್ಲಿ 15 ಮಠಗಳು ಸ್ಥಾಪನೆಯಾಗಲಿವೆ. ಜನರ ಭಕ್ತಿ ಭಾವನೆಗೆ ಮೂರನೇ ಮಠ ಸ್ಥಾಪನೆಯಾಗುವುದು ಬೇಡ ಎನ್ನುವುದಕ್ಕೆ ನಾವ್ಯಾರು. ಮಠಗಳು ಹೆಚ್ಚಾಗುವುದರಿಂದ ನಮ್ಮ ಸಮಾಜ ಸಧೃಡವಾಗಲಿದೆ ಎಂದು ಹೇಳಿದರು.

    ಪಂಚಮಸಾಲಿ ಸಂಘದ ರಾಜ್ಯ ಕಾರ್ಯಾಧ್ಯಕ್ಷ ಸೋಮನಗೌಡ ಪಾಟೀಲ್ ಮಾತನಾಡಿ, ಮುರುಗಾ ಶ್ರೀಗಳ ಕುತಂತ್ರದಿಂದ ರಾಜ್ಯದಲ್ಲಿ ಕೂಡಲ ಸಂಗಮ ಮಠ ಸ್ಥಾಪನೆಯಾಯಿತು. ಆ ಸಂದರ್ಭದಲ್ಲಿ ಜಯಮೃತ್ಯುಂಜಯ ಶ್ರೀಗಳನ್ನು ಪೀಠಾಧಿಪತಿ ಮಾಡಲು ಸೂಚಿಸುವಂತೆ ನನಗೆ ೯೦ ಎಕ್ಕರೆ ಜಮೀನನ್ನು ಆಮಿಷವಾಗಿ ಹೊಡ್ಡಿದ್ದರು. ನಾನು ಅದಕ್ಕೆ ಮನ್ನಣೆ ನೀಡಲಿಲ್ಲ. ಮೀಸಲಾತಿ ಹೋರಾಟ 1996 ರಲ್ಲಿಯೇ ಪ್ರಾರಂಭವಾಯಿತು. ಅನೇಕ ಹೋರಾಟಗಳನ್ನು ಅಂದಿನ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿತ್ತು ಎಂದು ಹೇಳಿದರು.  ಈ ವೇಳೆ ಧರ್ಮದರ್ಶಿ ಚಂದ್ರಶೇಖರ್ ಪೂಜಾರ್ ಹಾಗೂ ಮತ್ತಿತರರಿದ್ದರು.

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಮಂಡ್ಯ: ಮಾಜಿ ಶಾಸಕ ಡಾ.ಅನ್ನದಾನಿ ವಿರುದ್ಧ ಅಕ್ರಮ ಸಂಬಂಧದ ಗಂಭೀರ ಆರೋಪ; ಕುಮಾರಸ್ವಾಮಿ ಕಾಲಿಗೆ ಬಿದ್ದು ಪತಿಯ ಗೋಳಾಟ!

    April 7, 2026

    ‘ಪೆಟ್ರೋಲ್‌ ಗೆ ಬದಲಾಯಿಸಿಕೊಳ್ಳಿ’: ಆಟೋ LPG ಸಮಸ್ಯೆಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸಲಹೆ

    April 7, 2026

    ಶಿವಣ್ಣನ ಜೊತೆ ಮದುವೆ; ಹರಿದಾಡುತ್ತಿರುವ ಸುಳ್ಳು ಸುದ್ದಿಗೆ ನಟಿ ಸುಧಾರಾಣಿ ಆಕ್ರೋಶ!

    April 7, 2026

    Leave A Reply Cancel Reply

    Our Picks

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026

    ದಾಖಲೆ ಬರೆದ ನರೇಂದ್ರ ಮೋದಿ: ಮುಖ್ಯಮಂತ್ರಿ, ಪ್ರಧಾನಿಯಾಗಿ ದೀರ್ಘಾವಧಿ ಆಡಳಿತ ನಡೆಸಿದ ನಾಯಕ

    March 23, 2026

    ದೇವೇಗೌಡರು ಹಾಗೂ ಕುಮಾರಸ್ವಾಮಿಯವರಿಗೆ ವಿಶಾಲ ಹೃದಯವಿರಲಿಲ್ಲ: ಡಿ.ಕೆ.ಶಿವಕುಮಾರ್ ವಾಗ್ದಾಳಿ

    March 20, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಮಂಡ್ಯ: ಮಾಜಿ ಶಾಸಕ ಡಾ.ಅನ್ನದಾನಿ ವಿರುದ್ಧ ಅಕ್ರಮ ಸಂಬಂಧದ ಗಂಭೀರ ಆರೋಪ; ಕುಮಾರಸ್ವಾಮಿ ಕಾಲಿಗೆ ಬಿದ್ದು ಪತಿಯ ಗೋಳಾಟ!

    April 7, 2026

    ಮಂಡ್ಯ: ಮಳವಳ್ಳಿಯ ಜೆಡಿಎಸ್ ಮಾಜಿ ಶಾಸಕ ಡಾ. ಕೆ. ಅನ್ನದಾನಿ ಅವರ ವಿರುದ್ಧ ಅಕ್ರಮ ಸಂಬಂಧದ ಗಂಭೀರ ಆರೋಪವೊಂದು ಕೇಳಿಬಂದಿದೆ.…

    ‘ಪೆಟ್ರೋಲ್‌ ಗೆ ಬದಲಾಯಿಸಿಕೊಳ್ಳಿ’: ಆಟೋ LPG ಸಮಸ್ಯೆಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸಲಹೆ

    April 7, 2026

    ಶಿವಣ್ಣನ ಜೊತೆ ಮದುವೆ; ಹರಿದಾಡುತ್ತಿರುವ ಸುಳ್ಳು ಸುದ್ದಿಗೆ ನಟಿ ಸುಧಾರಾಣಿ ಆಕ್ರೋಶ!

    April 7, 2026

    ಸರ್ಕಾರಿ ಶಾಲಾ ಶಿಕ್ಷಕಿಯ ಭೀಕರ ಕೊಲೆ; ಮಾರಕಾಸ್ತ್ರಗಳಿಂದ ಕೊಚ್ಚಿ ಶವಕ್ಕೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು

    April 7, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.