ಬೆಳಗಾವಿ: ಬೆಳಗಾವಿಯಲ್ಲಿ ಮಹಾತ್ಮ ಗಾಂಧೀಜಿಯವರ ಅಧ್ಯಕ್ಷತೆಯಲ್ಲಿ 1924ರಲ್ಲಿ ನಡೆದ “ಕಾಂಗ್ರೆಸ್ ಅಧಿವೇಶನ” ದ ಶತಮಾನೋತ್ಸವ ಆಚರಣೆಯ ಪೂರ್ವಸಿದ್ಧತೆಗಾಗಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಸೋಮವಾರ(ಡಿ.9) ಬೆಳಗಾವಿಯ ಪೀರನವಾಡಿಯಲ್ಲಿರುವ ಗಾಂಧಿ ಭವನವಕ್ಕೆ ಭೇಟಿ ನೀಡಿ ಸ್ಥಳ ಪರಿಶೀಲಿಸಿದರು.
ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ್ ಜಾರಕಿಹೊಳಿ, ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್, ಶಾಸಕರಾದ ಆಸಿಫ್(ರಾಜು) ಸೇಠ್, ಮಾಜಿ ಶಾಸಕರಾದ ಅಂಜಲಿ ನಿಂಬಳ್ಕರ್, ಗ್ಯಾರಂಟಿ ಯೋಜನೆಗಳ ಜಿಲ್ಲಾ ಅನುಷ್ಠಾನ ಸಮಿತಿಯ ಅಧ್ಯಕ್ಷ ವಿನಯ ನಾವಲಗಟ್ಟಿ, ಬುಡಾ ಅಧ್ಯಕ್ಷ ಲಕ್ಷ್ಮಣರಾವ್ ಚಿಂಗಳೆ ಮತ್ತಿತರರು ಉಪಸ್ಥಿತರಿದ್ದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx