ತುಮಕೂರು: ಸ್ಲಂ ಜನಾಂದೋಲನ ಕರ್ನಾಟಕ ಸಂಘಟನೆ ಮತ್ತು ತುಮಕೂರು ಜಿಲ್ಲಾ ಕೊಳಗೇರಿ ನಿವಾಸಿಗಳ ಹಿತರಕ್ಷಣಾ ಸಮಿತಿಯಿಂದ ಇಂದು ನಗರದ ಸ್ಲಂ ಭವನದಲ್ಲಿ ಪತ್ರಿಕಾ ಗೋಷ್ಠಿಯನ್ನು ಕರೆಯಲಾಗಿತ್ತು.
ಪತ್ರಿಕಾ ಗೋಷ್ಠಿಯನ್ನು ಉದ್ದೇಶಿಸಿ ಸ್ಲಂ ಜನಾಂದೋಲನ ಕರ್ನಾಟಕ ರಾಜ್ಯ ಸಂಚಾಲಕರಾದ ಎ.ನರಸಿಂಹಮೂರ್ತಿ ಮಾತನಾಡಿದರು.
2023ರ ಕಾಂಗ್ರೆಸ್ ಪಕ್ಷದ ಪ್ರಣಾಳಿಕೆಯಲ್ಲಿ ಸ್ಲಂ ಜನರಿಗೆ ನೀಡಿರುವ ಭರವಸೆಗಳನ್ನು ಜ್ಞಾಪಿಸಲು ಮತ್ತು ನಗರಗಳಲ್ಲಿ ದಮನಕ್ಕೊಳಗಾದ ವಂಚಿತ ಸಮುದಾಯಗಳಿಗೆ ಸಾಮಾಜಿಕ ನ್ಯಾಯ ಆಗ್ರಹಿಸಿ, ಸ್ಲಂ ನಿವಾಸಿಗಳ ನಿರ್ಲಕ್ಷ್ಯ ಖಂಡಿಸಿ ಹಾಗೂ ವಿವಿಧ ಹಕ್ಕೋತ್ತಾಯಗಳ ಈಡೇರಿಕೆಗಾಗಿ ಡಿಸೆಂಬರ್ 13 ರಂದು ಬೆಳಗಾವಿಯ ಚಳಿಗಾಲದ ಅಧಿವೇಶನದಲ್ಲಿ ಸರ್ಕಾರದ ಗಮನ ಸೆಳೆಯಲು ರಾಜ್ಯದ ವಿವಿಧ ಜಿಲ್ಲೆಗಳಿಂದ ಸಾವಿರಾರೂ ಸಂಖ್ಯೆಯಲ್ಲಿ ಸಂಘಟನೆಯ ಕಾರ್ಯಕರ್ತರು ಪ್ರತಿಭಟನೆ ಮಾಡಿ ಸರ್ಕಾರವನ್ನು ಎಚ್ಚಗೊಳಿಸಲು ತೀರ್ಮಾನಿಸಲಾಗಿದೆ ಎಂದು ಅವರು ಹೇಳಿದರು.
ಈಗಾಗಲೇ ಸ್ಲಂ ನಿವಾಸಿಗಳನ್ನು ನಿರ್ಲಕ್ಷ್ಯತೆಯಿಂದ ರಾಜ್ಯ ಸರ್ಕಾರ ನೋಡುತ್ತಿದ್ದು, 2024–2025ನೇ ಸಾಲಿನ ಬಜೆಟ್ ನಲ್ಲಿ ಬರಿ 30 ಕೋಟಿಗಳನ್ನು ಸ್ಲಂಗಳ ಅಭಿವೃದ್ಧಿಗೆ ನೀಡಿರುವುದು ನಗರ ವಂಚಿತ ಸಮುದಾಯಗಳನ್ನು ಅಪಮಾನಿಸಿದಂತಾಗಿದೆ. ಸಾಮಾಜಿಕ ನ್ಯಾಯ ಸರ್ಕಾರದ ಧ್ಯೇಯವಾದರು ಸ್ಲಂ ಜನರನ್ನು ಒಂದು ಸಮುದಾಯವಾಗಿ ಗುರುತಿಸುವಲ್ಲಿ ವಿಫಲವಾಗಿದೆ ಎಂದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx