ತುಮಕೂರು: ನಗರದ ಶ್ರೀ ಸಿದ್ಧಾರ್ಥ ಪ್ರಥಮ ದರ್ಜೆ ಕಾಲೇಜಿನ ಹೆಚ್.ಎಂ.ಗಂಗಾಧರಯ್ಯ ಸಭಾಂಗಣದಲ್ಲಿ MSYER, IQAC ಹಾಗೂ ಮನೋವಿಜ್ಞಾನ ವಿಭಾಗಯಿಂದ ಶಕ್ತಿಶಾಲಿ ವ್ಯಕ್ತಿತ್ವ ನಿರ್ಮಾಣದ ಬಗ್ಗೆ ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ಮಂಗಳವಾರದಂದು ಮಾಡಲಾಯಿತು.
ಕಾರ್ಯಕ್ರಮಕ್ಕೆ ತುಮಕೂರಿನ ಶ್ರೀ ರಾಮಕೃಷ್ಣ ವಿವಕಾನಂದ ಆಶ್ರಮದ ಪರಮಪೂಜ್ಯ ಶ್ರೀ ಸ್ವಾಮಿ ದೀರಾನಂದಾಜೀ ಅವರು, ವಿದ್ಯಾರ್ಥಿ ದೆಸೆಯಿಂದಲೇ ಸ್ವಾಮಿ ವಿವೇಕಾನಂದರ ಪುಸ್ತಕಗಳನ್ನು ಹೆಚ್ಚು ಹೆಚ್ಚು ಓದುವುದರ ಮೂಲಕ ಶಕ್ತಿಶಾಲಿ ವ್ಯಕ್ತಿತ್ವವನ್ನು ರೂಪಿಸಿಕೊಳ್ಳಬಹುದು. ಜೊತೆಗೆ ನಮ್ಮ ತಂದೆ ತಾಯಿಗಳಿಗೆ ಗುರು ಹಿರಿಯರಿಗೆ ಗೌರವವನ್ನು ನೀಡಬೇಕು ಎಂದು ತಿಳಿಸಿದರು.
ಕಾರ್ಯಕ್ರಮ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ.ಪಿ.ಹೇಮಲತಾ ಅವರು ಮಾತನಾಡಿದರು.
ಇದೇ ಸಂದರ್ಭದಲ್ಲಿ MSYER ಸಂಚಾಲಕರು ಹಾಗೂ ಸಸ್ಯಶಾಸ್ತ್ರ ವಿಭಾಗದ ಮುಖ್ಯಸ್ಥರಾದ ದಾಕ್ಷಾಯಿಣಿ, ಮನೋವಿಜ್ಞಾನ ವಿಭಾಗದ ಮುಖ್ಯಸ್ಥರಾದ ಶಿಲ್ಪಾಶ್ರೀ ಜಿ.ಸಿ., ಎಲ್ಲಾ ವಿಭಾಗದ ಮುಖ್ಯಸ್ಥರು, ಸಹಾಯಕ ಪ್ರಾಧ್ಯಾಪಕರು ಹಾಗೂ ವಿದ್ಯಾರ್ಥಿಗಳು ಹಾಜರಾಗಿದ್ದರು.
ವರದಿ: ನಂದೀಶ್ ನಾಯ್ಕ ಪಿ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx


