nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುಮಕೂರು |  ಬೇಗೂರು ಡೇರಿ ಸೂಪರ್ ಸೀಡ್: ಪ್ರತಿಭಟನೆ

    October 4, 2025

    ದೇಶಕ್ಕೆ ಅನ್ನ ನೀಡುವ ರೈತನ ಯಾರು ಕೂಡ ಮರೆಯಬಾರದು: ವೀರಬಸವ ಮಹಾಸ್ವಾಮಿ

    October 4, 2025

    ನಕ್ಷತ್ರಗಳ ಬೆಳಕ ಹೊರತಾಗಿಯೂ ರಾತ್ರಿ ಆಕಾಶ ಕಪ್ಪೇಕೆ ?

    October 4, 2025
    Facebook Twitter Instagram
    ಟ್ರೆಂಡಿಂಗ್
    • ತುಮಕೂರು |  ಬೇಗೂರು ಡೇರಿ ಸೂಪರ್ ಸೀಡ್: ಪ್ರತಿಭಟನೆ
    • ದೇಶಕ್ಕೆ ಅನ್ನ ನೀಡುವ ರೈತನ ಯಾರು ಕೂಡ ಮರೆಯಬಾರದು: ವೀರಬಸವ ಮಹಾಸ್ವಾಮಿ
    • ನಕ್ಷತ್ರಗಳ ಬೆಳಕ ಹೊರತಾಗಿಯೂ ರಾತ್ರಿ ಆಕಾಶ ಕಪ್ಪೇಕೆ ?
    • ಜನ ಅಲೆಯುವುದನ್ನು ತಪ್ಪಿಸಲು ಪ್ರಜಾಸೌಧ: ಅನಿಲ್ ಚಿಕ್ಕಮಾದು
    • ಬೆಳಕುಣಿ ಚೌದ್ರಿ ಗ್ರಾಮದಲ್ಲಿ ಭವಾನಿ ಮಾತಾ ದೇವಿ ಮೆರವಣಿಗೆ
    • ಪಾವಗಡ | ಕೆ.ಟಿ.ಹಳ್ಳಿ ಗ್ರಾಮದಲ್ಲಿ ಕೆಂಪೇಗೌಡರ ಪುತ್ಥಳಿ ಅನಾವರಣ
    • ತಿಮ್ಮಾಪುರದಲ್ಲಿ ಶ್ರೀ ಬಾಲಾಜಿ ಮಠ ಪ್ರತಿಷ್ಠಾಪನೆ:  ನಾದಾಬ್ರಹ್ಮ ಯೋಗದಿಂದ ಆರೋಗ್ಯ ಕ್ಷೇಮದ ಸಂದೇಶ
    • ವೈ.ಎನ್.ಹೊಸಕೋಟೆ | ಕಸ್ತೂರಿ ತಿಲಕ ವಂಶಜರ ಜಂಬೂಸವಾರಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ರಾಮಾಯಣ ಮರುಹುಟ್ಟುಗಳ ಮಹಾಕಾವ್ಯ: ಪ್ರೊ. ಬರಗೂರು ರಾಮಚಂದ್ರಪ್ಪ
    ತುಮಕೂರು December 11, 2024

    ರಾಮಾಯಣ ಮರುಹುಟ್ಟುಗಳ ಮಹಾಕಾವ್ಯ: ಪ್ರೊ. ಬರಗೂರು ರಾಮಚಂದ್ರಪ್ಪ

    By adminDecember 11, 2024No Comments2 Mins Read
    bargur ramachandra

    ತುಮಕೂರು:ಮಾನಸಿಕ ಏಕತೆಯತತ್ವವದಿಂದ ರಾಮಾಯಣ ಮಹಾಕಾವ್ಯ ವಿಶ್ವಕಥನವಾಯಿತು. ಇವತ್ತಿಗೆ ಬೇಕಾದ ರಾಜಕೀಯ ನೈತಿಕತೆಯ ಪಾಠವನ್ನು, ಜೀವನ ಮೌಲ್ಯವನ್ನು ರಾಮಾಯಣ ಸಾರುವುದರಿಂದ ‘ರಾಮಾಯಣ ಮರುಹುಟ್ಟುಗಳ ಮಹಾಕಾವ್ಯ’ವಾಗಿ ನಮಗೆಲ್ಲಕಾಣುತ್ತದೆ ಎಂದು ಹಿರಿಯ ಸಾಹಿತಿ ಪ್ರೊ.ಬರಗೂರು ರಾಮಚಂದ್ರಪ್ಪ ಹೇಳಿದರು.

    ತುಮಕೂರು ವಿಶ್ವವಿದ್ಯಾನಿಲಯ ಸ್ನಾತಕೋತ್ತರ ಇಂಗ್ಲಿಷ್ ಸಾಹಿತ್ಯ ಅಧ್ಯಯನ ವಿಭಾಗ ಹಾಗೂ ಡಿವಿಜಿ ಕನ್ನಡಅಧ್ಯಯನಕೇಂದ್ರವು ಜಂಟಿಯಾಗಿ ಹಮ್ಮಿಕೊಂಡಿರುವ‘ರಾಮಾಯಣಂಗಳ್: ರಾಮಾಯಣವನ್ನು ಅರ್ಥಮಾಡಿಕೊಳ್ಳುವ ಬಗೆ’ ಎಂಬ ಪರಿಕಲ್ಪನೆಯ ಎರಡು ದಿನಗಳ ‘ಸಹಿತ-2’ ಸಾಹಿತ್ಯೋತ್ಸವಕ್ಕೆ ಮಂಗಳವಾರ ಚಾಲನೆ ನೀಡಿ ಮಾತನಾಡಿದರು.


    Provided by
    Provided by
    Provided by

    ಅಧಿಕಾರಕ್ಕೇರಲುರಾಮನ ಹೆಸರನ್ನು ಬಳಸುತ್ತಿರುವ ಸಂದರ್ಭವಿದು. ರಾಮಾಯಣ ಗರ್ಭಗುಡಿಯ ಕಾವ್ಯವೆಂಬ ತಪ್ಪುಗ್ರಹಿಕೆ ಮಾಯವಾಗಬೇಕು. ಮಹಾಕಾವ್ಯಗಳು ರಾಜಕೀಯ ಅಸ್ತ್ರವಾದಾಗ ಅದರ ಅಸ್ಮಿತೆ ನಾಶವಾಗುತ್ತದೆ. ರಾಮಾಯಣ ಅಧ್ಯಯನಶೀಲ ಕಾವ್ಯವಾಗಿ ವಾಸ್ತವತೆ ಮತ್ತುಕಲ್ಪಿತ ಕಥೆಗಳ ಸಮನ್ವಯವಾಗಿದೆ.

    ಆತ್ಮಸ್ಥೈರ್ಯದ ಮಹಾಕಾವ್ಯ ರಾಮಾಯಣದಲ್ಲಿ ಹತಾಶೆಯಿಲ್ಲ. ಸಾಂಸ್ಕೃತಿಕ ಘಟಕಗಳನ್ನು, ಸಂಸ್ಕೃತಿಯ ಚಲನಶೀಲತೆ, ಅಧಿಕಾರ—ಭೋಗದ ನಿರಸನದ ಸ್ಥಿತ್ಯಂತರಗಳನ್ನು ಕಾಣಬಹುದು ಎಂದು ತಿಳಿಸಿದರು.

    ಸಮಕಾಲೀನ ಸಂದರ್ಭದಲ್ಲಿರುವ ಪ್ರಸ್ತುತತೆಯಿಂದ ರಾಮಾಯಣದ ಕಥನವನ್ನು ಇಂದಿಗೂ ಚರ್ಚಿಸುತ್ತೇವೆ. ರಾಮಾಯಣ ಮನುಷ್ಯನಲ್ಲಿಅಂತರ್ಗತವಾಗಿ ‘ಮನೆ ಮನೆರಾಮಾಯಣ’ವಾಗಿದೆ. ಜನಸಮುದಾಯದಿಂದ ಜನಪದ ರಾಮಾಯಣ ಉಗಮವಾಯಿತು. ಸಮಾಜದಿಂದ ಗ್ರಹಿಸಿದ ವಸ್ತುವನ್ನು ಆಧಾರವಾಗಿರಿಸಿಕೊಂಡು ಕವಿಗಳು, ವಿದ್ವಾಂಸರು ರಾಮಾಯಣ ಕಾವ್ಯಗಳನ್ನು, ಕಥನಗಳನ್ನು ರಚಿಸಿದರು. ಹೀಗೆ ರಾಮಾಯಣವು ಕಾಲದಿಂದ ಕಾಲಕ್ಕೆ ಮರುಹುಟ್ಟು ಪಡೆಯುತ್ತಿದೆ ಎಂದು ಹೇಳಿದರು.
    ಪಾತ್ರ–ಸನ್ನಿವೇಶಗಳು ಹೊರಡಿಸುವ ಧ್ವನಿಯಿಂದ ರಾಮಾಯಣ ಕೃತಿಯನ್ನು ಅರ್ಥ ಮಾಡಿಕೊಳ್ಳಬೇಕು. ಉದಾಹರಣೆಗೆ, ಕುವೆಂಪು ಅವರ ಶ್ರೀ ರಾಮಾಯಣ ದರ್ಶನಂ ಕಾವ್ಯದಲ್ಲಿ ರಾವಣನ ಒಳಗೆ ರಾಮತ್ವವನ್ನು ಕಾಣಬಹುದು. ಸಾಹಿತ್ಯ, ಸಾಮಾಜಿಕ, ಸಾಂಸ್ಕೃತಿಕ ಹಾಗೂ ರಾಜಕೀಯ ನೆಲೆಯಿಂದ ರಾಮಾಯಣವನ್ನು ನೋಡಬಹುದು.

    ಸಮಾಜಶಾಸ್ತ್ರ, ಮಾನವಶಾಸ್ತ್ರ ದೃಷ್ಟಿಯಿಂದ ಅಧ್ಯಯನ ನಡೆಸಬಹುದು ಎಂದರು.
    ರಾಮಾಯಣಕ್ಕೆ ಸಕಾರಾತ್ಮಕ ನೆಲೆಯಿರುವ ಹಾಗೆ ಅನುಚಿತವಾದ ವ್ಯಾಖ್ಯಾನಗಳೂ ಇವೆ. ಆದ್ದರಿಂದ ನೈಜರಾಮಾಯಣವನ್ನು ಹುಡುಕುವ ಪರಿಸ್ಥಿತಿ ಉಂಟಾಗಿದೆ. ಭೌಗೋಳಿಕ ಪ್ರದೇಶಗಳಿಗೆ ಅನುಗುಣವಾಗಿ ರಾಮಾಯಣ ಸೃಷ್ಟಿಯಾಗಿದೆ. ಚಾರಿತ್ರಿಕ ಸಂದರ್ಭ ಹಾಗೂ ಸಮಕಾಲೀನ ವಿವೇಕದ ನೆಲೆಯ ಅನುಸಂಧಾನದಲ್ಲಿ ರಾಮಾಯಣ ಕಾವ್ಯವನ್ನು ತಿಳಿಯಬೇಕು ಎಂದು ತಿಳಿಸಿದರು.

    ಕುಲಪತಿ ಪ್ರೊ.ಎಂ.ವೆಂಕಟೇಶ್ವರಲು ಮಾತನಾಡಿ, ಸಂಶೋಧನೆಗಳ ಮೂಲಕ ಹೊಸ ವಿಷಯಗಳನ್ನು ಸಮಾಜಕ್ಕೆ ತಲುಪಿಸಬೇಕು ಎಂದರು.

    ‘ಸಹಿತ-2’ ಸಾಹಿತ್ಯೋತ್ಸವದ ಸಂಘಟಕರಾದ ಪ್ರೊ.ನಿತ್ಯಾನಂದ ಬಿ.ಶೆಟ್ಟಿ ಪ್ರಾಸ್ತಾವಿಕ ನುಡಿಗಳನ್ನಾಡಿ, ರಾಮಾಯಣ ಭಕ್ತಿಯ, ಆರಾಧನೆಯ ವಿಷಯವಲ್ಲ. ಈ ಮಹಾಕಾವ್ಯ ಅಧ್ಯಯನದ, ಕುತೂಹಲದ, ಅನ್ವೇಷಣೆಯ, ಸಾಹಿತ್ಯ–ಸಂಸ್ಕೃತಿಯ ನೆಲೆಯಲ್ಲಿ ಹಲವಾರು ಸವಾಲುಗಳನ್ನು ಹಾಕುವ, ಪ್ರಶ್ನೆಗಳನ್ನು ಕೇಳುವ, ಧರ್ಮ, ಜಾತಿ, ಭೌಗೋಳಿಕ ಗಡಿದಾಟಿದ ಪಠ್ಯವಾಗಿದೆ, ವಿಷಯವಾಗಿದೆ ಎಂದು ಹೇಳಿದರು.

    ಮೊದಲ ದಿನದ ಸಾಹಿತ್ಯೋತ್ಸವದಲ್ಲಿ ಕಲ್ಬುರ್ಗಿಯ ಕೇಂದ್ರೀಯ ವಿಶ್ವವಿದ್ಯಾನಿಲಯದ ಪ್ರಾಧ್ಯಾಪಕ ಡಾ.ಬಸವರಾಜಕೊಡಗಂಟಿ ‘ಕನ್ನಡದಜೈನ ರಾಮಾಯಣಗಳು: ಕಾಲ-ನೆಲದೊಂದಿಗಿನ ಅನುಸಂಧಾನ’ ಕುರಿತು, ಬೆಂಗಳೂರಿನ ಅಜೀಮ್ ಪ್ರೇಮ್ ಜಿ ವಿಶ್ವವಿದ್ಯಾನಿಲಯದ ಕನ್ನಡ ವಿಭಾಗದ ಪ್ರಾಧ್ಯಾಪಕ ಡಾ.ಮಹೇಶ್ ಕುಮಾರ್ ಸಿ.ಎಸ್. ‘ಮೂರು ಸಾವಿರರಾಮಾಯಣ: ಏಕಿಷ್ಟು? ಬೌದ್ಧರಾಮಾಯಣದ ನೆವದಲ್ಲಿಒಂದುಚಿಂತನೆ’ ಕುರಿತು ಮಾತನಾಡಿದರು. ನೀನಾಸಂ ರಂಗನಿರ್ದೇಶಕ ಮಂಜು ಕೊಡಗು ನಿರ್ದೇಶನದ ಕುವೆಂಪು ಅವರ ಶ್ರೀ ರಾಮಾಯಣದರ್ಶನಂಕಾವ್ಯದ ‘ದಶಾನನ ಸ್ವಪ್ನ ಸಿದ್ಧಿ’ ನಾಟಕ ಪ್ರಸ್ತುತಪಡಿಸಲಾಯಿತು. ಸಹ ಪ್ರಾಧ್ಯಾಪಕ ಡಾ.ಕಿರಣ್ಎಸ್.ಎನ್. ಹಾಗೂ ಹಿರಿಯ ಪ್ರಾಧ್ಯಾಪಕಿ ಪ್ರೊ.ಅಣ್ಣಮ್ಮ ಕಲಾಪ-ಸಂವಾದ ನಡೆಸಿಕೊಟ್ಟರು.

    ಕುಲಸಚಿವೆ ನಾಹಿದಾ ಜಮ್ ಜಮ್, ‘ಸಹಿತ–2’ ಸಾಹಿತ್ಯೋತ್ಸವದ ಸಂಘಟಕರಾದ ಪ್ರೊ.ಎಚ್.ಕೆ.ಶಿವಲಿಂಗಸ್ವಾಮಿ ಉಪಸ್ಥಿತರಿದ್ದರು. ಸಹ ಪ್ರಾಧ್ಯಾಪಕಿ ಡಾ.ಗೀತಾ ವಸಂತ ನಿರೂಪಿಸಿದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

     

    admin
    • Website

    Related Posts

    ತುಮಕೂರು |  ಬೇಗೂರು ಡೇರಿ ಸೂಪರ್ ಸೀಡ್: ಪ್ರತಿಭಟನೆ

    October 4, 2025

    ತುಮಕೂರು | ಸಮೀಕ್ಷೆಗೆ ತೆರಳಿದ್ದ ಶಿಕ್ಷಕಿಗೆ ಮುಸ್ಲಿಂ ಎಂಬ ಕಾರಣಕ್ಕೆ ಅವಮಾನ!

    October 4, 2025

    ತುರ್ತು ಪರಿಸ್ಥಿತಿಯಲ್ಲಿ ಸ್ವಯಂ ಸೇವಕರ ಬಲಿದಾನ ಮರೆಯಬಾರದು: ಆರ್ ಎಸ್ ಎಸ್ ಮುಖಂಡ ಉಮೇಶ್‌

    October 3, 2025

    Comments are closed.

    Our Picks

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025

    ಸರ್ಕಾರಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇಲಿ ಕಚ್ಚಿ ನವಜಾತ ಶಿಶು ಸಾವು!

    September 4, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ತುಮಕೂರು |  ಬೇಗೂರು ಡೇರಿ ಸೂಪರ್ ಸೀಡ್: ಪ್ರತಿಭಟನೆ

    October 4, 2025

    ತುಮಕೂರು: ಸಕಾರಣವಿಲ್ಲದೆ ಡೇರಿ ಆಡಳಿತ ಮಂಡಳಿ ವಜಾ ಮಾಡಿರುವುದನ್ನು ವಿರೋಧಿಸಿ ಕುಣಿಗಲ್ ತಾಲ್ಲೂಕು ಬೇಗೂರು ಹಾಲು ಉತ್ಪಾದಕರ ಸಹಕಾರ ಸಂಘದ…

    ದೇಶಕ್ಕೆ ಅನ್ನ ನೀಡುವ ರೈತನ ಯಾರು ಕೂಡ ಮರೆಯಬಾರದು: ವೀರಬಸವ ಮಹಾಸ್ವಾಮಿ

    October 4, 2025

    ನಕ್ಷತ್ರಗಳ ಬೆಳಕ ಹೊರತಾಗಿಯೂ ರಾತ್ರಿ ಆಕಾಶ ಕಪ್ಪೇಕೆ ?

    October 4, 2025

    ಜನ ಅಲೆಯುವುದನ್ನು ತಪ್ಪಿಸಲು ಪ್ರಜಾಸೌಧ: ಅನಿಲ್ ಚಿಕ್ಕಮಾದು

    October 4, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.