ಬೆಂಗಳೂರು: ಪಂಚಮಸಾಲಿ ಲಿಂಗಾಯತ ಸಮುದಾಯವನ್ನು ಹಿಂದುಳಿದ ವರ್ಗ-2ಎಗೆ ಸೇರಿಸಬಾರದು ಎಂದು ಒತ್ತಾಯಿಸಿ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಒಕ್ಕೂಟದ ಮುಖಂಡರು ಹಾಗೂ ಕಾರ್ಯಕರ್ತರು ಸಿಎಂ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿದರು.
ಪಂಚಮಸಾಲಿ ಸಮಾಜದವರನ್ನು 2ಎ ವ್ಯಾಪ್ತಿಗೆ ತರಬೇಕು ಎಂಬ ಅವರ ಬೇಡಿಕೆಯನ್ನು ಯಾವುದೇ ಕಾರಣಕ್ಕೂ ಪರಿಗಣಿಸಬಾರದು. ಇಲ್ಲದಿದ್ದರೆ ರಾಜ್ಯಾದ್ಯಂತ ಹೋರಾಟ ನಡೆಸಬೇಕಾಗುತ್ತದೆ ಎಂದು ಹಿಂದುಳಿದ ವರ್ಗಗಳ ಒಕ್ಕೂಟದ ಮುಖಂಡರು ಸಿದ್ದರಾಮಯ್ಯನವರಿಗೆ ಮನವಿಯಲ್ಲಿ ತಿಳಿಸಿದ್ದಾರೆ.
ಪಂಚಮಸಾಲಿ ಸಮಾಜ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ಹಾಗೂ ರಾಜಕೀಯವಾಗಿ ಬಲಿಷ್ಠ ಸಮುದಾಯವಾಗಿದ್ದು, ಅವರನ್ನು 2ಎ ವ್ಯಾಪ್ತಿಗೆ ತರಬಾರದು ಎಂದು ಒಕ್ಕೂಟದ ಅಧ್ಯಕ್ಷ ಕೆ.ಎಂ.ರಾಮಚಂದ್ರಪ್ಪ ಹಾಗೂ ಪ್ರಧಾನ ಕಾರ್ಯದರ್ಶಿ ಯೆಣ್ಣೆಗೆರೆ ಆರ್.ವೆಂಕಟರಾಮಯ್ಯ ಅವರು ಮುಖ್ಯಮಂತ್ರಿಗಳಿಗೆ ಮನವಿ ಪತ್ರ ಸಲ್ಲಿಸಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx