ಬೆಂಗಳೂರು: ಇಷ್ಟು ದಿನ ಶಾಂತಿಯುತ ಹೋರಾಟ ಆಗಿತ್ತು, ಇನ್ನು ಮೇಲೆ ಹಳ್ಳಿ ಹಳ್ಳಿಯಲ್ಲೂ ಕ್ರಾಂತಿಯುತ ಹೋರಾಟ ಮಾಡುತ್ತೇವೆ ಎಂದು ಬಸವ ಜಯಮೃತ್ಯುಂಜಯ ಸ್ವಾಮೀಜಿ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.
ಬೆಳಗಾವಿಯ ಸುವರ್ಣ ವಿಧಾನಸೌಧದ ಎದುರು ಸೋಮವಾರ ನಡೆದ ಪಂಚಮಸಾಲಿ 2ಎ ಮೀಸಲಾತಿ ಪ್ರತಿಭಟನೆ ವೇಳೆ ಲಾಠಿ ಚಾರ್ಜ್ ನಡೆಸಿದ್ದಕ್ಕೆ ಕೆರಳಿರುವ ಸ್ವಾಮೀಜಿ, ಸಿಎಂ ಸಿದ್ದರಾಮಯ್ಯ ಅನುಮತಿ ಇಲ್ಲದೇ ಲಾಠಿ ಚಾರ್ಜ್ ಆಗಿದ್ದು ಹೇಗೆ? ಹಾಗೆ ಆಗಿದ್ದೇ ನಿಜವಾದರೆ ಕೂಡಲೇ ಆ ಅಧಿಕಾರಿಯನ್ನು ಅಮಾನತು ಮಾಡಿ ಎಂದು ಒತ್ತಾಯಿಸಿದ್ದಾರೆ.
ನಮ್ಮ ಜನ ಇನ್ನಷ್ಟು ಪುಟಿದೇಳುತ್ತಾರೆ, ಅಲ್ಲದೆ, ಇಷ್ಟು ದಿನ ಶಾಂತಿಯುತ ಹೋರಾಟ ಆಗಿತ್ತು, ಇನ್ನು ಮೇಲೆ ಹಳ್ಳಿ ಹಳ್ಳಿಯಲ್ಲೂ ಕ್ರಾಂತಿಯುತ ಹೋರಾಟ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ.
ಈ ಸರ್ಕಾರ ನಮ್ಮ ಸಮುದಾಯದ ಶಾಸಕರನ್ನು ಗುರಿಯಾಗಿಸಿಕೊಂಡು ನಮಗೆ ಮೀಸಲಾತಿ ನೀಡಲು ನಿರಾಕರಿಸಿದರೆ ನಾವು ಬೇರೆ ದಾರಿ ಹಿಡಿಯಬೇಕಾಗುತ್ತದೆ. ಸಮುದಾಯದ ಮೇಲೆ ದಾಳಿ ಮಾಡುವ ಮೂಲಕ ಈ ಸರ್ಕಾರ ಕೆಟ್ಟ ಹೆಸರು ಗಳಿಸುತ್ತಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx