ತಿಪಟೂರು: ತಾಲೂಕಿನ ಕಿಬ್ಬನಹಳ್ಳಿ ಕ್ರಾಸ್ ನಲ್ಲಿರುವ ಶ್ರೀಮದ್ ರಂಭಾಪುರಿ ಪ್ರೌಢಶಾಲೆ ಆವರಣದಲ್ಲಿ ತಿಪಟೂರು ತಾಲೂಕು ಆರನೇ ಕನ್ನಡ ಸಾಹಿತ್ಯ ಸಮ್ಮೇಳನ ಡಿಸೆಂಬರ್ 14ರಂದು ಶನಿವಾರ ನಡೆಯಲಿದ್ದು ಅದಕ್ಕೆ ಎಲ್ಲಾಪೂರ್ವ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಅಧ್ಯಕ್ಷ ಎಂ.ಬಸವರಾಜಪ್ಪ ತಿಳಿಸಿದರು.
ಈ ಕಾರ್ಯಕ್ರಮ ಬೆಳಿಗ್ಗೆ 10:30ಕ್ಕೆ ಆರಂಭವಾಗಲಿದೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಸಕ ಕೆ.ಷಡಕ್ಷರಿ ವಹಿಸಲಿದ್ದು, ಪ್ರಸಿದ್ಧ ಸಾಹಿತಿ ಪ್ರೊಫೆಸರ್ ನಟರಾಜ್ ಬೂದಾಳು ಉದ್ಘಾಟಿಸಲಿದ್ದಾರೆ ಎಂದು ಅವರು ತಿಳಿಸಿದರು.
ಎರಡು ವಿಚಾರಗೋಷ್ಠಿ ಹಾಗೂ ಕವಿಗೋಷ್ಠಿ ಏರ್ಪಡಿಸಲಾಗಿದ್ದು, ಈ ಸಮ್ಮೇಳನದ ಅಧ್ಯಕ್ಷರಾಗಿ ಕೇಂದ್ರ ಸಾಹಿತ್ಯ ಅಕಾಡೆಮಿಯ ಪ್ರಶಸ್ತಿ ಪುರಸ್ಕೃತ ಪ್ರೊಫೆಸರ್ ಕೃಷ್ಣಮೂರ್ತಿ ಬಿಳಿಗೆರೆ ಅವರನ್ನು ಆಯ್ಕೆ ಮಾಡಲಾಗಿದ್ದು, ಇವರಿಂದ ಧ್ವಜಾರೋಹಣ ನೆರವೇರಿಸಲಾಗುವುದು, ಜಾನಪದ ಕಲಾ ತಂಡಗಳೊಂದಿಗೆ ಕಾಲೇಜು ವಿದ್ಯಾರ್ಥಿಗಳು ಕನ್ನಡ ತಾಯಿ ಭುವನೇಶ್ವರಿಯ ಮೆರವಣಿಗೆಯನ್ನು ಹಸಿರು ಸಸ್ಯಗಳೊಂದಿಗೆ ವಿನೂತನವಾಗಿನಡೆಯಲಿದೆ ಎಂದು ತಿಳಿಸಿದರು .
ಈ ಸುದ್ದಿಗೋಷ್ಠಿಯಲ್ಲಿ ತಿಪಟೂರು ತಾಲೂಕಿನ ಕ.ಸಾ.ಪ. ತಾಲೂಕು ಸಮಿತಿ ಪದಾಧಿಕಾರಿಗಳು ಉಪಸ್ಥಿತರಿದ್ದರು.
ವರದಿ: ಆನಂದ ತಿಪಟೂರು
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx