ತುಮಕೂರು: ತುಮಕೂರಿನ ಸಿದ್ದಗಂಗಾ ಮಠದ ಹಳೆಯ ವಿದ್ಯಾರ್ಥಿಗಳಿಂದ ಮತ್ತು ಹಿತೈಷಿಗಳಿಂದ ಕಿಡಿಗೇಡಿಗಳು ದೇಣಿಗೆ ಸಂಗ್ರಹ ಮಾಡಲು ಬಂಜೆತನಕ್ಕೆ ಔಷಧಿ ವಿತರಣೆ ಮಾಡಲು ತಮ್ಮನ್ನು ನಿಯೋಜಿಸಿರುತ್ತಾರೆ ಎಂದು ಸುಳ್ಳು ಹೇಳಿಕೊಂಡು ದೇಣಿಗೆ ಸಂಗ್ರಹ ಮಾಡುತ್ತಿರುವ ಹಾಗೂ ಔಷಧಿ ವಿತರಿಸುತ್ತಿರುವುದು ಬೆಳಕಿಗೆ ಬಂದಿದೆ ಎಂದು ತುಮಕೂರಿನ ಸಿದ್ದಗಂಗಾ ಮಠದ ವತಿಯಿಂದ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಶ್ರೀಮಠದಿಂದ ಬಂಜೆತನಕ್ಕೆ ಔಷಧಿ ವಿತರಣೆ ಮಾಡುವ ಸಲುವಾಗಿ ಅಥವಾ ದೇಣಿಗೆ ಸಂಗ್ರಹ ಮಾಡಲು ಶ್ರೀಮಠದಿಂದ ಯಾವುದೇ ವ್ಯಕ್ತಿಯನ್ನು ನಿಯೋಜಿಸಿರುವುದಿಲ್ಲ ಮತ್ತು ನೇಮಕ ಮಾಡಿರುವುದಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ.
ಈ ವಂಚಕರ ಮಾತಿಗೆ ಮರುಳಾಗಿ ಸಾರ್ವಜನಿಕರು ಮೋಸ ಹೋಗಬಾರದೆಂದು ತಿಳಿಸಲಾಗಿದೆ. ಹಿತೈಷಿಗಳು ದೇಣಿಗೆಯನ್ನು ಸಲ್ಲಿಸುವವರು ಶ್ರೀಮಠಕ್ಕೆ ನೇರವಾಗಿ ದೇಣಿಗೆಯನ್ನು ಅಂಚೆ ಮುಖಾಂತರ ಖಾತೆಗೆ ನೇರವಾಗಿ ಸಲ್ಲಿಸಬಹುದು ಎಂದು ತಿಳಿಸಲಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx