ತುಮಕೂರು: ಸ್ಟೋಟಕವನ್ನ ನೀರಿಗೆ ಎಸೆದು ವಿಡಿಯೋ ಮಾಡಿದ್ದ ಡ್ರೋನ್ ಪ್ರತಾಪ್ ನನ್ನ ತುಮಕೂರು ಜಿಲ್ಲೆ ಮಧುಗಿರಿ ತಾಲೂಕಿ ಮಿಡಿಗೇಶಿ ಪೊಲೀಸರು ಬಂಧಿಸಿದ್ದಾರೆ.
ಸ್ಪೋಟಕ ವಸ್ತುವನ್ನ ನೀರಿಗೆ ಎಸೆದಿದ್ದ ಪ್ರತಾಪ್, ಯೂಟ್ಯೂಬ್ ನಲ್ಲಿ ವಿಡಿಯೋ ಅಪ್ಲೋಡ್ ಮಾಡಿದ್ದ. ಈ ವಿಡಿಯೋ ಆಧರಿಸಿ ಎಫ್ ಐಆರ್ ದಾಖಲಿಸಲಾಗಿದೆ.
ಪ್ರತಾಪ್ ನನ್ನ ಬಂಧಿಸಿ ಪೊಲೀಸರು ವಿಚಾರಣೆ ನಡೆಸ್ತಾ ಇದ್ದಾರೆ. ಬಿಎನ್ಎಸ್ ಕಾಯಿದೆ ಸೆಕ್ಷನ್ 288 ಮತ್ತು ಸ್ಪೋಟಕ ವಸ್ತುಗಳ ಕಾಯಿದೆ ಸೆಕ್ಷನ್ 3 ರ ಅಡಿಯಲ್ಲಿ ಪೊಲೀಸರು ಎಫ್ ಐಆರ್ ದಾಖಲಿಸಿದ್ದಾರೆ. ಡ್ರೋನ್ ಪ್ರತಾಪ್ ನನ್ನು ಪೊಲೀಸರು ತೀವ್ರ ವಿಚಾರಣೆ ಮಾಡುತ್ತಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx