ದಿಂಡಿಗಲ್: ಅಗ್ನಿ ಅವಘಡದಲ್ಲಿ ಮಗು ಸೇರಿದಂತೆ 7 ಮಂದಿ ಸಾವನ್ನಪ್ಪಿರುವ ಘಟನೆ ತಮಿಳುನಾಡಿನ ಖಾಸಗಿ ಆಸ್ಪತ್ರೆಯೊಂದರಲ್ಲಿ ಗುರುವಾರ ನಡೆದಿದೆ.
ತಮಿಳುನಾಡಿನ ದಿಂಡಿಗಲ್-ತಿರುಚಿ ರಸ್ತೆಯಲ್ಲಿರುವ ಖಾಸಗಿ ಸಿಟಿ ಆಸ್ಪತ್ರೆಯಲ್ಲಿ ಈ ದುರಂತ ಸಂಭವಿಸಿದೆ. 1 ಮಗು ಮೂವರು ಪುರುಷರು ಮತ್ತು ಮೂವರು ಮಹಿಳೆಯರು ದುರಂತದಲ್ಲಿ ಸಾವನ್ನಪ್ಪಿದ್ದಾರೆ.
ನಾಲ್ಕು ಅಂತಸ್ತಿನ ಆಸ್ಪತ್ರೆಯ ಲಿಫ್ಟ್ ನಲ್ಲಿ ಕೆಲವು ವ್ಯಕ್ತಿಗಳು ಕೂಡ ಸಿಲುಕಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.
ದುರ್ಘಟನೆಯಲ್ಲಿ ಕನಿಷ್ಠ ಇಬ್ಬರು ವ್ಯಕ್ತಿಗಳು ಸುಟ್ಟು ಕರಕಲಾಗಿದ್ದು, ಇತರ ಮೂವರು ಉಸಿರುಗಟ್ಟಿ ಸತ್ತಿದ್ದಾರೆ. ಆಸ್ಪತ್ರೆಯಲ್ಲಿ ಹರಡಿದ ಬೆಂಕಿಯಲ್ಲಿ ಇನ್ನೂ ಇಬ್ಬರು ಸಾವನ್ನಪ್ಪಿ ಒಟ್ಟಾರೆ 7 ಮಂದಿ ಸಾವಿಗೀಡಾಗಿದ್ದಾರೆ.
ಮೊದಲು ಆಸ್ಪತ್ರೆಯ ರಿಸಿಪ್ಷನ್ ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಶಾರ್ಟ್ ಸರ್ಕ್ಯೂಟ್ ಕಾರಣ ಎಂದು ಶಂಕಿಸಲಾಗಿದೆ. ಬೆಂಕಿಯ ಜ್ವಾಲೆಯು ಇತರ ಮಹಡಿಗಳಿಗೆ ವೇಗವಾಗಿ ಹರಡಿ ಇಡೀ ಕಟ್ಟಡವನ್ನು ಆವರಿಸಿತು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx