ನಟ ದುಲ್ಕರ್ ಸಲ್ಮಾನ್ ಅಭಿನಯದ ಲಕ್ಕಿ ಭಾಸ್ಕರ್ ಸಿನಿಮಾದಿಂದ ಪ್ರೇರೇಪಿತರಾಗಿ ನಾಲ್ವರು ಶಾಲಾ ವಿದ್ಯಾರ್ಥಿಗಳು ಹಾಸ್ಟೆಲ್ ಗೇಟ್ ಹಾರಿ ಪರಾರಿಯಾಗಿರುವ ಘಟನೆ ವಿಶಾಖಪಟ್ಟಣಂನಲ್ಲಿ ನಡೆದಿದೆ.
ಚರಣ್ ತೇಜ, ರಘು, ಕಾರ್ತಿಕ್ ಮತ್ತು ಕಿರಣ್ ಕುಮಾರ್ ಎಂಬ ನಾಲ್ವರು ಹುಡುಗರು ಮಹಾರಾಣಿಪೇಟೆಯ ಹಾಸ್ಟೆಲ್ ನಲ್ಲಿ ವಾಸಿಸುತ್ತಿದ್ದರು. ಇವರೆಲ್ಲರೂ 9ನೇ ತರಗತಿ ವಿದ್ಯಾರ್ಥಿಗಳಾಗಿದ್ದಾರೆ. ಲಕ್ಕಿ ಭಾಸ್ಕರ್ ಸಿನಿಮಾದಲ್ಲಿ ಒಬ್ಬ ಸಾಮಾನ್ಯ ವ್ಯಕ್ತಿಯಾಗಿರುವ ಭಾಸ್ಕರ್ ಗೌರವಯುತ ಬದುಕಿಗಾಗಿ ಹಣ ಮಾಡುವಂತೆಯೇ ತಾವೂ ಹಣ ಮಾಡುತ್ತೇವೆ. ಇನ್ನು ಇಲ್ಲೇ ಕುಳಿತರೇ ಜೀವನದಲ್ಲಿ ಯಶಸ್ಸು ಸಾಧ್ಯವಿಲ್ಲ ಎಂದು ಮಾತನಾಡಿಕೊಂಡು ಹಾಸ್ಟೆಲ್ ನ ಗೇಟ್ ಹಾರಿ ಎಸ್ಕೇಪ್ ಆಗಿದ್ದಾರೆ.
ಮಕ್ಕಳು ಗೇಟ್ ಹಾರಿ ಹೋಗುತ್ತಿರುವ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿತ್ತು. ನಾಪತ್ತೆಯಾದ ನಂತರ ವಿದ್ಯಾರ್ಥಿಗಳ ಪೋಷಕರು ಸ್ಥಳೀಯ ಪೊಲೀಸರನ್ನು ಸಂಪರ್ಕಿಸಿ ನಾಪತ್ತೆ ಪ್ರಕರಣ ದಾಖಲಿಸಿದ್ದಾರೆ. ಕೆಲವು ವರದಿಗಳ ಪ್ರಕಾರ ವಿದ್ಯಾರ್ಥಿಗಳನ್ನ ಪೊಲೀಸರು ಪತ್ತೆ ಹಚ್ಚಿದ್ದಾರೆ ಎಂದು ತಿಳಿದು ಬಂದಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx