ಹೈದ್ರಾಬಾದ್: ಪುಷ್ಪಾ 2 ಚಿತ್ರದ ಪ್ರೀಮಿಯರ್ ಶೋ ವೇಳೆ ಸಂಭವಿಸಿದ್ದ ಕಾಲ್ತುಳಿತದಲ್ಲಿ ಮಹಿಳೆಯೊಬ್ಬರು ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ನಟ ಅಲ್ಲು ಅರ್ಜುನ್ ಅವರನ್ನು ಚಿಕ್ಕಡಪಲ್ಲಿ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಹೈದ್ರಾಬಾದ್ ನ ಸಂಧ್ಯಾ ಚಿತ್ರಮಂದಿರದಲ್ಲಿ ಪುಷ್ಪಾ 2 ಚಿತ್ರದ ಪ್ರೀಮಿಯರ್ ಶೋ ವೇಳೆ ನಡೆದ ನೂಕುನುಗ್ಗಲಿನಿಂದಾಗಿ ಮಹಿಳೆಯೊಬ್ಬರು ಸಾವನ್ನಪ್ಪಿ ಅವರ ಪುತ್ರ ಗಂಭೀರವಾಗಿ ಗಾಯಗೊಂಡಿದ್ದರು.
ಈ ಪ್ರಕರಣಕ್ಕೆ ನಟ ಅಲ್ಲು ಅರ್ಜುನ್ ಅವರು ಸಂತಾಪ ಸೂಚಿಸಿದ್ದರು. ಅಲ್ಲದೆ ಮೃತರ ಕುಟುಂಬಕ್ಕೆ ಚಿತ್ರತಂಡ 25 ಲಕ್ಷ ರೂ.ಗಳ ಪರಿಹಾರ ಘೋಷಿಸಿತ್ತು. ಆದರೆ ಕಾಲ್ತುಳಿತದಲ್ಲಿ ಮಹಿಳೆ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿಕ್ಕಡಪಲ್ಲಿ ಠಾಣೆಯಲ್ಲಿ ನಟ ಅಲ್ಲುಅರ್ಜುನ್, ಚಿತ್ರಮಂದಿರದ ಮಾಲೀಕ, ಬೌನ್ಸರ್ ಗಳ ವಿರುದ್ಧ ಪ್ರಕರಣ ದಾಖಲಾಗಿದ್ದು ಅವರನ್ನು ವಿಚಾರಣೆಗೆ ಒಳಪಡಿಸಿದ್ದಾರೆ.
ತನ್ನ ವಿರುದ್ಧ ದಾಖಲಾಗಿರುವ ಪ್ರಕರಣವನ್ನ ರದ್ದುಗೊಳಿಸುವಂತೆ ಅಲ್ಲು ಅರ್ಜು ಹೈಕೋರ್ಟ್ ಮೊರೆ ಹೋಗಿದ್ದರು. ಆದರೆ ಈ ನಡುವೆಯೇ ಅಲ್ಲು ಅರ್ಜುನ್ ಅವರನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx