nammatumakuru

    Subscribe to Updates

    Get the latest creative news from FooBar about art, design and business.

    What's Hot

    WhatsApp ಬಳಕೆದಾರರೇ ಎಚ್ಚರ! ಈ 2 ಸೆಟ್ಟಿಂಗ್‌ ಆನ್ ಮಾಡಿ, ಸೈಬರ್ ವಂಚನೆಯ ಅಪಾಯ ತಗ್ಗಿಸಿ

    October 14, 2026

    ರೈತರ ಬೇಡಿಕೆ ಈಡೇರುವವರೆಗೆ ಸಕ್ಕರೆ ಮುಟ್ಟಲ್ಲ! ಫಕೀರ ದಿಂಗಾಲೇಶ್ವರ ಸ್ವಾಮೀಜಿ ಪ್ರತಿಜ್ಞೆ

    October 14, 2026

    ಜಗನ್ನಾಥನ ರಥದ ಚಕ್ರ ಮನೆಗೆ ತರಬೇಕಾ? ಖರೀದಿಸಲು ಎಷ್ಟು ಹಣ ಕೊಡಬೇಕು?

    October 14, 2026
    Facebook Twitter Instagram
    ಟ್ರೆಂಡಿಂಗ್
    • WhatsApp ಬಳಕೆದಾರರೇ ಎಚ್ಚರ! ಈ 2 ಸೆಟ್ಟಿಂಗ್‌ ಆನ್ ಮಾಡಿ, ಸೈಬರ್ ವಂಚನೆಯ ಅಪಾಯ ತಗ್ಗಿಸಿ
    • ರೈತರ ಬೇಡಿಕೆ ಈಡೇರುವವರೆಗೆ ಸಕ್ಕರೆ ಮುಟ್ಟಲ್ಲ! ಫಕೀರ ದಿಂಗಾಲೇಶ್ವರ ಸ್ವಾಮೀಜಿ ಪ್ರತಿಜ್ಞೆ
    • ಜಗನ್ನಾಥನ ರಥದ ಚಕ್ರ ಮನೆಗೆ ತರಬೇಕಾ? ಖರೀದಿಸಲು ಎಷ್ಟು ಹಣ ಕೊಡಬೇಕು?
    • ನಿಮ್ಮ ಮೊಬೈಲ್ ರೀಚಾರ್ಜ್‌ನಿಂದ ಟೆಲಿಕಾಂ ಕಂಪನಿಗಳಿಗೆ ಎಷ್ಟು ಲಾಭ?
    • ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಹಿಂದೆ ಯಾರು? ಕೆ.ಎನ್.ರಾಜಣ್ಣ ಹೇಳಿದ್ದೇನು?
    • “ದಮ್ಮು, ತಾಕತ್ತು ಇದ್ದರೆ ಹೋರಾಟಕ್ಕೆ ಬನ್ನಿ”; ನಟ ಸುದೀಪ್‌ ಗೆ ಉಗ್ರಪ್ಪ ಸವಾಲು?
    • ಸಿಹಿ ತಿನ್ನದಿದ್ದರೂ ಮಧುಮೇಹ ಬರಬಹುದು! ಈ ಲಕ್ಷಣಗಳನ್ನು ನಿರ್ಲಕ್ಷಿಸಬೇಡಿ
    • ತುಮಕೂರು ದಸರಾ ಉತ್ಸವ-2026: ಪಂಜಿನ ಕವಾಯತು ತಾಲೀಮು ವೀಕ್ಷಣೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಹುಬ್ಬಳ್ಳಿ– ಧಾರವಾಡ ಬೈಪಾಸ್ ರಸ್ತೆ ಅಗಲೀಕರಣ ಕಾಮಗಾರಿ ಪರಿಶೀಲನೆ
    ರಾಜ್ಯ ಸುದ್ದಿ December 14, 2024

    ಹುಬ್ಬಳ್ಳಿ– ಧಾರವಾಡ ಬೈಪಾಸ್ ರಸ್ತೆ ಅಗಲೀಕರಣ ಕಾಮಗಾರಿ ಪರಿಶೀಲನೆ

    By adminDecember 14, 2024No Comments3 Mins Read
    hubli dharwad

    ಧಾರವಾಡ: ಕರ್ನಾಟಕ ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿಗಳಾದ ಡಾ.ಶಾಲಿನಿ ರಜನೀಶ ಅವರು ಇಂದು ಬೆಳಿಗ್ಗೆ, ನರೇಂದ್ರ ಕ್ರಾಸ್ ದಿಂದ ಗಬ್ಬೂರ ವರೆಗಿನ ಬೈಪಾಸ್ ರಸ್ತೆ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲಿಸಿದರು.

    ರಾಷ್ಷ್ರೀಯ ಹೆದ್ದಾರಿ 48 ರಲ್ಲಿ  ಧಾರವಾಡದ ನರೇಂದ್ರ ಕ್ರಾಸ್ ದಿಂದ ಹುಬ್ಬಳ್ಳಿಯ ಗಬ್ಬೂರ ವರೆಗೆ ಬರುವ ಹುಬ್ಬಳ್ಳಿ ಧಾರವಾಡ ಬೈಪಾಸ್ ರಸ್ತೆ ಅಗಲೀಕರಣದ ಕಾಮಗಾರಿಗೆ ಮೊದಲ ಹಂತದಲ್ಲಿ ಅಗತ್ಯವಿರುವ ಭೂಮಿ ಸ್ವಾದೀನಪಡಿಸಿಕೊಂಡು ನೀಡಿದರೂ, ಗುತ್ತಿಗೆದಾರ ಕಾಮಗಾರಿ ವಿಳಂಬ ಮಾಡುತ್ತಿರುವುದು ಕಂಡುಬರುತ್ತಿದೆ. ಯಾವುದೇ ವಿಳಂಬವಿಲ್ಲದೆ ಕಾಲಮಿತಿಯಲ್ಲಿ ಕಾಮಗಾರಿ ಪೂರ್ಣಗೊಳಿಸಬೇಕು ಎಂದು ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ ಅವರು ಗುತ್ತಿಗೆದಾರರಿಗೆ ಮತ್ತು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

    ಮುಂದಿನ 15 ದಿನಗಳಲ್ಲಿ ಬಾಕಿ ಇರುವ ಕಾಮಗಾರಿ ಪೂರ್ತಿಗೊಳಿಸಿ, ತಮಗೆ ದಾಖಲೆ ಸಲ್ಲಿಸುವಂತೆ ಮತ್ತು ಸಂಬಂಧಿಸಿದ ಅಧಿಕಾರಿಗಳು ನಿಗಾವಹಿಸಿ, ವರದಿ ನೀಡುವಂತೆ ಅವರು ಸೂಚಿಸಿದರು.

    ಕಾಮಗಾರಿ ಗುಣಮಟ್ಟದಾಗಿರಬೇಕು. ಕಳಪೆ ಕಾಮಗಾರಿ ಆಗಲು ಅವಕಾಶವಾಗದಂತೆ ಪ್ರತಿ ಹಂತದಲ್ಲಿ ಸಂಬಂಧಿಸಿದ ಅಧಿಕಾರಿಗಳು ಮೇಲುಸ್ತುವಾರಿ, ನೀಗಾ ವಹಿಸಬೇಕಾಗುತ್ತದೆ ಎಂದು ಅವರು ತಿಳಿಸಿದರು.

    ಗುತ್ತಿಗೆದಾರರು ಒಪ್ಪಂದದಂತೆ  2025 ರ ಡಿಸೆಂಬರ್ ದೊಳಗೆ   ಈ ರಸ್ತೆ ಕಾಮಗಾರಿಯನ್ನು ಪೂರ್ಣವಾಗಿಸಿ, ಸಾರ್ವಜನಿಕರ ಸಂಚಾರಕ್ಕೆ ಷಟ್ಪಥದ ರಸ್ತೆಗಳನ್ನು ಮುಕ್ತವಾಗಿಸಬೇಕು. ಈ ನಿಟ್ಟಿನಲ್ಲಿ ಗುತ್ತಿಗೆದಾರ ಕಾಮಗಾರಿಯನ್ನು ನಿರಂತರವಾಗಿ ಕೈಗೊಂಡು ಆದಷ್ಟು ಬೇಗನೆ ಕಾಮಗಾರಿ ಮುಕ್ತಾಯಗೊಳಿಸಬೇಕು ಮತ್ತು ಸಾರ್ವಜನಿಕರ ಸಂಚಾರಕ್ಕೆ ಅನುಕೂಲ ಮಾಡಬೇಕು ಎಂದರು.

    ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಭೂಸ್ವಾದೀನ ಪ್ರಕ್ರಿಯೆಗಳಿಗೆ ಸಂಬಂಧಿಸಿದ ಕಡತಗಳನ್ನು ತಕ್ಷಣ ಕ್ಲಿಯರ್ ಮಾಡಬೇಕು. ಪ್ರಸ್ತಾವನೆಗಳಿಗೆ ಅನುಮೋದನೆ ನೀಡಿ, ಅಗತ್ಯ ಹಣ ಬಿಡುಗಡೆ ಮಾಡಬೇಕು ಎಂದು ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ ಅವರು ಅಧಿಕಾರಿಗಳಿಗೆ ಸೂಚಿಸಿದರು.

    ಕೆಲಗೇರಿ ಬಳಿಯ ರೈಲ್ವೆ ಮೇಲಸೇತುವೆ ಹತ್ತಿರ ಪರಿಶೀಲಿಸಿ, ಇಲ್ಲಿನ ಕಾಮಗಾರಿ ಬೇಗ ಪ್ರಾರಂಭಿಸಬೇಕು. ಸಾರ್ವಜನಿಕರ ಸಂಚಾರಕ್ಕೆ ಪರ್ಯಾಯ ವ್ಯವಸ್ಥೆ ಮಾಡಬೇಕು. ಸೇತುವೇ ಅಗಲೀಕರಣ ಕಾಮಗಾರಿ ಆದಷ್ಟು ಬೇಗ ಮಾಡಬೇಕು ಎಂದು ಸೂಚಿಸಿದರು.

    ನರೇಂದ್ರ ಟೋಲ್ ಪ್ಲಾಜಾ, ಕೆಲಗೇರಿ ರೈಲ್ವೆ ಮೇಲಸೇತುವೆ ಹತ್ತಿರ, ತಾರಿಹಾಳ ಸೇತುವೆ ಸೇರಿದಂತೆ ಬೈಪಾಸ್ ರಸ್ತೆಯುದ್ದಕ್ಕೂ ವಿವಿದೆಡೆಗಳಲ್ಲಿ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ ಅವರು ಕಾಮಗಾರಿಯನ್ನು ಪರಿಶೀಲಿಸಿದರು.

    ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಮಾತನಾಡಿ, ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ಬರುವ  ಹುಬ್ಬಳ್ಳಿ ಧಾರವಾಡ ಬೈಪಾಸ್ ರಸ್ತೆಯನ್ನು ಅಗಲೀಕರಣ ಮಾಡಿ, ಆರು ಪಥದ ರಸ್ತೆ ಕಾಮಗಾರಿ ಮಾಡಲು ಧಾರವಾಡದ ನರೇಂದ್ರ ಕ್ರಾಸ್ ದಿಂದ ಹುಬ್ಬಳ್ಳಿ ಗಬ್ಬೂರ ವರೆಗಿನ 30 ಕೀ.ಮೀ. ರಸ್ತೆ ಗುರುತಿಸಲಾಗಿದೆ.

    ಇದಕ್ಕಾಗಿ ಅಗತ್ಯವಿರುವ ಭೂ ಸ್ವಾದೀನ ಪ್ರಕ್ರಿಯೆ ಕೈಗೊಳ್ಳಲಾಗುತ್ತಿದೆ. ಮೊದಲ ಹಂತವಾಗಿ 14.26 ಹೆಕ್ಟೇರ್  ಭೂಮಿಯನ್ನು ಸ್ವಾದೀನ ಪಡಿಸಿಕೊಳ್ಳಲಾಗಿದೆ. ಇದಕ್ಕೆ ಸಂಭಂದಿಸಿದ 98 ಕೋಟಿ ರೂ. ಭೂ ಪರಿಹಾರ ಸರಕಾರದಿಂದ ಬಿಡುಗಡೆ ಆಗಿದ್ದು, ಇದರಲ್ಲಿ ಸುಮಾರು 27 ಕೋಟಿ ರೂ.ಗಳ ಭೂ ಪರಿಹಾರವನ್ನು ಈಗಾಗಲೇ ರೈತರಿಗೆ, ಭೂಮಾಲಿಕರಿಗೆ ವಿತರಿಸಲಾಗಿದೆ. ಉಳಿದ ಪರಿಹಾರವನ್ನು ವಿತರಿಸುವ ಕಾರ್ಯ ಪ್ರಗತಿಯಲ್ಲಿದೆ ಎಂದು ಹೇಳಿದರು.

    ಎರಡನೇಯ ಹಂತದಲ್ಲಿ 10 ಹೆಕ್ಟೇರ್ ಭೂ ಪ್ರದೇಶದ ಭೂಸ್ವಾದೀನ ಪ್ರಕ್ರಿಯೆಯು ಹಂತಿಮ ಹಂತದಲ್ಲಿದೆ. ಈಗಾಗಲೇ ಇದರ ಅನುಮೋದನೆಗಾಗಿ ಪ್ರಸ್ತಾವನೆಯನ್ನು ಎನ್.ಎಚ್.ಐ ದ ಕೇಂದ್ರ ಕಚೇರಿಯ ಮೇಲಾಧಿಕಾರಿಗಳಿಗೆ ಸಲ್ಲಿಸಲಾಗಿದೆ. ಅನುಮತಿ ಬಂದ ತಕ್ಷಣ ಕ್ರಮ ಜರುಗಿಸಲಾಗುವುದು.

    ಮತ್ತು ಮೂರನೇಯ ಹಂತದಲ್ಲಿ 14 ಹೆಕ್ಟರ್ ಭೂಮಿ ಭೂಸ್ವಾದೀನಕ್ಕೆ ಪ್ರಸ್ತಾವನೆಯನ್ನು ಸಿದ್ದಗೊಳಿಸಲಾಗಿದೆ ಎಂದು ಅವರು ತಿಳಿಸಿದರು.

    ಕಾಮಗಾರಿಯನ್ನು ಗುತ್ತಿಗೆದಾರ ಮಾರ್ಚ 2023 ರಿಂದ ಡಿಸೆಂಬರ್ 2025 ರೊಳಗೆ ಪೂರ್ತಿಗೊಳಿಸಿ ಕೊಡುವ ಒಪ್ಪಂದವಾಗಿದೆ. ಆದರೆ ಸಾರ್ವಜನಿಕರ ಸಂಚಾರದ ಹಿತದೃಷ್ಟಿಯಿಂದ ಕೊನೆಯ ದಿನಾಂಕಕ್ಕಿಂತ ಮುಂಚಿತವಾಗಿ ಕಾಮಗಾರಿ  ಪೂರ್ಣಗೊಳಿಸಿ, ಸಂಚಾರಕ್ಕೆ ಮುಕ್ತಗೊಳಿಸಬೇಕು.  ಗುತ್ತಿಗೆದಾರ ಕಾಮಗಾರಿ ಅನುಷ್ಠಾನದಲ್ಲಿ ನಿಧಾನಗತಿ ಅನುಸರಿಸುತ್ತಿದ್ದು,  ಈಗಾಗಲೇ ಈ ಕುರಿತು ಎಚ್ಚರಿಕೆ ನೀಡಲಾಗಿದೆ ಮತ್ತು ಗುಣಮಟ್ಟದ ಕಾಮಗಾರಿ ನಿರ್ವಹಿಸಲು ನಿರಂತರ ನಿಗಾವಹಿಸಲಾಗಿದೆ ಎಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ತಿಳಿಸಿದರು.

    ರಾಷ್ಟ್ರೀಯ ಹೆದ್ದಾರಿ 48 ರ ವಿಶೇಷ ಭೂಸ್ವಾದೀನ ಅಧಿಕಾರಿ ದೇವರಾಜ ಆರ್. ಅವರು ಕಾಮಗಾರಿ, ಭೂಸ್ವಾಧಿನ ಪ್ರದೇಶಗಳ ಪ್ರಗತಿ ಬಗ್ಗೆ ಸ್ಥಳದಲ್ಲಿ  ವಿವರಿಸಿದರು.

    ಈ ಭೇಟಿ ಸಂದರ್ಭದಲ್ಲಿ ಪೊಲೀಸ್ ಆಯುಕ್ತ ಎನ್.ಶಶಿಕುಮಾರ, ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ.ಗೋಪಾಲ ಬ್ಯಾಕೋಡ್, ಉಪ ಪೊಲೀಸ್ ಆಯುಕ್ತ ಮಾನಿಂಗ ನಂದಗಾಂವಿ, ಭೂಸ್ವಾದೀನ ವಿಭಾಗದ ಯೋಜನಾ ನಿರ್ದೇಶಕ ಭುವನೇಶ್ ಕುಮಾರ, ಉಪವಿಭಾಗಾಧಿಕಾರಿ ಶಾಲಂ ಹುಸೇನ್, ಧಾರವಾಡ ತಹಶಿಲ್ದಾರ ಡಿ.ಎಚ್‌.ಹೂಗಾರ, ಗುತ್ತಿಗೆದಾರರು ಸೇರಿದಂತೆ ಇತರರು ಇದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

    admin
    • Website

    Related Posts

    ರೈತರ ಬೇಡಿಕೆ ಈಡೇರುವವರೆಗೆ ಸಕ್ಕರೆ ಮುಟ್ಟಲ್ಲ! ಫಕೀರ ದಿಂಗಾಲೇಶ್ವರ ಸ್ವಾಮೀಜಿ ಪ್ರತಿಜ್ಞೆ

    October 14, 2026

    ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಹಿಂದೆ ಯಾರು? ಕೆ.ಎನ್.ರಾಜಣ್ಣ ಹೇಳಿದ್ದೇನು?

    October 14, 2026

    “ದಮ್ಮು, ತಾಕತ್ತು ಇದ್ದರೆ ಹೋರಾಟಕ್ಕೆ ಬನ್ನಿ”; ನಟ ಸುದೀಪ್‌ ಗೆ ಉಗ್ರಪ್ಪ ಸವಾಲು?

    October 14, 2026

    Comments are closed.

    Our Picks

    ಜಗನ್ನಾಥನ ರಥದ ಚಕ್ರ ಮನೆಗೆ ತರಬೇಕಾ? ಖರೀದಿಸಲು ಎಷ್ಟು ಹಣ ಕೊಡಬೇಕು?

    October 14, 2026

    ನಿಮ್ಮ ಮೊಬೈಲ್ ರೀಚಾರ್ಜ್‌ನಿಂದ ಟೆಲಿಕಾಂ ಕಂಪನಿಗಳಿಗೆ ಎಷ್ಟು ಲಾಭ?

    October 14, 2026

    ದೆಹಲಿಯ ಬೀದಿಯಲ್ಲಿ ಕಾರ್ಯಕರ್ತರೊಂದಿಗೆ ಸರಳತೆಯ ಸಹಭೋಜನ: ಜನರ ನಡುವಿನ ನಾಯಕ ಬಿ.ಕೆ. ಹರಿಪ್ರಸಾದ್

    October 13, 2026

    ‘We’re Sorry’: ಸಿಜೆಪಿ ನಾಯಕ ಅಭಿಜಿತ್ ದೀಪ್ಕೆಗೆ ಅಜ್ಜಿಯ ಸಾವಿನ ಸುದ್ದಿ ಮುಟ್ಟಿಸಿದ ಪೊಲೀಸ್; ವೈರಲ್ ವೀಡಿಯೊ

    October 12, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಸ್ಪೆಷಲ್ ನ್ಯೂಸ್

    WhatsApp ಬಳಕೆದಾರರೇ ಎಚ್ಚರ! ಈ 2 ಸೆಟ್ಟಿಂಗ್‌ ಆನ್ ಮಾಡಿ, ಸೈಬರ್ ವಂಚನೆಯ ಅಪಾಯ ತಗ್ಗಿಸಿ

    October 14, 2026

    ಸ್ಮಾರ್ಟ್‌ಫೋನ್ ಬಳಕೆ ಹೆಚ್ಚಾದಂತೆ ಸೈಬರ್ ವಂಚನೆಯ ಪ್ರಕರಣಗಳೂ ಆತಂಕ ಮೂಡಿಸುತ್ತಿವೆ. ವಾಟ್ಸ್‌ಆಯಪ್ ಮೂಲಕ ಅಪರಿಚಿತ ನಂಬರ್‌ಗಳಿಂದ ಕರೆ ಮಾಡಿ, ಸರ್ಕಾರಿ…

    ರೈತರ ಬೇಡಿಕೆ ಈಡೇರುವವರೆಗೆ ಸಕ್ಕರೆ ಮುಟ್ಟಲ್ಲ! ಫಕೀರ ದಿಂಗಾಲೇಶ್ವರ ಸ್ವಾಮೀಜಿ ಪ್ರತಿಜ್ಞೆ

    October 14, 2026

    ಜಗನ್ನಾಥನ ರಥದ ಚಕ್ರ ಮನೆಗೆ ತರಬೇಕಾ? ಖರೀದಿಸಲು ಎಷ್ಟು ಹಣ ಕೊಡಬೇಕು?

    October 14, 2026

    ನಿಮ್ಮ ಮೊಬೈಲ್ ರೀಚಾರ್ಜ್‌ನಿಂದ ಟೆಲಿಕಾಂ ಕಂಪನಿಗಳಿಗೆ ಎಷ್ಟು ಲಾಭ?

    October 14, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.