ಬೆಂಗಳೂರು: 2020 ರಲ್ಲಿ ಕೋವಿಡ್ –19 ಸಂದರ್ಭದಲ್ಲಿ ಪಿಪಿಇ ಕಿಟ್ ಗಳು, ಎನ್ 95 ಮಾಸ್ಕ್ ಮತ್ತು ಇತರ ವೈದ್ಯಕೀಯ ಉಪಕರಣಗಳನ್ನು ಖರೀದಿಸುವಲ್ಲಿನ ಅಕ್ರಮಗಳಿಗೆ ಸಂಬಂಧಿಸಿದಂತೆ ವೈದ್ಯಕೀಯ ಶಿಕ್ಷಣ ಇಲಾಖೆ ಅನೇಕ ಅಧಿಕಾರಿಗಳು ಮತ್ತು ಖಾಸಗಿ ಕಂಪನಿಗಳ ವಿರುದ್ಧ ಎಫ್‌ಐಆರ್ ದಾಖಲಾಗಿದೆ.
ಅಲ್ಲದೇ, ಆ ಸಮಯದಲ್ಲಿ ಮುಖ್ಯಮಂತ್ರಿಯಾಗಿದ್ದ ಬಿ.ಎಸ್.ಯಡಿಯೂರಪ್ಪ ಮತ್ತು ಆರೋಗ್ಯ ಸಚಿವ ಬಿ. ಶ್ರೀರಾಮುಲು, ನಂತರ ಸಿಎಂ ಆಗಿ ಅಧಿಕಾರ ವಹಿಸಿಕೊಂಡ ಬಸವರಾಜ ಬೊಮ್ಮಾಯಿ ಮತ್ತು ಆರೋಗ್ಯ ಸಚಿವರಾಗಿದ್ದ ಡಾ.ಕೆ.ಸುಧಾಕರ್ ಅವರಿಗೂ ಅಕ್ರಮದ ಬಿಸಿ ತಟ್ಟಲಿದೆ ಎನ್ನಲಾಗುತ್ತಿದೆ.
ಬಹುಕೋಟಿ ಹಗರಣದ ತನಿಖೆಗಾಗಿ ಕಾಂಗ್ರೆಸ್ ಸರ್ಕಾರ ಶೀಘ್ರದಲ್ಲೇ ಐಜಿಪಿ ಅಥವಾ ಎಡಿಜಿಪಿ ಶ್ರೇಣಿಯ ಅಧಿಕಾರಿಯ ನೇತೃತ್ವದಲ್ಲಿ ವಿಶೇಷ ತನಿಖಾ ತಂಡವನ್ನು (SIT) ರಚಿಸುವ ಸಾಧ್ಯತೆಯಿದೆ. ವಿವಿಧ ಪ್ರಕರಣಗಳಲ್ಲಿ ಎಫ್ ಐಆರ್ ಗಳು ದಾಖಲಾಗುವುದರಿಂದ, ಅಕ್ರಮಗಳ ಬಗ್ಗೆ ಸಮಗ್ರ ತನಿಖೆ ನಡೆಸಲು ಎಸ್ ಐಟಿಯನ್ನು ಸ್ಥಾಪಿಸುವುದು ಉತ್ತಮ ಎಂದು ನವೆಂಬರ್ 14 ರಂದು ನಡೆದ ಕ್ಯಾಬಿನೆಟ್ ಸಭೆಯಲ್ಲಿ ಯೋಜಿಸಲಾಗಿತ್ತು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಶನಿವಾರ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.
ಇನ್ನೂ ಕಲಬುರಗಿಯಲ್ಲಿ ಈ ಬಗ್ಗೆ ಮಾತನಾಡಿರುವ ವೈದ್ಯಕೀಯ ಶಿಕ್ಷಣ ಸಚಿವ ಶರಣಪ್ರಕಾಶ ಪಾಟೀಲ್, ಎಸ್ ಐಟಿ ರಚನೆ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಹಾಗೂ ಗೃಹ ಸಚಿವ ಡಾ.ಜಿ.ಪರಮೇಶ್ವರ ಅವರು ತೀರ್ಮಾನ ಕೈಗೊಳ್ಳಲಿದ್ದಾರೆ ಎಂದಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx