ವಾಸ್ತವ ಮತ್ತು ವಸ್ತುನಿಷ್ಠ ದತ್ತಾಂಶವೇ ಇಲ್ಲದೆ ಸರ್ಕಾರ ತರಾತುರಿಯಲ್ಲಿ ಒಳ ಮೀಸಲಾತಿ ಜಾರಿಗೊಳಿಸಬಾರದೆಂದು ಒತ್ತಾಯಿಸಿ ಡಿಸೆಂಬರ್ 17ರಂದು ಬೆಳಗಾವಿ ಸುವರ್ಣಸೌಧ ಚಲೋ ಹಮ್ಮಿಕೊಳ್ಳಲಾಗಿದೆ. ಸರ್ಕಾರ ನಿಖರವಾದ ದತ್ತಾಂಶ ಪಡೆಯದೆ ತಾರಾತುರಿಯಲ್ಲಿ ಒಳ ಮೀಸಲಾತಿ ಜಾರಿ ನಿರ್ಧಾರ ತೆಗೆದುಕೊಳ್ಳಲು ಹೊರಟಿರುವುದು ಖಂಡನೀಯ. ಸರ್ಕಾರ ದತ್ತಾಂಶವನ್ನು ಅಧಿಕೃತವಾಗಿ ಘೋಷಿಸಬೇಕೆಂದು ತಿಪ್ಪೇಸ್ವಾಮಿ(ತಿಪ್ಪಸರ್ ನಾಯ್ಕ್) ಸಂಸ್ಥಾಪಕ ರಾಜ್ಯಾಧ್ಯಕ್ಷರು ಕರ್ನಾಟಕ ಬಂಜಾರ ಜಾಗೃತಿ ದಳ(ರಿ) ಒತ್ತಾಯಿಸಿದರು.
ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾಗಿದ್ದ ಹೆಚ್.ಕಾಂತರಾಜ್ ಅವರ ಅವಧಿಯಲ್ಲಿ 2015ರಲ್ಲಿ ಕರ್ನಾಟಕ ರಾಜ್ಯದಲ್ಲಿ ನಡೆದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ವರದಿಯಲ್ಲಿ ಪರಿಶಿಷ್ಟ ಜಾತಿಯಲ್ಲಿನ ಉಪಜಾತಿಗಳ ದತ್ತಾಂಶವಿದೆ ಆದರೆ ಸರ್ಕಾರ ಈ ವರದಿಯನ್ನು ಒಪ್ಪಿಕೊಂಡಿಲ್ಲ. ಕಳೆದ ಬಾರಿ ಬಿಜೆಪಿ ಸರ್ಕಾರದ ಅವಧಿಯಲ್ಲಿ ಸಚಿವ ಸಂಪುಟ ಉಪಸಮಿತಿ ರಚಿಸಿ ನ್ಯಾಯಮೂರ್ತಿ ಸದಾಶಿವ ಆಯೋಗದ ವರದಿಯನ್ನು ಅಪ್ರಸ್ತುತವೆಂದು ತಿರಸ್ಕರಿಸಿದೆ. ಆದಕಾರಣ ಸರ್ಕಾರವು ಯಾವುದೇ ರಾಜಕೀಯ ಒತ್ತಡಕ್ಕೆ ಓಲೈಕೆ ರಾಜಕಾರಣಕ್ಕೆ.ಮತಗಳ ಹಿತದೃಷ್ಠಿಗೆ ಮಣಿದು ಒಳ ಮೀಸಲಾತಿಯನ್ನು ಜಾರಿ ಮಾಡಬಾರದು. ಪರಿಶಿಷ್ಟರ ದತ್ತಾಂಶವನ್ನು ಬಹಿರಂಗಪಡಿಸಬೇಕು.ಕರ್ನಾಟಕ ಸರ್ಕಾರ ನಿವೃತ್ತ ನ್ಯಾಯಮೂರ್ತಿ ಎಚ್.ಎಸ್ ನಾಗಮೋಹನ್ ದಾಸ್ ಅಧ್ಯಕ್ಷತೆಯಲ್ಲಿ ಏಕ ಸದಸ್ಯ ಆಯೋಗವನ್ನು ರಚಿಸಿ ರಾಜ್ಯದಲ್ಲಿ ಶಿಕ್ಷಣ ಮತ್ತು ಸರ್ಕಾರಿ ಸೇವೆಗಳಲ್ಲಿ ಪರಿಶಿಷ್ಟ ಜಾತಿಯ ವಿವಿಧ ಉಪಜಾತಿಗಳಿಗೆ ಸೇರಿರುವವರ ಪ್ರಾತಿನಿಧ್ಯ ಕುರಿತು ದತ್ತಾಂಶ ಪಡೆದು ಒಳ ಮೀಸಲಾತಿ ಬಗ್ಗೆ 2 ತಿಂಗಳೊಳಗಾಗಿ ವರದಿ ಸಲ್ಲಿಸಲು ಸೂಚಿಸಿದೆ.
ಪ್ರಸ್ತುತ ಸರ್ಕಾರದ ಬಳಿ 2011ರ ಜನಗಣತಿಯ ಜಾತಿ ಅಂಶಗಳ ಅಧಿಕೃತ ಮಾಹಿತಿ ಮಾತ್ರ ಲಭ್ಯವಿದ್ದು. ಅದರಲ್ಲಿ ಪರಿಶಿಷ್ಟ ಜಾತಿಯ ಉಪಜಾತಿಗಳ ದತ್ತಾಂಶ ಇರುವುದಿಲ್ಲ. ರಾಜ್ಯ ಸರ್ಕಾರ ಆಯೋಗಕ್ಕೆ ನೀಡಿರುವ 2 ತಿಂಗಳ ಕಾಲಾವಕಾಶದಲ್ಲಿ ಪರಿಶಿಷ್ಟ ಜಾತಿಯ ಉಪಜಾತಿಗಳ ದತ್ತಾಂಶ ಸಂಗ್ರಹಿಸಿ ವರದಿ ಸಲ್ಲಿಸುವುದು ಅಸಾಧ್ಯವಾದುದು.ಸರ್ವೋಚ್ಚ ನ್ಯಾಯಾಲಯವು ನೀಡಿದ ಆದೇಶದ ಅನುಸಾರ ಆಯೋಗವು (ಎಂಪೆರಿಕಲ್ ಡೇಟಾ) ಪ್ರಾಯೋಗಿಕ ದತ್ತಾಂಶವನ್ನು ಬಂಜಾರ ಭೋವಿ ಕೊರಮ ಕೊರಚ ಸೇರಿದಂತೆ 99 ಜಾತಿಯ ತೆರಳಿ ಆರ್ಥಿಕ ಸಾಮಾಜಿಕ ಶೈಕ್ಷಣಿಕ. ಉದ್ಯೋಗ ಸೇರಿದಂತೆ ಮಾಹಿತಿ ಪಡೆದು ಸೂಕ್ತ ದತ್ತಾಂಶವನ್ನು ನೀಡಬೇಕೆಂದು ಒತ್ತಾಯಿಸಿದರು. ಕರ್ನಾಟಕ ರಾಜ್ಯದ ಬಂಜಾರ.ಭೋವಿ ಕೊರಮ.ಕೊರಚ. ಇನ್ನಿತರ 99 ಜಾತಿಯ ಎಲ್ಲಾ ಸಂಘ-ಸಂಸ್ಥೆಗಳು ಸೇರಿ ಬೆಳಗಾವಿ ಸುವರ್ಣಸೌಧ ಮುಂದೆ ಹೋರಾಟದ ಮೂಲಕ ಸರ್ಕಾರಕ್ಕೆ ಎಚ್ಚರಿಕೆ ನೀಡಲಿದ್ದೇವೆ ಎಂದು ತಿಪ್ಪೇಸ್ವಾಮಿ(ತಿಪ್ಪಸರ್ ನಾಯ್ಕ್ ) ಸಂಸ್ಥಾಪಕ ರಾಜ್ಯಾಧ್ಯಕ್ಷರು ಕರ್ನಾಟಕ ಬಂಜಾರ ಜಾಗೃತಿ ದಳ(ರಿ) ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx