ಬೀದರ್: ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ ಅವರ ನಿರ್ದೇಶನದಂತೆ, ಸಂತಪೂರ ಪೊಲೀಸ್ ಠಾಣೆಯ ಪಿ.ಎಸ್.ಐ ನಂದಕುಮಾರ ರವರು ತಮ್ಮ ಸಿಬ್ಬಂದಿ ರವರೊಂದಿಗೆ ಠಾಣಾ ವ್ಯಾಪ್ತಿಯ ಮೂರಾರ್ಜಿ ದೇಶಾಯಿ ವಸತಿ ಶಾಲೆ (ಪ.ಜಾ) ಸಂತಪೂರ ಮತ್ತು ಸರಕಾರಿ ಪ್ರೌಢ ಶಾಲೆ ಸಂತಪೂರದಲ್ಲಿ ಶಾಲಾ ಮಕ್ಕಳಿಗೆ ಬಾಲ ಅಪರಾಧಗಳನ್ನು ತಡೆಹಿಡಿಯಲು ಪೊಲೀಸರೊಂದಿಗೆ ಕೈ ಜೊಡಿಸಿ ಎಂಬ ವಾಕ್ಯದೊಂದಿಗೆ ಶಾಲಾ ಮಕ್ಕಳಿಗೆ ಅಪರಾಧ ತಡೆ ಮಾಸಾಚರಣೆ ಹಾಗೂ ಕಾನೂನು ಅರಿವು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದರು.
ಮಕ್ಕಳಿಗೆ ಅಪರಾಧಗಳು ನಡೆಯದಂತೆ ಯಾವ ರೀತಿ ತಡೆಯುವುದು ಮತ್ತು ರಸ್ತೆ ಅಪಘಾತಗಳು ನಡೆಯದಂತೆ ರಸ್ತೆ ಸುರಕ್ಷತೆಯ ಬಗ್ಗೆ, ಮತ್ತು ಮಾದಕ ವಸ್ತುಗಳ ಸೇವನೆಯಿಂದ ಉಂಟಾಗುವ ದುಷ್ಪರಿಣಾಮಗಳ ಬಗ್ಗೆ ಹಾಗೂ ಇತರೆ ಕಾನೂನುಗಳ ಬಗ್ಗೆ ಗ್ರಾಮದಲ್ಲಿ ಅರಿವು ಮೂಡಿಸಲಾಯಿತು.
ಉತ್ತಮ ಸಮಾಜ ನಿರ್ಮಾಣಕ್ಕೆ ಪ್ರತಿಯೊಬ್ಬರಿಗೂ ಕಾನೂನಿನ ಬಗ್ಗೆ ಅರಿವು ಅತೀ ಮುಖ್ಯವಾಗಿದ್ದು, ಈ ನಿಟ್ಟಿನಲ್ಲಿ ಸಂತಪೂರ ಪೊಲೀಸರು ಅರಿವು ಮೂಡಿಸುವ ಕಾರ್ಯ ಮೆಚ್ಚುಗೆಗೆ ಪಾತ್ರವಾಗಿದೆ.
ವರದಿ: ಅರವಿಂದ ಮಲ್ಲಿಗೆ, ಬೀದರ್
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx