ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದ ಎ1 ಆರೋಪಿ ಪವಿತ್ರಾ ಗೌಡ ಇಂದು ಪರಪ್ಪನ ಅಗ್ರಹಾರದಿಂದ ಬಿಡುಗಡೆಯಾಗಲಿದ್ದಾರೆ.
6 ತಿಂಗಳ ಹಿಂದೆ ಜೈಲು ಸೇರಿದ್ದ ನಟ ದರ್ಶನ್ ಗೆಳತಿ ಪವಿತ್ರಾ ಗೌಡಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿತ್ತು. ಇಂದು ಬೆಳಗ್ಗೆ ಬಿಡುಗಡೆಯ ಎಲ್ಲ ಪ್ರಕ್ರಿಯೆಗಳು ಮುಗಿಯಲಿದ್ದು, ಪರಪ್ಪನ ಅಗ್ರಹಾರದಿಂದ ಪವಿತ್ರಾ, ಅನುಕುಮಾರ್, ಪ್ರದೂಶ್ ಬಿಡುಗಡೆಯಾದರೆ ಶಿವಮೊಗ್ಗ ಜೈಲಿನಿಂದ ಜಗದೀಶ್, ಲಕ್ಷಣ್, ಕಲಬುರಗಿಯಿಂದ ನಾಗರಾಜ್ ರಿಲೀಸ್ ಆಗಲಿದ್ದಾರೆ ಎಂದು ವರದಿಯಾಗಿದೆ.
ಇಂದು ಮಧ್ಯಾಹ್ನ ಹೊತ್ತಿಗೆ ಎಲ್ಲಾ ಆರೋಪಿಗಳು ಜೈಲಿನಿಂದ ಹೊರಬರಲಿದ್ದಾರೆ. ಎಲ್ಲಾ ಆರೋಪಿಗಳು ತಲಾ 1 ಲಕ್ಷ ರೂ. ಮೊತ್ತದ ವೈಯಕ್ತಿಕ ಬಾಂಡ್ ಹಾಗೂ ಇಷ್ಟೇ ಮೊತ್ತಕ್ಕೆ ಇಬ್ಬರ ಭದ್ರತೆ ನೀಡಬೇಕು ಸೇರಿದಂತೆ ಹಲವು ಷರತ್ತುಗಳನ್ನು ವಿಧಿಸಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx