nammatumakuru

    Subscribe to Updates

    Get the latest creative news from FooBar about art, design and business.

    What's Hot

    ಐಟಿ ಸಂಸ್ಥೆಗಳಲ್ಲಿ ಕನ್ನಡಿಗರಿಗೆ ಉದ್ಯೋಗ ನಿರಾಕರಣೆ: ಸರ್ಕಾರ ಖಡಕ್ ಎಚ್ಚರಿಕೆ, ಖಾಸಗಿ ಮೀಸಲಾತಿ ವಿಧೇಯಕ ಮತ್ತೆ ಮುನ್ನೆಲೆಗೆ!

    October 26, 2026

    ಕಬ್ಬಿಗೆ ಸೂಕ್ತ ಬೆಲೆ: ಪ್ರತಿಭಟನೆ ವೇಳೆ ರೈತರ ನಡುವೆಯೇ ಬಣ ಬಡಿದಾಟ: ಪ್ರತಿಭಟನಾ ಸಭೆ ರಣರಂಗವಾಯ್ತು!

    October 26, 2026

    ಸಂಜೆ ಚಹಾ ಜೊತೆಗೆ ರುಚಿಕರ ಹಾಗೂ ಗರಿಗರಿಯಾದ ಆಲೂಗಡ್ಡೆ ಫ್ರಿಟರ್ಸ್!

    October 26, 2026
    Facebook Twitter Instagram
    ಟ್ರೆಂಡಿಂಗ್
    • ಐಟಿ ಸಂಸ್ಥೆಗಳಲ್ಲಿ ಕನ್ನಡಿಗರಿಗೆ ಉದ್ಯೋಗ ನಿರಾಕರಣೆ: ಸರ್ಕಾರ ಖಡಕ್ ಎಚ್ಚರಿಕೆ, ಖಾಸಗಿ ಮೀಸಲಾತಿ ವಿಧೇಯಕ ಮತ್ತೆ ಮುನ್ನೆಲೆಗೆ!
    • ಕಬ್ಬಿಗೆ ಸೂಕ್ತ ಬೆಲೆ: ಪ್ರತಿಭಟನೆ ವೇಳೆ ರೈತರ ನಡುವೆಯೇ ಬಣ ಬಡಿದಾಟ: ಪ್ರತಿಭಟನಾ ಸಭೆ ರಣರಂಗವಾಯ್ತು!
    • ಸಂಜೆ ಚಹಾ ಜೊತೆಗೆ ರುಚಿಕರ ಹಾಗೂ ಗರಿಗರಿಯಾದ ಆಲೂಗಡ್ಡೆ ಫ್ರಿಟರ್ಸ್!
    • ದರೋಡೆಕೋರನಿಂದ ಆದಿಕವಿಯವರೆಗೆ; ಮಹರ್ಷಿ ವಾಲ್ಮೀಕಿಯವರ ಬದುಕಿನ ರೋಚಕ ಕಥೆ ಇಲ್ಲಿದೆ
    • ಅನ್ನ ನೀಡುವ ಭೂಮಿಗೆ ಕೃತಜ್ಞತೆ ಸಲ್ಲಿಸುವ ದಿನ; ಭೂಮಿ ಹುಣ್ಣಿಮೆಯ ಮಹತ್ವ ತಿಳಿಯಿರಿ
    • ನವೆಂಬರ್ 1 ರಿಂದ ‘ಮತ ಬಚಾವೋ ದೇಶ ಬಚಾವೋ’ ಅಭಿಯಾನ: ಕಾಂಗ್ರೆಸ್ ವಕ್ತಾರ ಬಾಲಕೃಷ್ಣ ಸ್ವಾಮಿ ಯಾದವ್
    • ಕೊರಟಗೆರೆ: ಮೋಹನ್‌ ಲಾಲ್ ಅವರ ಅಂತಿಮ ದರ್ಶನ ಪಡೆದ ಡಿಸಿಎಂ ಡಾ.ಜಿ. ಪರಮೇಶ್ವರ್
    • ಕ್ರೆಡಿಟ್ ಕಾರ್ಡ್ ಹೊಂದಿರುವ ಪತಿ ಮೃತಪಟ್ಟರೆ ಸಾಲವನ್ನು ಪತ್ನಿ ತೀರಿಸಬೇಕಾ? ಬ್ಯಾಂಕಿಂಗ್ ನಿಯಮಗಳೇನು?
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸ್ಥಳ ಭೇಟಿ ಮೂಲಕ ಪ.ಜಾತಿ/ಪ.ಪಂಗಡ ಸಮುದಾಯಗಳ ಸಮಸ್ಯೆ ಪರಿಹರಿಸಿ : ಶುಭ ಕಲ್ಯಾಣ್
    ತುಮಕೂರು December 17, 2024

    ಸ್ಥಳ ಭೇಟಿ ಮೂಲಕ ಪ.ಜಾತಿ/ಪ.ಪಂಗಡ ಸಮುದಾಯಗಳ ಸಮಸ್ಯೆ ಪರಿಹರಿಸಿ : ಶುಭ ಕಲ್ಯಾಣ್

    By adminDecember 17, 2024No Comments2 Mins Read
    sc st meeting

    ತುಮಕೂರು:  ಪ.ಜಾತಿ/ಪ.ಪಂಗಡ ಸಮುದಾಯಗಳ ಸಮಸ್ಯೆಗಳನ್ನು ಖುದ್ದು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪರಿಹಾರ ದೊರಕಿಸಿಕೊಡಬೇಕು ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅಧಿಕಾರಿಗಳಿಗೆ ಸೂಚನೆ ನೀಡಿದರು.

    ನಗರದ ಗುಬ್ಬಿ ವೀರಣ್ಣ ಕಲಾ ಕ್ಷೇತ್ರದಲ್ಲಿ ಸೋಮವಾರ ನಡೆದ ಜಿಲ್ಲಾ ಮಟ್ಟದ ಪ.ಜಾತಿ ಮತ್ತು ಪ.ಪಂಗಡಗಳ ಕುಂದುಕೊರತೆ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಪ.ಜಾತಿ ಮತ್ತು ಪ.ಪಂಗಡಗಳ ಸ್ಮಶಾನ ಭೂಮಿ ಅಭಿವೃದ್ಧಿ, ನಿವೇಶನ ಹಂಚಿಕೆ, ಸಾಗುವಳಿ ಚೀಟಿ, ಮೂಲಭೂತ ಸೌಕರ್ಯ ಸೇರಿದಂತೆ ವಿವಿಧ ಸಮಸ್ಯೆಗಳ ಬಗ್ಗೆ ಕುಂದು ಕೊರತೆ ಸಭೆಗಳಲ್ಲಿ ಸಲ್ಲಿಕೆಯಾಗುವ ಅರ್ಜಿಗಳನ್ನು ಪರಿಶೀಲಿಸಿ ತಾಲ್ಲೂಕು ಹಂತದಲ್ಲೇ ವಿಲೇವಾರಿ ಮಾಡಬೇಕು ಎಂದು ತಿಳಿಸಿದರು.

    ಜಿಲ್ಲೆಯ ಹಲವಾರು ಗ್ರಾಮಗಳಲ್ಲಿನ ಪ.ಜಾತಿ ಮತ್ತು ಪ.ಪಂಗಡಗಳ ಸ್ಮಶಾನ ಭೂಮಿ ಸಮಸ್ಯೆಗೆ ಪರಿಹಾರ ದೊರಕಿಸಿಕೊಡದಿರುವ ಬಗ್ಗೆ ಸಮುದಾಯದ ಮುಖಂಡರ ಪ್ರಶ್ನೆಗೆ ಉತ್ತರಿಸಿದ ಅವರು ಜಿಲ್ಲೆಯ ಪ್ರತಿಯೊಂದು ಗ್ರಾಮ ಪಂಚಾಯಿತಿಗಳಲ್ಲೂ ಸ್ಮಶಾನಕ್ಕಾಗಿ ಪ್ರತ್ಯೇಕ ಭೂಮಿಯನ್ನು ಮೀಸಲಿಟ್ಟಿದ್ದು, ಜಿ.ಪಿ.ಎಸ್ ಮೂಲಕ ಸರ್ವೇ ನಡೆಸಿ ಸ್ಮಶಾನ ಭೂಮಿಗೆ ಆವರಣ ಗೋಡೆ ನಿರ್ಮಾಣದ ಜೊತೆಗೆ ಸ್ಮಶಾನ ಭೂಮಿಯನ್ನು ಅಭಿವೃದ್ಧಿ ಪಡಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

    ತುರುವೇಕೆರೆ ತಾಲ್ಲೂಕಿನ ಚಿಕ್ಕ ತುರುವೇಕೆರೆ ದಲಿತ ಕಾಲೋನಿಯ ಜನರು ರಸ್ತೆ, ಚರಂಡಿ ಸೇರಿದಂತೆ ವಿವಿಧ ಮೂಲಭೂತ ಸೌಕರ್ಯಗಳಿಲ್ಲದೆ ಹಲವು ಸಮಸ್ಯೆಗಳನ್ನು ಎದುರಿಸುತ್ತಿರುವ ಬಗ್ಗೆ ಪ್ರಶ್ನಿಸಿದ ದಲಿತ ಮುಖಂಡರಿಗೆ ಉತ್ತರಿಸಿದ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ.ಪ್ರಭು ಅವರು, ತಾಲ್ಲೂಕು ಕಾರ್ಯ ನಿರ್ವಾಹಕ ಅಧಿಕಾರಿ ಮತ್ತು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ನಾಳೆಯೇ ಗ್ರಾಮಕ್ಕೆ ಭೇಟಿ ನೀಡಲಿದ್ದು ಅಗತ್ಯ ಕ್ರಿಯಾ ಯೋಜನೆ ತಯಾರಿಸಿ ಶೀಘ್ರವಾಗಿ ಕಾಮಗಾರಿ ಪ್ರಾರಂಭಿಸಲಿದ್ದಾರೆ ಎಂದು ತಿಳಿಸಿದರು.

    ತುರುವೇಕೆರೆ ತಾಲ್ಲೂಕು ಬಾಣಸಂದ್ರ ಗ್ರಾಮದಲ್ಲಿ ಕಳಪೆ ಕಾಮಗಾರಿ ನಡೆಸಲಾಗಿದೆ ಎಂಬ ಮುಖಂಡರ ಆರೋಪಕ್ಕೆ ಉತ್ತರಿಸಿದ ಅವರು ಜಿಲ್ಲೆಯಲ್ಲಿ ಗುಣಮಟ್ಟದ ಕಾಮಗಾರಿಗಳಿಗೆ ಆದ್ಯತೆ ನೀಡಲಾಗುತ್ತಿದ್ದು, ಜಿಲ್ಲೆಯ ಯಾವುದೇ ಭಾಗದಲ್ಲಿ ಕಳಪೆ ಕಾಮಗಾರಿ ನಡೆಯುತ್ತಿರುವ ಬಗ್ಗೆ ಸಾರ್ವಜನಿಕರು ದೂರು ನೀಡಿದರೆ ಅಂತಹ ಕಾಮಗಾರಿಗಳನ್ನು ಪರಿಶೀಲಿಸಿ ತಪ್ಪಿತಸ್ಥರ ವಿರುದ್ದ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

    ತುರುವೇಕೆರೆ ತಾಲ್ಲೂಕಿನ ದಂಡಿನ ಶಿವರದಲ್ಲಿ ಡಾ: ಬಿ.ಆರ್.ಅಂಬೇಡ್ಕರ್ ವಸತಿ ಶಾಲೆ ನಿರ್ಮಾಣ ಮಾಡಲು ಭೂಮಿ ಮಂಜೂರಾಗಿದ್ದರೂ ಕಟ್ಟಡ ಕಾಮಗಾರಿ ಕೈಗೊಳ್ಳದಿರುವ ಬಗ್ಗೆ ಪ್ರಶ್ನಿಸಿದ ಮುಖಂಡರಿಗೆ ಉತ್ತರಿಸಿದ ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಕೃಷ್ಣಪ್ಪ ಅವರು, ವಸತಿ ಶಾಲೆ ಕಟ್ಟಡ ನಿರ್ಮಾಣಕ್ಕಾಗಿ ಸರ್ಕಾರಕ್ಕೆ 28 ಕೋಟಿ ರೂ. ಅನುದಾನ ಬಿಡುಗಡೆ ಮಾಡಲು ಬೇಡಿಕೆ ಸಲ್ಲಿಸಿದ್ದು, ಸರ್ಕಾರದಿಂದ ಅನುದಾನ ಬಂದ ತಕ್ಷಣ ಕಟ್ಟಡ ನಿರ್ಮಾಣ ಮಾಡಲಾಗುತ್ತದೆ ಎಂದು ತಿಳಿಸಿದರು.

    ಪ.ಜಾತಿ ಮತ್ತು ಪ.ಪಂಗಡದ ಸಮುದಾಯಗಳು ಅನೇಕ ವರ್ಷಗಳಿಂದ ಎದುರಿಸುತ್ತಿರುವ ಸಮಸ್ಯೆಗಳನ್ನು ಬಗೆಹರಿಸುವಂತೆ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರೂ ಸಹ ಸಮಸ್ಯೆ ಬಗೆಹರಿಯದೆ ಉಳಿದುಕೊಂಡಿದೆ. ಸಮಸ್ಯೆಗಳಿಗೆ ಶೀಘ್ರವಾಗಿ ಪರಿಹಾರ ದೊರಕಿಸಿಕೊಡಬೇಕೆಂದು ಜಿಲ್ಲೆಯ ದಲಿತ ಮುಖಂಡರು ಜಿಲ್ಲಾಧಿಕಾರಿಗಳಿಗೆ ಬೇಡಿಕೆಯಿಟ್ಟರು.

    ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ. ಅಶೋಕ್, ಮಹಾನಗರ ಪಾಲಿಕೆ ಆಯುಕ್ತ ಬಿ.ವಿ. ಅಶ್ವಿಜ, ಉಪ ಅರಣ್ಯ ಸಂರಕ್ಷಣಾಧಿಕಾರಿ ಅನುಪಮ, ಅಪರ ಜಿಲ್ಲಾಧಿಕಾರಿ ಡಾ: ಎನ್.ತಿಪ್ಪೇಸ್ವಾಮಿ, ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ಸಣ್ಣಮಸಿಯಪ್ಪ, ಉಪ ವಿಭಾಗಾಧಿಕಾರಿಗಳಾದ ಗೋಟೂರು ಶಿವಪ್ಪ, ಸಪ್ತಶ್ರೀ, ಗೌರವ್ ಕುಮಾರ್ ಶೆಟ್ಟಿ, ವಿವಿಧ ತಾಲ್ಲೂಕುಗಳ ತಹಶೀಲ್ದಾರ್‌ಗಳು, ಕಾರ್ಯನಿರ್ವಾಹಕ ಅಧಿಕಾರಿಗಳು ಮತ್ತು ಜಿಲ್ಲಾ ಮಟ್ಟದ ಅಧಿಕಾರಿಗಳು ಸೇರಿದಂತೆ ಜಿಲ್ಲೆಯ ದಲಿತ ಮುಖಂಡರು ಉಪಸ್ಥಿತರಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

    admin
    • Website

    Related Posts

    ಬಸವರಾಜ್ ಕನ್ನಾಳೆಗೆ ತುಮಕೂರು ವಿವಿಯಿಂದ ಶಾಕ್‌; ಸಿಂಡಿಕೇಟ್ ಸ್ಥಾನದಿಂದ ವಜಾ

    October 25, 2026

    ತುಮಕೂರಿನಲ್ಲಿ ತುಮುಲ್ ನೇಮಕಾತಿ ವಿವಾದಕ್ಕೆ ಹೊಸ ತಿರುವು; 31 ಅಭ್ಯರ್ಥಿಗಳಿಂದ ಕಾನೂನು ಹೋರಾಟಕ್ಕೆ ಸಿದ್ಧತೆ!

    October 25, 2026

    ತುಮಕೂರಿನಲ್ಲಿ ಚಿರತೆ ಹಿಡಿಯಲು ಹೋದ ಅರಣ್ಯಾಧಿಕಾರಿಗಳಿಗೆ ಗ್ರಾಮಸ್ಥರಿಂದಲೇ ಅಡ್ಡಿ? 15 ಮಂದಿ ವಿರುದ್ಧ ಪೊಲೀಸ್ ಪ್ರಕರಣ!

    October 25, 2026

    Comments are closed.

    Our Picks

    ಕ್ರೆಡಿಟ್ ಕಾರ್ಡ್ ಹೊಂದಿರುವ ಪತಿ ಮೃತಪಟ್ಟರೆ ಸಾಲವನ್ನು ಪತ್ನಿ ತೀರಿಸಬೇಕಾ? ಬ್ಯಾಂಕಿಂಗ್ ನಿಯಮಗಳೇನು?

    October 26, 2026

    PM Kisan ಹಣ ಯಾವಾಗ ಬರುತ್ತೆ? ರೈತರು ಈ ಕೆಲಸಗಳನ್ನು ಮಾಡದಿದ್ದರೆ ಕಂತು ಸ್ಥಗಿತವಾಗಬಹುದು!

    October 26, 2026

    ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ!  ಹವಾಮಾನ ಇಲಾಖೆಯಿಂದ ಮಹತ್ವದ ಸೂಚನೆ ಇಲ್ಲಿದೆ

    October 24, 2026

    ಪ್ರಧಾನಿ ಮೋದಿ ಯಾವ ಮೊಬೈಲ್ ಬಳಸುತ್ತಾರೆ? ರಹಸ್ಯ ಫೋನ್‌ ಹಿಂದಿನ ಸತ್ಯವೇನು?

    October 24, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    Uncategorized

    ಐಟಿ ಸಂಸ್ಥೆಗಳಲ್ಲಿ ಕನ್ನಡಿಗರಿಗೆ ಉದ್ಯೋಗ ನಿರಾಕರಣೆ: ಸರ್ಕಾರ ಖಡಕ್ ಎಚ್ಚರಿಕೆ, ಖಾಸಗಿ ಮೀಸಲಾತಿ ವಿಧೇಯಕ ಮತ್ತೆ ಮುನ್ನೆಲೆಗೆ!

    October 26, 2026

    ಬೆಂಗಳೂರು: ರಾಜಧಾನಿ ಬೆಂಗಳೂರಿನ ಐಟಿ (IT) ಕಂಪನಿಗಳಲ್ಲಿ ಕನ್ನಡಿಗರನ್ನು ಕಡೆಗಣಿಸಲಾಗುತ್ತಿದೆ ಮತ್ತು ಮಾತೃಭಾಷೆ ಕನ್ನಡ ಎಂಬ ಕಾರಣಕ್ಕೆ ಉದ್ಯೋಗಾವಕಾಶಗಳನ್ನು ನಿರಾಕರಿಸಲಾಗುತ್ತಿದೆ…

    ಕಬ್ಬಿಗೆ ಸೂಕ್ತ ಬೆಲೆ: ಪ್ರತಿಭಟನೆ ವೇಳೆ ರೈತರ ನಡುವೆಯೇ ಬಣ ಬಡಿದಾಟ: ಪ್ರತಿಭಟನಾ ಸಭೆ ರಣರಂಗವಾಯ್ತು!

    October 26, 2026

    ಸಂಜೆ ಚಹಾ ಜೊತೆಗೆ ರುಚಿಕರ ಹಾಗೂ ಗರಿಗರಿಯಾದ ಆಲೂಗಡ್ಡೆ ಫ್ರಿಟರ್ಸ್!

    October 26, 2026

    ದರೋಡೆಕೋರನಿಂದ ಆದಿಕವಿಯವರೆಗೆ; ಮಹರ್ಷಿ ವಾಲ್ಮೀಕಿಯವರ ಬದುಕಿನ ರೋಚಕ ಕಥೆ ಇಲ್ಲಿದೆ

    October 26, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.