ಬೆಂಗಳೂರು: ಹೈಕೋರ್ಟ್ ನಿಂದ ಜಾಮೀನು ಪಡೆದ ಬಳಿಕ ಇಂದು ನಟ ದರ್ಶನ್ ಬಿಜಿಎಸ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ಫಿಸಿಯೋಥೆರಪಿ ಮೂಲಕವೇ ಬೆನ್ನುನೋವು ಗುಣಪಡಿಸಿಕೊಳ್ಳುವ ಪ್ಲ್ಯಾನ್ ಮಾಡಿರುವ ದರ್ಶನ್ ಕುಟುಂಬ ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಿಸಿದೆ. ಆಸ್ಪತ್ರೆಯ ಬಿಲ್ ಸೇರಿದಂತೆ, ಎಲ್ಲಾ ಪ್ರಕ್ರಿಯೆಗಳು ಮುಗಿಯುತ್ತಿದ್ದಂತೆ ದರ್ಶನ್ ತಮ್ಮ ಕಾರಿನಲ್ಲಿ ತೆರಳಿದರು.
ಬೆಳಿಗ್ಗೆ 6 ಗಂಟೆಯಿಂದಲೇ ಪತ್ನಿ ವಿಜಯಲಕ್ಷ್ಮೀ ಆಸ್ಪತ್ರೆಗೆ ಆಗಮಿಸಿದ್ದರು. ನಟ ದರ್ಶನ್ ಪುತ್ರ ವಿನೀಶ್, ನಟ ಧನ್ವೀರ್, ಸಹೋದರ ದಿನಕರ್ ಆಸ್ಪತ್ರೆ ಆವರಣಕ್ಕೆ ಆಗಮಿಸಿದ್ದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx