ಬೀದರ್: ಜಿಲ್ಲೆಯ ಔರಾದ್ ತಾಲ್ಲೂಕಿನ ಸಂತಪೂರ ಹುಬ್ಬಳ್ಳಿಯಲ್ಲಿ ಬ್ಯಾರಿಕೇಡ್ ಅಳವಡಿಕೆ ಮಾಡಬೇಕು ಎಂದು ಇತ್ತೀಚೆಗೆ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಿಗೆ ದಲಿತ ಸಂಘರ್ಷ ಸಮಿತಿ(DSS) ಮನವಿ ಮಾಡಿತ್ತು. ಈ ಬಗ್ಗೆ ನಮ್ಮತುಮಕೂರು ಮಾಧ್ಯಮ ವಿವರವಾದ ವರದಿ ಪ್ರಕಟಿಸಿದ ಬೆನ್ನಲ್ಲೇ ಇದೀಗ ಅಧಿಕಾರಿಗಳು ಬ್ಯಾರಿಕೇಡ್ ಅಳವಡಿಕೆ ಮಾಡಿದ್ದಾರೆ.
ನಮ್ಮ ಮನವಿಗೆ ಸ್ಪಂದಿಸಿ ಸಂತಪುರ ಗ್ರಾಮ ಪಂಚಾಯತ್ ಪಿಡಿಒ ಸಂತೋಷ್ ಪಾಟೀಲ್ ಔರಾದ್ ರಾಷ್ಟ್ರೀಯ ಹೆದ್ದಾರಿ ಸಂತಪುರ ಬಸವೇಶ್ವರ ವೃತ್ತದ ಹತ್ತಿರ ಮತ್ತು ಮಸ್ಕಲ್ ಕ್ರಾಸ್ ಹತ್ತಿರ ಬ್ಯಾರಿಕೇಡ್ ಅಳವಡಿಸಿದ್ದಾರೆ ಅವರಿಗೆ ತುಂಬಾ ಧನ್ಯವಾದಗಳು ಎಂದು ಭೀಮವಾದ ದಲಿತ ಸಂಘರ್ಷ ಸಮಿತಿ ಮುಖಂಡರು ತಿಳಿಸಿದರು.
ಇದೇ ವೇಳೆ ಸಾರ್ವಜನಿಕ ಸಮಸ್ಯೆಯ ಬಗ್ಗೆ ವರದಿ ಮಾಡಿ ಅಧಿಕಾರಿ ವರ್ಗಗಳ ಗಮನ ಸೆಳೆದ ನಮ್ಮತುಮಕೂರು ವಾಹಿನಿಗೆ ಗ್ರಾಮಸ್ಥರು ಹಾಗೂ ಸಂಘಟನೆಯ ಮುಖಂಡರು ಧನ್ಯವಾದಗಳನ್ನು ಸಲ್ಲಿಸಿದರು. ಈ ಸಂದರ್ಭದಲ್ಲಿ ಸಂತಪೂರ ಪಿ.ಎಸ್.ಐ. ನಂದಕುಮಾರ್ ಉಪಸ್ಥಿತರಿದ್ದರು.
ವರದಿ: ಅರವಿಂದ ಮಲ್ಲಿಗೆ, ಬೀದರ್
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx