ಹಿರಿಯೂರು: ಖಾಸಗಿ ಬಸ್ಸೊಂದು ರಸ್ತೆ ಮಧ್ಯೆಯೇ ಹೊತ್ತಿ ಉರಿದ ಘಟನೆ ಚಿತ್ರದುರ್ಗ ಜಿಲ್ಲೆಯ ಹಿರಿಯೂರಿನ ಗುಯಿಲಾಳ್ ಟೋಲ್ ಬಳಿ ಶನಿವಾರ ಬೆಳಗ್ಗೆ ನಡೆದಿದೆ.
ಪುಣೆ–ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಈ ಘಟನೆ ನಡೆದಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ
ಖಾಸಗಿ ಬಸ್ ನ ಟಯರ್ ಸ್ಫೋಟಗೊಂದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ. ಬೆಂಕಿ ಹತ್ತಿಕೊಂಡ ತಕ್ಷಣವೇ ಎಚ್ಚೆತ್ತ ನಿರ್ವಾಹಕ ಪ್ರಯಾಣಿಕರನ್ನು ಕೆಳಗಿಳಿಸಿದ್ದಾರೆ. ಇದರಿಂದ ಎಲ್ಲಾ ಪ್ರಯಾಣಿಕರು ಸುರಕ್ಷಿತವಾಗಿ ಪಾರಾಗಿದ್ದಾರೆ.
ಖಾಸಗಿ ಬಸ್ಸು ದಾವಣಗೆರೆಯಿಂದ ಬೆಂಗಳೂರು ಕಡೆಗೆ ಸಂಚರಿಸುತ್ತಿತ್ತು. ಬಸ್ ನಲ್ಲಿ ಸುಮಾರು 30ಕ್ಕೂ ಹೆಚ್ಚು ಪ್ರಯಾಣಿಕರು ಪ್ರಯಾಣಿಸುತ್ತಿದ್ದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx