ಬೆಂಗಳೂರು: ರಾಜ್ಯದಲ್ಲಿ ಏನೇ ಆದರೂ ನಾನೇ ಕಾರಣನಾ? ಬಿಜೆಪಿಯವರ ಮನೆಯಲ್ಲಿ, ಪಕ್ಷದಲ್ಲಿ ಅಷ್ಟೇ ಯಾಕೆ, ಅವರ ಹೊಟ್ಟೆ ಒಳಗೆ ಏನಾದ್ರೂ ನಾನೇ ಕಾರಣನಾ? ಎಂದು ಡಿ.ಕೆ.ಶಿವಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ವಿರುದ್ಧ ಆಕ್ಷೇಪಾರ್ಹ ಪದಬಳಕೆ ಸಂಬಂಧ ಮಾತನಾಡಿದ ಅವರು, ಅವರ ಪಕ್ಷ, ಅವರ ಮುಖಂಡರ ಸಂಸ್ಕ್ರತಿ ಏನು ಎಂಬುದು ಎಲ್ಲರಿಗೂ ಗೊತ್ತಿರುವ ವಿಚಾರ. ಪೊಲೀಸ್ ಉಂಟು, ಕೋರ್ಟ್ ಉಂಟು, ಅಪರಾಧ ಉಂಟು. ರಾಜ್ಯದಲ್ಲಿ ಏನೇ ಆದರೂ ನಾನೇ ಕಾರಣ, ಅವರ ಪಕ್ಷ, ಹೊರಗಡೆ, ಮನೆ, ಹೊಟ್ಟೆ ಒಳಗೆ ಏನಾದ್ರೂ ಎಲ್ಲದಕ್ಕೂ ನಾನೇ ಕಾರಣ. ನನ್ನ ನೆನಸಿಕೊಂಡಿಲ್ಲ ಅಂದ್ರೆ ಅವರಿಗೆ ನಿದ್ದೆ ಬರಲ್ಲ ಎಂದ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕಾನೂನಿಗೆ, ಕೋರ್ಟ್‌ಗೆ ಏನು ಗೌರವ ಕೊಡಬೇಕೊ ಕೊಡುತ್ತೇವೆ. ಕೋರ್ಟ್ ಏನು ಬೇಕೋ ನಿರ್ಧಾರ ತೆಗೆದುಕೊಳ್ಳುತ್ತೆಎಂದು ಡಿ.ಕೆ.ಶಿವಕುಮಾರ್ ಹೇಳಿದರು.
ಅವರು ಮಾತನಾಡಿದ್ದು ಸರೀನಾ ಎಂದು ಕೇಳಿ? ಅವರ ಭಾಷೆ, ಸಂಸ್ಕ್ರತಿಯಿಂದ ಹರುಕು ಬಾಯಿ ಎನ್ನುವುದು ಗೊತ್ತಾಗಿದೆ. ಈ ಹಿಂದೆ ಜಯಮಾಲಾಗೂ ಮಾತಾಡಿದ್ರು, ಸಿಎಂ ಬಗ್ಗೆನೂ ಮಾತನಾಡಿದ್ರು, ನಿತ್ಯ ಸುಮಂಗಲಿ ಅಂತ ಹೇಳಿದ್ರು, ಇದು ಸರಿನಾ, ತಪ್ಪಾ? ಎಂದು ಪ್ರಶ್ನಿಸಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx