ಕಲಬುರಗಿ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ ಬಿಜೆಪಿ ಸದಸ್ಯ ಸಿಟಿ ರವಿ ಅವರು ಆಕ್ಷೇಪಾರ್ಹ ಪದ ಬಳಕೆ ಮಾಡಿದ್ದಾರೆ ಎಂಬುದಕ್ಕೆ ಆಡಿಯೋ ಮತ್ತು ವಿಡಿಯೋ ಸಾಕ್ಷ್ಯಗಳಿವೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ಘಟನೆಗೆ ಹಲವು ಎಂಎಲ್ ಸಿಗಳು ಸಾಕ್ಷಿಯಾಗಿದ್ದಾರೆ. ಇದು ಕ್ರಿಮಿನಲ್ ಅಪರಾಧವಾಗಿರುವುದರಿಂದ ನಾವು ಈ ವಿಷಯವನ್ನು ತನಿಖೆ ಮಾಡುತ್ತಿದ್ದೇವೆ. ಹೀಗಿರುವಾಗ ಅವರು (ರವಿ) ನ್ಯಾಯಾಂಗ ತನಿಖೆಗೆ ಏಕೆ ಒತ್ತಾಯಿಸುತ್ತಿದ್ದಾರೆ? ಎಂದು ಸಿದ್ದರಾಮಯ್ಯ ಪ್ರಶ್ನಿಸಿದರು.
ಅವರು ಲಕ್ಷ್ಮಿ ಹೆಬ್ಬಾಳ್ಕರ್ ಅವರ ವಿರುದ್ಧ ಅವಹೇಳನಕಾರಿ ಭಾಷೆಯನ್ನು ಬಳಸಿದ್ದಾರೆ ಎಂಬುದಕ್ಕೆ ಆಡಿಯೋ ಮತ್ತು ವಿಡಿಯೋ ಪುರಾವೆಗಳಿವೆ. ಅನೇಕ ಎಂಎಲ್ಸಿಗಳು ಅವರು ಅಂದಿದ್ದನ್ನು ಕೇಳಿದ್ದಾರೆ. ಇದು ಕ್ರಿಮಿನಲ್ ಅಪರಾಧಕ್ಕೆ ಸಮಾನವಾಗಿದೆ, ಅಲ್ಲವೇ? ಎಂದು ಕೇಳಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx