nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕುಲವಿಲ್ಲದ ನೆಲೆಗಾಗಿ ನಡೆದಾಡಿದ ಸಂತ ಕವಿ ಕನಕದಾಸರು: ಬಿಡಗಲು ಶಿವಣ್ಣ ಅಭಿಮತ

    November 9, 2025

    ಸಾಮಾಜಿಕ ನ್ಯಾಯ ಎತ್ತಿ ಹಿಡಿದವರು ಕನಕದಾಸರು: ಎಂ.ಬಿ.ಆನಂದ

    November 9, 2025

    ರಾಜ್ಯ ಮಟ್ಟದ ಕನ್ನಡ ಸೇವಾರತ್ನ ಪ್ರಶಸ್ತಿಗೆ ಡಾ.ಸತ್ಯಕ್ಕ ಗಡ್ಡೆ ಆಯ್ಕೆ

    November 9, 2025
    Facebook Twitter Instagram
    ಟ್ರೆಂಡಿಂಗ್
    • ಕುಲವಿಲ್ಲದ ನೆಲೆಗಾಗಿ ನಡೆದಾಡಿದ ಸಂತ ಕವಿ ಕನಕದಾಸರು: ಬಿಡಗಲು ಶಿವಣ್ಣ ಅಭಿಮತ
    • ಸಾಮಾಜಿಕ ನ್ಯಾಯ ಎತ್ತಿ ಹಿಡಿದವರು ಕನಕದಾಸರು: ಎಂ.ಬಿ.ಆನಂದ
    • ರಾಜ್ಯ ಮಟ್ಟದ ಕನ್ನಡ ಸೇವಾರತ್ನ ಪ್ರಶಸ್ತಿಗೆ ಡಾ.ಸತ್ಯಕ್ಕ ಗಡ್ಡೆ ಆಯ್ಕೆ
    • ನರಹಂತಕ ವ್ಯಾಘ್ರನ ಸೆರೆ: ಜನರ ನಿದ್ದೆಗೆಡಿಸಿದ 9 ವರ್ಷದ ಹುಲಿಯನ್ನು ಹಿಡಿದ ಅರಣ್ಯ ಇಲಾಖೆ
    • ನರಹಂತಕ ಹುಲಿಯ ಸೆರೆಗಾಗಿ ಮುಂದುವರಿದ ಕಾರ್ಯಾಚರಣೆ: ಡ್ರೋನ್‌ ಕ್ಯಾಮೆರಾದಲ್ಲಿ ಹುಲಿ ಪತ್ತೆ!
    • ಮಧುಗಿರಿ: ಎರಡು ವರ್ಷದ ಚಿರತೆ ಸೆರೆ
    • ಶೈಕ್ಷಣಿಕ ಮತ್ತು ಸಾಂಸ್ಕೃತಿಕ ರಂಗಕ್ಕೆ ಕನಕದಾಸರ ಕೊಡುಗೆ ಅಪಾರ: ಪ.ಪಂ. ಅಧ್ಯಕ್ಷ  ಶಿವಕುಮಾರ್
    • ಪ್ರತಿ ಟನ್ ಕಬ್ಬಿಗೆ ₹3,300 ದರ ನಿಗದಿಗೆ ತೀರ್ಮಾನ:  ಸಿಎಂ ಸಿದ್ದರಾಮಯ್ಯ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಭಾರತ ಸಂವಿಧಾನ: ವಿವಿಧತೆಯಲ್ಲಿ ಏಕತೆ ಸಾರುವ ಮಾದರಿ ಪ್ರಜಾತಂತ್ರ ವ್ಯವಸ್ಥೆಯಾಗಿದೆ: ಸಚಿವ ಅರಗ ಜ್ಞಾನೇಂದ್ರ
    ರಾಜ್ಯ ಸುದ್ದಿ January 26, 2022

    ಭಾರತ ಸಂವಿಧಾನ: ವಿವಿಧತೆಯಲ್ಲಿ ಏಕತೆ ಸಾರುವ ಮಾದರಿ ಪ್ರಜಾತಂತ್ರ ವ್ಯವಸ್ಥೆಯಾಗಿದೆ: ಸಚಿವ ಅರಗ ಜ್ಞಾನೇಂದ್ರ

    By adminJanuary 26, 2022No Comments3 Mins Read
    araga

    ಭಾರತೀಯ ಸಂವಿಧಾನವು ವಿವಿಧ ಧರ್ಮ, ಬಣ್ಣ, ಭಾಷೆ, ಸಂಸ್ಕೃತಿ, ಆಚಾರ-ವಿಚಾರಗಳ ವೈವಿಧ್ಯತೆಯ ನಡುವೆ ದೇಶದ ಏಕತೆಯನ್ನು ಸಾರುವ ಮಾದರಿ ಪ್ರಜಾತಂತ್ರ ವ್ಯವಸ್ಥೆಯಾಗಿದೆ ಎಂದು ಗೃಹ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಅರಗ ಜ್ಞಾನೇಂದ್ರ ತಿಳಿಸಿದರು.

    ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ಜಿಲ್ಲಾಡಳಿತದ ವತಿಯಿಂದ ಆಯೋಜಿಸಲಾಗಿದ್ದ ೭೩ನೇ ಗಣರಾಜ್ಯೋತ್ಸವ ಸಮಾರಂಭದಲ್ಲಿ ಧ್ವಜಾರೋಹಣ ನೆರವೇರಿಸಿ, ಗೌರವರಕ್ಷೆ ಸ್ವೀಕರಿಸಿ ಮಾತನಾಡಿದ ಅವರು, ಭಾರತ ದೇಶವು ಸ್ವಾತಂತ್ರö್ಯ ಪಡೆದ ಬಳಿಕ ಸಂಪೂರ್ಣ ಕಾರ್ಯೋನ್ಮುಖವಾದ ಸಂವಿಧಾನ ರಚನಾ ಸಮಿತಿಯು ೨ ವರ್ಷಗಳ ಕಾಲ ನಿರಂತರ ಶ್ರಮವಹಿಸಿ ಸಂವಿಧಾನದ ಪ್ರಾಥಮಿಕ ಕರಡು ಪ್ರತಿಯನ್ನು ಸಿದ್ಧಪಡಿಸಿತು. ನಂತರ ಸಂವಿಧಾನದ ಕರಡು ಪ್ರತಿಯ ಬಗ್ಗೆ ಚರ್ಚೆ ನಡೆದು ಅಂತಿಮವಾಗಿ ೧೯೪೯ರ ನವೆಂಬರ್ ೨೬ರಂದು ಸಂವಿಧಾನವನ್ನು ಅಂಗೀಕರಿಸಲಾಯಿತು.
    ವಿಧಿಗಳು, ಅನುಸೂಚಿಗಳು ಹಾಗೂ ಅಧ್ಯಾಯಗಳನ್ನೊಳಗೊಂಡ ಭಾರತ ಸಂವಿಧಾನವು ೧೯೫೦ರ ಜನವರಿ ೨೬ರಂದು ಜಾರಿಗೆ ಬಂದಿತು. ಇದೇ ದಿನವನ್ನು ಪ್ರತಿ ವರ್ಷ ಗಣರಾಜ್ಯ ದಿನವನ್ನಾಗಿ ಆಚರಿಸಲಾಗುತ್ತಿದೆ ಎಂದರು.


    Provided by
    Provided by

    ಸಿದ್ಧಗಂಗಾ ಮಠದ ತ್ರಿವಿಧ ದಾಸೋಹಿ ಪದ್ಮಭೂಷಣ ಡಾ. ಶ್ರೀ ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿ ಅವರು ಲಿಂಗೈಕ್ಯರಾಗಿ ೩ ವರ್ಷ ಸಂದಿದ್ದು, ಪೂಜ್ಯ ಸ್ವಾಮೀಜಿಯವರು ಲಿಂಗೈಕ್ಯರಾದ ದಿನವಾದ ಜನವರಿ ೨೧ನ್ನು ರಾಜ್ಯ ಸರ್ಕಾರವು ದಾಸೋಹ ದಿನವೆಂದು ಘೋಷಿಸಿದೆ. ಈ ನಿಟ್ಟಿನಲ್ಲಿ ಸರ್ಕಾರವು ಅನ್ನ, ಅಕ್ಷರ ಹಾಗೂ ಆಶ್ರಯ ಪರಿಕಲ್ಪನೆಯಲ್ಲಿ ಹಲವಾರು ಕಾರ್ಯಕ್ರಮಗಳನ್ನು ರೂಪಿಸಿದೆಯಲ್ಲದೆ, ರಾಜ್ಯಾದ್ಯಂತ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಶ್ರೀಗಳ ಭಾವಚಿತ್ರವನ್ನು ಅಳವಡಿಸಲು ಸುತ್ತೋಲೆ ಹೊರಡಿಸಿದ್ದು, ಈಗಾಗಲೇ ಪೂಜ್ಯ ಶ್ರೀ ಶಿವಕುಮಾರ ಸ್ವಾಮಿಯವರ ಮಂದಸ್ಮಿತ ಭಾವಚಿತ್ರಗಳನ್ನು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಮೂಲಕ ಎಲ್ಲ ಸರ್ಕಾರಿ ಕಚೇರಿಗಳಿಗೆ ವಿತರಿಸಲಾಗಿದೆ
    ಎಂದು ತಿಳಿಸಿದರು.

    ಪ್ರಪಂಚದ ಹಲವಾರು ಸಂವಿಧಾನಗಳನ್ನು ಆಳವಾಗಿ ಅಧ್ಯಯನ ಮಾಡಿ, ಭಾರತೀಯ ಸಮಾಜಕ್ಕೆ ಪೂರಕವಾಗುವ ಉತ್ತಮ ಅಂಶಗಳನ್ನು ನಮ್ಮ ಸಂವಿಧಾನದಲ್ಲಿ ಅಳವಡಿಸಿ ದೇಶಕ್ಕೆ ಅರ್ಪಣೆ ಮಾಡಿದ ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್ ಅವರ ಕಾರ್ಯ ಚಿರಸ್ಮರಣೀಯ. ಸಂವಿಧಾನ ರಚನಾಕಾರರಲ್ಲಿ ಒಬ್ಬರಾದ ಕರ್ನಾಟಕದ ಹೆಮ್ಮೆಯ ಪುತ್ರ ಬೆನಗಲ್ ನರಸಿಂಹರಾವ್ ಅವರೂ ಕೂಡ ಉತ್ತಮ ಅಂಶಗಳನ್ನು ನಮ್ಮ ಸಂವಿಧಾನಕ್ಕೆ ಸೇರಿಸಿದ್ದಾರೆ.

    ವಿವಿಧತೆಯಲ್ಲಿ ಏಕತೆ, ವೈವಿಧ್ಯಮಯ ಸಂಸ್ಕೃತಿ, ಶ್ರೀಮಂತ ಇತಿಹಾಸವು ಸಮಗ್ರ ಭಾರತದ ಪರಿಕಲ್ಪನೆಯ
    ಅಡಿಪಾಯಗಳಾಗಿದ್ದು, ಶಾಂತಿ, ಅಹಿಂಸೆ, ಸಮಾನತೆ, ಸಹಬಾಳ್ವೆ ಮತ್ತು ಸರ್ವಧರ್ಮ ಸಹಿಷ್ಣುತೆ ನಮ್ಮ ಗಣತಂತ್ರ ವ್ಯವಸ್ಥೆಯ ಮೂಲ ಆಶಯವಾಗಿದೆ ಎಂದರು.

    ಮುಖ್ಯಮಂತ್ರಿ ಅವರು ೯೯ ಕೋಟಿ ರೂ. ಅಂದಾಜು ವೆಚ್ಚದಲ್ಲಿ ೧೦೦ ಹಾಸಿಗೆಗಳುಳ್ಳ “ಪೆರಿಫೆರಲ್ ಕ್ಯಾನ್ಸರ್ ಕೇಂದ್ರ”, ೨೦
    ಕೋಟಿ ರೂ. ವೆಚ್ಚದಲ್ಲಿ ೧೦೦ ಹಾಸಿಗೆಗಳುಳ್ಳ “ತಾಯಿ-ಮಕ್ಕಳ ಆಸ್ಪತ್ರೆ” ಹಾಗೂ ೫೦ಲಕ್ಷ ರೂ. ವೆಚ್ಚದಲ್ಲಿ ೧೦ ಹಾಸಿಗೆಗಳುಳ್ಳ “ಪೌಷ್ಟಿಕ ಪುನಃಶ್ಚೇತನ ಕೇಂದ್ರ”ಗಳ ನೂತನ ಕಟ್ಟಡ ನಿರ್ಮಾಣಕ್ಕೆ ಶಂಕು ಸ್ಥಾಪನೆಯನ್ನು ಈಗಾಗಲೇ ನೆರವೇರಿಸಿದ್ದು,
    ಜಿಲ್ಲೆಯನ್ನು ಅಭಿವೃದ್ಧಿ ಪಥದತ್ತ ಸಾಗಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದರು.

    ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಕೋವಿಡ್-೧೯ ಸೋಂಕನ್ನು ನಿಯಂತ್ರಿಸಲು ಎಲ್ಲಾ ತಾಲೂಕುಗಳಲ್ಲಿಯೂ ಆಕ್ಸಿಜûನ್ ಪ್ಲಾಂಟ್‌ ಗಳ ಕಾರ್ಯಾರಂಭ ಮಾಡಲಾಗಿದೆ. ಕೋವಿಡ್ ಪರೀಕ್ಷೆ ನಡೆಸಲು ಜಿಲ್ಲೆಯ ಶಿರಾ, ತಿಪಟೂರು ಹಾಗೂ ತುಮಕೂರು ತಾಲೂಕುಗಳಲ್ಲಿ ಆರ್‌ ಟಿಪಿಸಿಆರ್ ಲ್ಯಾಬ್‌ ಗಳನ್ನು ತೆರೆಯಲಾಗಿದೆ.

    ಜಿಲ್ಲೆಯಲ್ಲಿ ಕೋವಿಡ್ ಲಸಿಕೆಯ ಮೊದಲನೇ ಡೋಸ್ ಅನ್ನು ಶೇ.೧೦೦ರಷ್ಟು ಹಾಗೂ ಶೇ.೮೫ರಷ್ಟು ಎರಡನೇ ಡೋಸ್ ಲಸಿಕಾಕರಣವನ್ನು ಪೂರ್ಣಗೊಳಿಸಲಾಗಿದೆಯಲ್ಲದೆ, ೧೫-೧೮ ವರ್ಷದೊಳಗಿನ ೮೦,೦೦೦ ಮಕ್ಕಳಿಗೆ ಕೋವಿಡ್ ಲಸಿಕೆ ನೀಡುವ ಮೂಲಕ ಶೇ.೬೫ರಷ್ಟು ಗುರಿ ಸಾಧಿಸಲಾಗಿದೆ. ಬೂಸ್ಟರ್ ಡೋಸ್‌ ಗೆ ಸಂಬಂಧಿಸಿದಂತೆ ಶೇ.೬೦ರಷ್ಟು ಆರೋಗ್ಯ ಕಾರ್ಯಕರ್ತರು, ಶೇ. ೫೨ರಷ್ಟು ಮುಂಚೂಣಿ ಕಾರ್ಯಕರ್ತರಿಗೆ ಲಸಿಕೆ ನೀಡಲಾಗಿದೆ ಎಂದರು.

    ಜಿಲ್ಲೆಯಲ್ಲಿ ಕೋವಿಡ್-೧೯ ಹರಡುವಿಕೆ ಹೆಚ್ಚಾಗಿದ್ದರೂ ಶೇ.೧ರಿಂದ ೩ರಷ್ಟು ಮಾತ್ರ ಸೋಂಕಿತರು ಆಸ್ಪತ್ರೆಗೆ ದಾಖಲಾಗಿದ್ದು,
    ಉಳಿದಂತೆ ಹೋಂ ಐಸೋಲೇಷನ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಸಾರ್ವಜನಿಕರು ಸಾಮಾಜಿಕ ಅಂತರ ಕಾಯ್ದುಕೊಂಡು, ಮಾಸ್ಕ್ ಧರಿಸುವ ಮೂಲಕ ಕೋವಿಡ್ ಹರಡುವಿಕೆಯನ್ನು ತಡೆಗಟ್ಟಬೇಕೆಂದು ಸಾರ್ವಜನಿಕರಲ್ಲಿ ಮನವಿ ಮಾಡಿದರು.
    ಧ್ವಜಾರೋಹಣ ಕಾರ್ಯಕ್ರಮದಲ್ಲಿ ನಗರ ಶಾಸಕ ಜಿ.ಬಿ.ಜ್ಯೋತಿ ಗಣೇಶ್, ಮೇಯರ್ ಬಿ.ಜಿ. ಕೃಷ್ಣಪ್ಪ, ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಹುಲ್ ಕುಮಾರ್ ಶಹಪೂರ್ ವಾಡ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕೆ. ವಿದ್ಯಾಕುಮಾರಿ, ಉಪವಿಭಾಗಾಧಿಕಾರಿ ಅಜಯ್, ತಹಶೀಲ್ದಾರ್ ಜಿ. ಮೋಹನ್ ಕುಮಾರ್ ಸೇರಿದಂತೆ ವಿವಿಧ ಅಧಿಕಾರಿ/ ಸಿಬ್ಬಂದಿಗಳು, ಸಾರ್ವಜನಿಕರು ಪಾಲ್ಗೊಂಡಿದ್ದರು.

    ಈ ಸಂದರ್ಭದಲ್ಲಿ ವಿವಿಧ ಕ್ರೀಡಾ ಕ್ಷೇತ್ರಗಳಲ್ಲಿ ಸಾಧನೆ ಮಾಡಿದವರಿಗೆ ಸನ್ಮಾನ ಮಾಡಲಾಯಿತು.
    ನಂತರ ಸಚಿವರು ಪತ್ರಿಕಾ ಗೋಷ್ಠಿಯನ್ನುದ್ದೇಶಿಸಿ ಮಾತನಾಡುತ್ತಾ, ಅನಿರೀಕ್ಷಿತವಾಗಿ ನನಗೆ ತುಮಕೂರು ಜಿಲ್ಲಾ
    ಉಸ್ತುವಾರಿ ಸಚಿವ ಸ್ಥಾನ ದೊರಕಿದೆ ಎಂದು ಸಂತಸ ವ್ಯಕ್ತಪಡಿಸಿದರು.

    ಬೆಂಗಳೂರಿಗೆ ಪರ್ಯಾಯವಾಗಿ ಬೆಳೆಯುತ್ತಿರುವ ಜಿಲ್ಲೆಯನ್ನು ಎಲ್ಲಾ ರೀತಿಯಿಂದಲೂ ಅಭಿವೃದ್ಧಿಯತ್ತ ಕೊಂಡೊಯ್ಯಲು
    ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ಸಹಕಾರದೊಂದಿಗೆ ಶ್ರಮಿಸುತ್ತೇನೆ ಎಂದು ತಿಳಿಸಿದರು. ಇತ್ತೀಚೆಗೆ ವರದಿಯಾದ ಬಂಧಿಖಾನೆಯಲ್ಲಿ ನಡೆದ ಅನಧಿಕೃತ ಚಟುವಟಿಕೆಗಳ ಕುರಿತು ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಅವರು, ತಪ್ಪಿತಸ್ಥರನ್ನು ಶೀಘ್ರವಾಗಿ ಶಿಕ್ಷೆಗೆ ಒಳಪಡಿಸಲು ಕ್ರಮ ಕೈಗೊಳ್ಳಲಾಗುವುದು ಎಂದರಲ್ಲದೆ, ಪೊಲೀಸ್ ಇಲಾಖೆಯ ಅಧಿಕಾರಿ/ಸಿಬ್ಬಂದಿಗಳಿಗೆ ಮುಂಬಡ್ತಿ ನೀಡುವ ಸಂಬಂಧ  ಈಗಾಗಲೇ ಕ್ರಮ ಕೈಗೊಳ್ಳಲಾಗುತ್ತಿದೆ. ರಾಜ್ಯದಲ್ಲಿ ಸುಮಾರು ೨೦೦ ಕೋಟಿ ರೂ. ವೆಚ್ಚದಲ್ಲಿ ೧೦೦ ಪೊಲೀಸ್ ಠಾಣೆಗಳ ನಿರ್ಮಾಣ ಮಾಡಲಾಗುವುದು ಎಂದು ಸಚಿವರು ತಿಳಿಸಿದರು.

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಪ್ರತಿ ಟನ್ ಕಬ್ಬಿಗೆ ₹3,300 ದರ ನಿಗದಿಗೆ ತೀರ್ಮಾನ:  ಸಿಎಂ ಸಿದ್ದರಾಮಯ್ಯ

    November 8, 2025

    ಬೈಕ್ ಟಾಕ್ಸಿ ಚಾಲಕನಿಂದ ಮಹಿಳೆಗೆ ಲೈಂಗಿಕ ಕಿರುಕುಳ

    November 8, 2025

    ಪವಿತ್ರಾ ಗೌಡ ಜಾಮೀನು ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್!

    November 8, 2025

    Leave A Reply Cancel Reply

    Our Picks

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025

    ಸರ್ಕಾರಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇಲಿ ಕಚ್ಚಿ ನವಜಾತ ಶಿಶು ಸಾವು!

    September 4, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಕುಲವಿಲ್ಲದ ನೆಲೆಗಾಗಿ ನಡೆದಾಡಿದ ಸಂತ ಕವಿ ಕನಕದಾಸರು: ಬಿಡಗಲು ಶಿವಣ್ಣ ಅಭಿಮತ

    November 9, 2025

    ಸರಗೂರು :  ಕನಕದಾಸರು ಕುಲವಿಲ್ಲದ ನೆಲೆಗಾಗಿ ನಡೆದಾಡಿದ ಸಂತ ಕವಿ ಮತ್ತು ದಾರ್ಶನಿಕ 15 — 16ನೇ ಶತಮಾನದಲ್ಲಿ ಜಾತಿ…

    ಸಾಮಾಜಿಕ ನ್ಯಾಯ ಎತ್ತಿ ಹಿಡಿದವರು ಕನಕದಾಸರು: ಎಂ.ಬಿ.ಆನಂದ

    November 9, 2025

    ರಾಜ್ಯ ಮಟ್ಟದ ಕನ್ನಡ ಸೇವಾರತ್ನ ಪ್ರಶಸ್ತಿಗೆ ಡಾ.ಸತ್ಯಕ್ಕ ಗಡ್ಡೆ ಆಯ್ಕೆ

    November 9, 2025

    ನರಹಂತಕ ವ್ಯಾಘ್ರನ ಸೆರೆ: ಜನರ ನಿದ್ದೆಗೆಡಿಸಿದ 9 ವರ್ಷದ ಹುಲಿಯನ್ನು ಹಿಡಿದ ಅರಣ್ಯ ಇಲಾಖೆ

    November 9, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.