ನವದೆಹಲಿ: ಮಾಜಿ ಪ್ರಧಾನಿ, ಜಾಗತಿಕ ಭಾರತದ ಶಿಲ್ಪಿ ಡಾ.ಮನಮೋಹನ್ ಸಿಂಗ್ ಅವರ ಅಂತ್ಯಕ್ರಿಯೆ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ದೆಹಲಿಯ ನಿಗಮಬೋಧ್ ಘಾಟ್ನಲ್ಲಿ ನೆರವೇರಲಿದೆ.
ಅಂತ್ಯಕ್ರಿಯೆಗೆ ಈಗಾಗಲೇ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ದೆಹಲಿಯ ಕಾಂಗ್ರೆಸ್ ಪ್ರಧಾನ ಕಚೇರಿಯಲ್ಲಿ ಮಾಜಿ ಪ್ರಧಾನಮಂತ್ರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ ಸೇರಿದಂತೆ ಇತರೆ ನಾಯಕರು ಮತ್ತೊಮ್ಮೆ ಅಂತಿಮ ನಮನ ಸಲ್ಲಿಸಿದರು. ಇದೀಗ ಕಾಂಗ್ರೆಸ್ ಕಚೇರಿಯಿಂದ ಮನಮೋಹನ್ ಸಿಂಗ್ ಅವರ ಅಂತಿಮ ಯಾತ್ರೆ ಆರಂಭವಾಗಿದೆ.
ಮನಮೋಹನ್ ಸಿಂಗ್ ವಯೋಸಹಜ ಕಾಯಿಲೆಯಿಂದಾಗಿ ಕೊನೆಯುಸಿರೆಳೆದಿದ್ದಾರೆ. ಮನೆಯಲ್ಲಿ ದಿಢೀರ್ ಪ್ರಜ್ಞೆ ತಪ್ಪಿದ ನಂತರ ಅವರನ್ನು ಏಮ್ಸ್ ಗೆ ದಾಖಲಿಸಲಾಗಿತ್ತು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx