nammatumakuru

    Subscribe to Updates

    Get the latest creative news from FooBar about art, design and business.

    What's Hot

    ಹಳ್ಳಿಯ ವಿದ್ಯಾರ್ಥಿಗಳು ಉನ್ನತ ಹುದ್ದೆಗೇರುವುದೇ ಎಂ.ಎಸ್.ಎ. ಟ್ರಸ್ಟ್‌ನ ಮುಖ್ಯ ಉದ್ದೇಶ: ಶಿವರಾಮ ಶೆಟ್ಟಿ

    August 8, 2026

    ರಾಹುಲ್ ಗಾಂಧಿ ಪ್ರಧಾನಿಯಾಗಲಿ:  ಕಾಟೂರಿ ವೆಂಕಟೇಶ್ವರಲು ಪಾದಯಾತ್ರೆ

    August 8, 2026

    ಆಗಸ್ಟ್ 9ರಂದು ತಿಪಟೂರಿನಲ್ಲಿ ಪ್ರಥಮ ಬಾರಿಗೆ ರಾಜ್ಯಮಟ್ಟದ ಯೋಗ ಚಾಂಪಿಯನ್ಷಿಪ್ ಸ್ಪರ್ಧೆ

    August 8, 2026
    Facebook Twitter Instagram
    ಟ್ರೆಂಡಿಂಗ್
    • ಹಳ್ಳಿಯ ವಿದ್ಯಾರ್ಥಿಗಳು ಉನ್ನತ ಹುದ್ದೆಗೇರುವುದೇ ಎಂ.ಎಸ್.ಎ. ಟ್ರಸ್ಟ್‌ನ ಮುಖ್ಯ ಉದ್ದೇಶ: ಶಿವರಾಮ ಶೆಟ್ಟಿ
    • ರಾಹುಲ್ ಗಾಂಧಿ ಪ್ರಧಾನಿಯಾಗಲಿ:  ಕಾಟೂರಿ ವೆಂಕಟೇಶ್ವರಲು ಪಾದಯಾತ್ರೆ
    • ಆಗಸ್ಟ್ 9ರಂದು ತಿಪಟೂರಿನಲ್ಲಿ ಪ್ರಥಮ ಬಾರಿಗೆ ರಾಜ್ಯಮಟ್ಟದ ಯೋಗ ಚಾಂಪಿಯನ್ಷಿಪ್ ಸ್ಪರ್ಧೆ
    • ಆ.10ರಂದು ರಾಷ್ಟ್ರೀಯ ಜಂತುಹುಳು ನಿವಾರಣಾ ಕಾರ್ಯಕ್ರಮ
    • ಶಿಕ್ಷಣ ನಿಮ್ಮ ಬದುಕಿಗೆ ಭದ್ರ ಬುನಾದಿ: ಶ್ರೀ ಸಿದ್ಧಲಿಂಗ ಮಹಾಸ್ವಾಮಿ
    • ಹೂ ಲೋಕ,  ಭೂರಮೆಯ  ರಥ :  ಪ್ರಕೃತಿ ಮಡಿಲಲ್ಲಿ ಚೆಲುವಿನ ರಥಯಾತ್ರೆ  ವಾಹ್..!
    • ತುಮಕೂರಿನಲ್ಲಿ ಆ.11ರಂದು ನೇರ ಸಂದರ್ಶನ: ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
    • ಕಾಮಗಾರಿ ಸ್ಥಳಕ್ಕೆ ಜಿ.ಪಂ ಸಿಇಒ ಭೇಟಿ: ಶಾಶ್ವತ ಆಸ್ತಿ ನಿರ್ಮಾಣಕ್ಕೆ ಒತ್ತು ನೀಡಲು ಸೂಚನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಬೆಂಗಳೂರು: ಮಾಹಿತಿ ಸೌಧಕ್ಕೆ ಡಾ.ಮನಮೋಹನ್ ಸಿಂಗ್ ಹೆಸರು ಮರುನಾಮಕರಣಕ್ಕೆ ನೈಜಹೋರಾಟಗಾರರ ವೇದಿಕೆ ಒತ್ತಾಯ
    ರಾಜ್ಯ ಸುದ್ದಿ December 29, 2024

    ಬೆಂಗಳೂರು: ಮಾಹಿತಿ ಸೌಧಕ್ಕೆ ಡಾ.ಮನಮೋಹನ್ ಸಿಂಗ್ ಹೆಸರು ಮರುನಾಮಕರಣಕ್ಕೆ ನೈಜಹೋರಾಟಗಾರರ ವೇದಿಕೆ ಒತ್ತಾಯ

    By adminDecember 29, 2024No Comments2 Mins Read
    manamohan singh

    ಬೆಂಗಳೂರು: ಡಾಕ್ಟರ್ ಮನಮೋಹನ್ ಸಿಂಗ್ ಹೆಸರನ್ನು ಕರ್ನಾಟಕದಲ್ಲಿ ಶಾಶ್ವತವಾಗಿ ಉಳಿಸುವ ಕೆಲಸವನ್ನು ಸರ್ಕಾರ ಮಾಡಬೇಕು ಎಂದು ಹಿರಿಯ ಸಾಮಾಜಿಕ ಹೋರಾಟಗಾರ, ನೈಜಹೋರಾಟಗಾರರ ವೇದಿಕೆಯ ಹೆಚ್.ಎಂ.ವೆಂಕಟೇಶ್ ಮನವಿ ಮಾಡಿದ್ದಾರೆ.

    ಪ್ರಪಂಚದಲ್ಲಿಯೇ ಅತ್ಯಂತ ಬಹು ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರ ಎಂದು ಕರೆಯಲ್ಪಡುವ  ಭಾರತ ದೇಶದ ಪ್ರಧಾನಮಂತ್ರಿಯಾಗಿ 10 ವರ್ಷಗಳ ಕಾಲ ಸತತವಾಗಿ ಆಡಳಿತ ನಡೆಸಿದ ನಮ್ಮ ನೆಚ್ಚಿನ ಆರ್ಥಿಕ ತಜ್ಞ ಮಾಜಿ ಪ್ರಧಾನಿ ಡಾಕ್ಟರ್ ಮನಮೋಹನ ಸಿಂಗ್ ಈಗ ನಮ್ಮನ್ನು ಅಗಲಿದ್ದಾರೆ.  ಅವರು ಈ ದೇಶಕ್ಕೆ ನೀಡಿದ ಕೊಡುಗೆ ಮತ್ತು  ಶಾಸನಗಳು/ಯೋಜನೆಗಳು ಹತ್ತು ಹಲವು ಇದರಲ್ಲಿ ಬಹಳ ಮುಖ್ಯವಾಗಿ ಗುರುತಿಸಲ್ಪಡುವ  ಶಾಸನ ಆಡಳಿತದಲ್ಲಿ ಪಾರದರ್ಶಕತೆಯನ್ನು ತರಲು ಅವರು ಮಾಹಿತಿಯ ಹಕ್ಕು ಅದಿನಿಯಮ  2005 ಜಾರಿಗೊಳಿಸುವ ಮೂಲಕ ಪ್ರಜಾಪ್ರಭುತ್ವದ ಆಡಳಿತದಲ್ಲಿ ಪಾರದರ್ಶಕತೆಯನ್ನು ತಂದು ಪ್ರತಿಯೊಬ್ಬ ನಾಗರೀಕರು ಆಡಳಿತದಲ್ಲಿನ ಪಾಲುದಾರರಾಗುವಂತೆ ಮತ್ತು ಆಡಳಿತದ ಕಾರ್ಯ ಚಟುವಟಿಕೆಗಳ ಬಗ್ಗೆ ಮಾಹಿತಿಯನ್ನು ಪಡೆಯುವಂಥ ಆಯಿತು. ಇದೊಂದು ಕ್ರಾಂತಿಕಾರಿ ನಿರ್ಧಾರವಾಗಿತ್ತು, ಈ ಮಾಹಿತಿ ಹಕ್ಕು ಕಾಯ್ದೆ2005  ಉಳಿಸಿ ಇನ್ನಷ್ಟು ಬಲಪಡಿಸುವ ಗುರುತರ ಜವಾಬ್ದಾರಿ ದೇಶದ ನಾಗರಿಕರ ಮೇಲಿದೆ ಎಂದು ಅವರು ಹೇಳಿದ್ದಾರೆ.

    ದುರಾದೃಷ್ಟವಷತ್ ಈ ಕಾಯ್ದೆಗೆ ಹಲವಾರು ತಿದ್ದುಪಡಿಯನ್ನು ತರಲಾಗಿದೆ. ಮೂಲ ಕಾಯ್ದೆಯನ್ನು ಉಳಿಸಿಕೊಳ್ಳುವ ಮತ್ತು ಅದನ್ನು ಸಂಪೂರ್ಣವಾಗಿ ಅನುಷ್ಠಾನಕ್ಕೆ ತರುವ ಪ್ರಯತ್ನ ಜನರಿಂದ ಆಯ್ಕೆ ಆದ ಜನಪ್ರತಿನಿಧಿಗಳ ದೊಡ್ಡ ಜವಾಬ್ದಾರಿಯನ್ನು ಡಾ. ಮನಮೋಹನ್ ಸಿಂಗ್ ಈಗ ಬಿಟ್ಟು ಹೋಗಿದ್ದಾರೆ,   ಡಾಕ್ಟರ್ ಮನಮೋಹನ್ ಸಿಂಗ್ ಹೆಸರನ್ನು ಕರ್ನಾಟಕದಲ್ಲಿ ಶಾಶ್ವತವಾಗಿ ಉಳಿಸುವ ಮತ್ತು ಅವರು ಕೊಟ್ಟ ಆಡಳಿತವನ್ನು ನೆನಪಿಸಿಕೊಳ್ಳುವ ಗುರುತರ ಜವಾಬ್ದಾರಿ ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಮತ್ತು ಉಪಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್  ಮೇಲಿದೆ ಎಂದು ಅವರು  ತಿಳಿಸಿದ್ದಾರೆ.

    ಅಗಲಿದ ಚೇತನ ಡಾಕ್ಟರ್ ಮನಮೋಹನ್ ಸಿಂಗ್ ಅವರ ಹೆಸರನ್ನು ಕರ್ನಾಟಕದಲ್ಲಿ ಶಾಶ್ವತಗೊಳಿಸುವ ಮೊದಲ ಹೆಜ್ಜೆಯಾಗಿ ಅವರ ನೇತೃತ್ವದ ಯುಪಿಎ ಸರ್ಕಾರ ತಂದ ಮಾಹಿತಿ ಹಕ್ಕು ಅದಿನಿಯಮ 2005 ರ ನೆನಪಿಗೆ ಬೆಂಗಳೂರಿನ ವಿಕಾಸ ಸೌಧದ ಎದುರು ಇರುವ ಮಾಹಿತಿ ಸೌಧಕ್ಕೆ ಡಾಕ್ಟರ್ ಮನಮೋಹನ್ ಸಿಂಗ್ ಮಾಹಿತಿ ಸೌಧ ಎಂದು ಮರುನಾಮಕರಣ ಮಾಡಬೇಕೆಂದು ನೈಜ್ಯ ಹೋರಾಟಗಾರರ ವೇದಿಕೆ ಕರ್ನಾಟಕ ಸರ್ಕಾರವನ್ನುಆಗ್ರಹಿಸಿದೆ.

    ಅತೀ ಶೀಘ್ರದಲ್ಲಿ ಕರ್ನಾಟಕ ಸರ್ಕಾರವು ಕಾರ್ಯಯೋನ್ಮುಖರಾಗಿ ಡಾಕ್ಟರ್ ಮನಮೋಹನ್ ಸಿಂಗ್ ಅವರ ಹೆಸರು ವಿಧಾನಸೌಧ, ವಿಕಾಸ ಸೌಧದ ಪಕ್ಕದಲ್ಲಿರುವ ಮಾಹಿತಿ ಸೌಧಕ್ಕೆ ಡಾಕ್ಟರ್ ಮನಮೋಹನ್ ಸಿಂಗ್ ಮಾಹಿತಿ ಸೌಧ ಎಂದು  ಮರುನಾಮಕರಣ ಮಾಡುವ ಮೂಲಕ ಡಾಕ್ಟರ್ ಮನಮೋಹನ್ ಸಿಂಗ್ ಹೆಸರು ಕರ್ನಾಟಕದಲ್ಲಿ ಅಜರಾಮರವಾಗಿ/ಶಾಶ್ವತವಾಗಿ ಉಳಿಯುತ್ತದೆ.  ವಿಧಾನಸೌಧದ ಮೇಲಿರುವ ಸರ್ಕಾರದ ಕೆಲಸ ದೇವರ ಕೆಲಸ ಎಂಬ ಘೋಷ ವಾಕ್ಯಕ್ಕೆ ಇನ್ನಷ್ಟು  ಮೆರಗು ಬರುವುದರ ಜೊತೆಗೆ ಮಾಜಿ ಪ್ರಧಾನಿ ಡಾಕ್ಟರ್ ಮನಮೋಹನ್ ಸಿಂಗ್ ಅವರಿಗೆ ಈ ಮೂಲಕ ಗೌರವ ಅರ್ಪಣೆ ಮಾಡುವ ಸುವರ್ಣ ಅವಕಾಶ ಆಡಳಿತರೂಢ ಕಾಂಗ್ರೆಸ್ ಪಕ್ಷದ್ದಾಗಿರುತ್ತದೆ ಎಂದು ಅವರು ನೆನಪಿಸಿದ್ದಾರೆ.

    ನೈಜ ಹೋರಾಟಗಾರರ ವೇದಿಕೆ ಯ ಈ ಸಲಹೆಯನ್ನು ಮುಖ್ಯಮಂತ್ರಿಗಳು ಮತ್ತು ಉಪಮುಖ್ಯಮಂತ್ರಿಗಳು ಸ್ವೀಕರಿಸಿ ಮಾಹಿತಿ ಸೌಧಕ್ಕೆ ಡಾಕ್ಟರ್ ಮನಮೋಹನ್ ಸಿಂಗ್ ಮಾಹಿತಿ ಸೌಧ ಎಂದು ಮರುನಾಮಕರಣ ಮಾಡಬೇಕೆಂದು, ನೈಜ್ಯ ಹೋರಾಟಗಾರರ ವೇದಿಕೆಯು ಸರ್ಕಾರವನ್ನು ಆಗ್ರಪಡಿಸುತ್ತಿದೆ. ಈ ಬಗ್ಗೆ ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರಿಗೂ ಮತ್ತು ಉಪಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್ ಅವರಿಗೆ ಇ-ಮೇಲ್ ಮೂಲಕ ಮನವಿ ಸಲ್ಲಿಸಲಾಗಿದೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

    admin
    • Website

    Related Posts

    ಸಚಿವ ಸಂಪುಟ ವಿಸ್ತರಣೆ: ಎಚ್.ಕೆ. ಪಾಟೀಲ್ ಗೆ ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ಗದಗ–ಬೆಟಗೇರಿ ನಗರಸಭೆಯ 22 ಸದಸ್ಯರ ಸಾಮೂಹಿಕ ರಾಜೀನಾಮೆ

    August 5, 2026

    ತುಮಕೂರು ಕಾಂಗ್ರೆಸ್ ನಲ್ಲಿ ಆಕ್ರೋಶ ಸ್ಫೋಟ: ವಿಪಕ್ಷ ಸಾಲಿನಲ್ಲಿ ಆಸನ ಕೋರಿದ ಟಿ.ಬಿ. ಜಯಚಂದ್ರ, ಹೆಚ್ ಡಿಕೆಯನ್ನು ಹೊಗಳಿದ ಶಾಸಕ ಶ್ರೀನಿವಾಸ್

    August 5, 2026

    ಸಚಿವ ಸ್ಥಾನ ಸಿಗಲಿಲ್ಲವೆಂದು ಪಕ್ಷದ ವಿರುದ್ಧ ಮಾತಾಡುವುದು ಸರಿಯಲ್ಲ: ಪ್ರಿಯಾಂಕ್ ಖರ್ಗೆ

    August 5, 2026

    Comments are closed.

    Our Picks

    NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    July 25, 2026

    ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

    July 21, 2026

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಹಳ್ಳಿಯ ವಿದ್ಯಾರ್ಥಿಗಳು ಉನ್ನತ ಹುದ್ದೆಗೇರುವುದೇ ಎಂ.ಎಸ್.ಎ. ಟ್ರಸ್ಟ್‌ನ ಮುಖ್ಯ ಉದ್ದೇಶ: ಶಿವರಾಮ ಶೆಟ್ಟಿ

    August 8, 2026

    ಮಧುಗಿರಿ (ನಮ್ಮತುಮಕೂರು): ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಉನ್ನತ ವ್ಯಾಸಂಗ ಮಾಡಿ, ಸಮಾಜದಲ್ಲಿ ಉನ್ನತ ಹುದ್ದೆಗಳನ್ನು ಅಲಂಕರಿಸಬೇಕೆಂಬುದೇ ನಮ್ಮ ಮುಖ್ಯ ಗುರಿಯಾಗಿದೆ…

    ರಾಹುಲ್ ಗಾಂಧಿ ಪ್ರಧಾನಿಯಾಗಲಿ:  ಕಾಟೂರಿ ವೆಂಕಟೇಶ್ವರಲು ಪಾದಯಾತ್ರೆ

    August 8, 2026

    ಆಗಸ್ಟ್ 9ರಂದು ತಿಪಟೂರಿನಲ್ಲಿ ಪ್ರಥಮ ಬಾರಿಗೆ ರಾಜ್ಯಮಟ್ಟದ ಯೋಗ ಚಾಂಪಿಯನ್ಷಿಪ್ ಸ್ಪರ್ಧೆ

    August 8, 2026

    ಆ.10ರಂದು ರಾಷ್ಟ್ರೀಯ ಜಂತುಹುಳು ನಿವಾರಣಾ ಕಾರ್ಯಕ್ರಮ

    August 8, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.