nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕೆಆರ್ ಎಸ್ ಗೆ ಅಡಿಗಲ್ಲು ಹಾಕಿದ್ದೇ ಟಿಪ್ಪು ಸುಲ್ತಾನ್: ಕೆ.ಎನ್.ರಾಜಣ್ಣ ಹೇಳಿಕೆ

    October 5, 2025

    ತುಮಕೂರು |  ಬೇಗೂರು ಡೇರಿ ಸೂಪರ್ ಸೀಡ್: ಪ್ರತಿಭಟನೆ

    October 4, 2025

    ದೇಶಕ್ಕೆ ಅನ್ನ ನೀಡುವ ರೈತನ ಯಾರು ಕೂಡ ಮರೆಯಬಾರದು: ವೀರಬಸವ ಮಹಾಸ್ವಾಮಿ

    October 4, 2025
    Facebook Twitter Instagram
    ಟ್ರೆಂಡಿಂಗ್
    • ಕೆಆರ್ ಎಸ್ ಗೆ ಅಡಿಗಲ್ಲು ಹಾಕಿದ್ದೇ ಟಿಪ್ಪು ಸುಲ್ತಾನ್: ಕೆ.ಎನ್.ರಾಜಣ್ಣ ಹೇಳಿಕೆ
    • ತುಮಕೂರು |  ಬೇಗೂರು ಡೇರಿ ಸೂಪರ್ ಸೀಡ್: ಪ್ರತಿಭಟನೆ
    • ದೇಶಕ್ಕೆ ಅನ್ನ ನೀಡುವ ರೈತನ ಯಾರು ಕೂಡ ಮರೆಯಬಾರದು: ವೀರಬಸವ ಮಹಾಸ್ವಾಮಿ
    • ನಕ್ಷತ್ರಗಳ ಬೆಳಕ ಹೊರತಾಗಿಯೂ ರಾತ್ರಿ ಆಕಾಶ ಕಪ್ಪೇಕೆ ?
    • ಜನ ಅಲೆಯುವುದನ್ನು ತಪ್ಪಿಸಲು ಪ್ರಜಾಸೌಧ: ಅನಿಲ್ ಚಿಕ್ಕಮಾದು
    • ಬೆಳಕುಣಿ ಚೌದ್ರಿ ಗ್ರಾಮದಲ್ಲಿ ಭವಾನಿ ಮಾತಾ ದೇವಿ ಮೆರವಣಿಗೆ
    • ಪಾವಗಡ | ಕೆ.ಟಿ.ಹಳ್ಳಿ ಗ್ರಾಮದಲ್ಲಿ ಕೆಂಪೇಗೌಡರ ಪುತ್ಥಳಿ ಅನಾವರಣ
    • ತಿಮ್ಮಾಪುರದಲ್ಲಿ ಶ್ರೀ ಬಾಲಾಜಿ ಮಠ ಪ್ರತಿಷ್ಠಾಪನೆ:  ನಾದಾಬ್ರಹ್ಮ ಯೋಗದಿಂದ ಆರೋಗ್ಯ ಕ್ಷೇಮದ ಸಂದೇಶ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸೌರಶಕ್ತಿ ಮೂಲಕ ಹಗಲಿನಲ್ಲಿ ರೈತರಿಗೆ ವಿದ್ಯುತ್ – ಸಚಿವ ಜಾರ್ಜ್
    ತುಮಕೂರು December 31, 2024

    ಸೌರಶಕ್ತಿ ಮೂಲಕ ಹಗಲಿನಲ್ಲಿ ರೈತರಿಗೆ ವಿದ್ಯುತ್ – ಸಚಿವ ಜಾರ್ಜ್

    By adminDecember 31, 2024No Comments3 Mins Read
    jorge

    ತುಮಕೂರು: ರಾಜ್ಯದಲ್ಲಿ ಕೃಷಿ ಕ್ಷೇತ್ರವನ್ನು ಸಬಲೀಕರಣಗೊಳಿಸುವ ಸಲುವಾಗಿ ಸೌರಶಕ್ತಿ ಮೂಲಕ ಹಗಲಿನಲ್ಲಿ ರೈತರಿಗೆ ವಿದ್ಯುತ್ ಪೂರೈಕೆ ಮಾಡಲು ಯೋಜಿಸಲಾಗಿದೆ ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್ ತಿಳಿಸಿದರು.

    ಜಿಲ್ಲೆಯ ಶಿರಾ ತಾಲ್ಲೂಕು ಚಂಗಾವರ ಗ್ರಾಮಕ್ಕೆ ಸೋಮವಾರ ಭೇಟಿ ನೀಡಿ ಪಿಎಂ ಕುಸುಮ್ ಘಟಕ ಸಿ ಯೋಜನೆಯಡಿ ನಿರ್ಮಿಸುತ್ತಿರುವ 2.4 ಮೆಗಾ ವ್ಯಾಟ್ ಸಾಮರ್ಥ್ಯದ ಸೋಲಾರ್ ಪ್ಲಾಂಟ್ ಅಳವಡಿಕೆ ಕಾಮಗಾರಿಯನ್ನು ವೀಕ್ಷಿಸಿ ಮಾತನಾಡಿದ ಅವರು, ರೈತರು ಕೃಷಿ ಚಟುವಟಿಕೆಗಳನ್ನು ಕೈಗೊಳ್ಳಲು ಅನುವಾಗುವಂತೆ ತಡೆರಹಿತ ಸುಸ್ಥಿರ ವಿದ್ಯುತ್ ಸರಬರಾಜು ಮಾಡಲು ಈ ಸೋಲಾರ್ ಪ್ಲಾಂಟ್‌ಗಳನ್ನು ನಿರ್ಮಿಸಲಾಗುತ್ತಿದೆ ಎಂದು ತಿಳಿಸಿದರು.


    Provided by
    Provided by
    Provided by

    ಜಿಲ್ಲೆಯ ಶಿರಾ ತಾಲ್ಲೂಕಿನ ಚಂಗಾವರದಲ್ಲಿ ನಿರ್ಮಿಸಿರುವ ಸೋಲಾರ್ ಪ್ಲಾಂಟ್‌ನಿAದ 944 ಕೃಷಿ ಪಂಪ್ ಸೆಟ್‌ಗಳಿಗೆ ವಿದ್ಯುತ್ ಒದಗಿಸಲು ಸಾಧ್ಯವಾಗಲಿದೆ. ಈ ಸೋಲಾರ್ ಪ್ಲಾಂಟ್ ನಿರ್ಮಾಣಕ್ಕಾಗಿ 11 ಎಕರೆ ಭೂ ಪ್ರದೇಶವನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ. ಚಂಗಾವರದಲ್ಲಷ್ಟೇ ಅಲ್ಲದೆ ಶಿರಾ ತಾಲ್ಲೂಕಿನ ಚಿಕ್ಕಬಾಣಗೆರೆಯಲ್ಲಿಯೂ 25 ಎಕರೆ ಭೂ ಪ್ರದೇಶವನ್ನು ಸ್ವಾಧೀನಪಡಿಸಿಕೊಂಡು 6.5 ಮೆಗಾ ವ್ಯಾಟ್ ಸಾಮರ್ಥ್ಯದ ಸೋಲಾರ್ ಪ್ಲಾಂಟ್ ಅನ್ನು ನಿರ್ಮಿಸಲಾಗಿದೆ. ಇದರಿಂದ 1355 ಕೃಷಿ ಪಂಪ್‌ಸೆಟ್‌ಗಳಿಗೆ ವಿದ್ಯುತ್ ಸರಬರಾಜು ಮಾಡುವ ಯೋಜನೆ ಹೊಂದಲಾಗಿದೆ. ಮೆ|| ರಾಮ್ ತರಂಗ್ ಸೆಲ್ಯೂಷನ್ಸ್ ಪ್ರೆöÊವೇಟ್ ಲಿಮಿಟೆಡ್ ಸಹಭಾಗಿತ್ವದಲ್ಲಿ ಈ ಸೋಲಾರ್ ಪ್ಲಾಂಟ್‌ಗಳನ್ನು ನಿರ್ಮಿಸಲಾಗುತ್ತಿದೆ ಎಂದು ತಿಳಿಸಿದರು.

    ಕೃಷಿ ಉತ್ಪಾದಕತೆ ಮತ್ತು ಗ್ರಾಮೀಣ ಆರ್ಥಿಕ ಬೆಳವಣಿಗೆಯನ್ನು ಉತ್ತೇಜಿಸುವ ಸಲುವಾಗಿ ಕುಸುಮ್ ಸಿ ಯೋಜನೆಯನ್ನು ಜಾರಿಗೆ ತರಲಾಗಿದೆ. ಕುಸುಮ್ ಸಿ ಯೋಜನೆಯಡಿ ನಿರ್ಮಿಸಿರುವ ಸೌರ ಸ್ಥಾವರಗಳು ಕೃಷಿ ವಿದ್ಯುತ್ ಸರಬರಾಜಿನಲ್ಲಿ ಹೊಸ ಕ್ರಾಂತಿಯನ್ನೇ ಉಂಟು ಮಾಡಲಿದೆ. ಈ ಸೌರ ಸ್ಥಾವರಗಳು ಸಾಂಪ್ರದಾಯಕ ವಿದ್ಯುತ್ ಮೂಲಗಳ ಮೇಲಿನ ಅವಲಂಬನೆಯನ್ನು ಕಡಿಮೆ ಮಾಡಿ ಗ್ರಾಮೀಣ ರೈತರನ್ನು ಸಬಲಗೊಳಿಸಲಿದೆ ಎಂದು ಹೇಳಿದರು.

    ರಾಜ್ಯದಲ್ಲಿ 3000 ಮೆ.ವ್ಯಾ. ವಿದ್ಯುತ್ ಉತ್ಪಾದನೆ ಗುರಿಃ

    ರಾಜ್ಯದಾದ್ಯಂತ ಸೋಲಾರ್ ಘಟಕಗಳನ್ನು ನಿರ್ಮಿಸಿ 3000 ಮೆಗಾ ವ್ಯಾಟ್ ವಿದ್ಯುತ್ ಉತ್ಪಾದಿಸುವ ಗುರಿ ಹೊಂದಲಾಗಿದೆ. ಮಲೆನಾಡು ಪ್ರದೇಶಗಳನ್ನು ಹೊರತುಪಡಿಸಿ ರಾಜ್ಯದ ಉಳಿದೆಲ್ಲಾ ಪ್ರದೇಶಗಳಲ್ಲಿ ಸೌರ ವಿಕಿರಣ ಶಕ್ತಿ ಉತ್ತಮವಾಗಿರುವುದರಿಂದ ಎಲ್ಲ ಜಿಲ್ಲೆಗಳಲ್ಲಿಯೂ ಸೌರ ಘಟಕಗಳನ್ನು ನಿರ್ಮಿಸಲಾಗುವುದು. ರಾಜ್ಯದಾದ್ಯಂತ ಸೌರ ಘಟಕಗಳನ್ನು ನಿರ್ಮಿಸಿ ರೈತರಿಗೆ ನಿರಂತರ 7 ಗಂಟೆಗಳ ತಡೆರಹಿತ ವಿದ್ಯುತ್ ಅನ್ನು ಹಗಲಿನಲ್ಲಿ ಒದಗಿಸಲು ಯೋಜಿಸಲಾಗಿದೆ ಎಂದು ತಿಳಿಸಿದರು.

    ಮೆ|| ರಾಮ್ ತರಂಗ್ ಖಾಸಗಿ ಕಂಪನಿಯು ಬೆಸ್ಕಾಂನೊಂದಿಗೆ ವಿದ್ಯುತ್ ಖರೀದಿ ಒಪ್ಪಂದದ ಮೂಲಕ ಪಾಲದಾರಿಕೆಯನ್ನು ಹೊಂದಿದ್ದು, ಒಪ್ಪಂದದ ಪ್ರಕಾರ ಕಂಪನಿಯು ವಾರ್ಷಿಕವಾಗಿ ಪ್ರತೀ ಮೆಗಾ ವ್ಯಾಟ್‌ಗೆ 16.5ಲಕ್ಷ ವಿದ್ಯುತ್ ಯೂನಿಟ್‌ಗಳನ್ನು ಪೂರೈಸಲು ಬದ್ಧವಾಗಿದೆ. ಬೆಸ್ಕಾಂ ಕಂಪನಿಯು ಪ್ರತಿ ಯೂನಿಟ್‌ಗೆ 3.16 ರೂ.ನಂತೆ ವಿದ್ಯುತ್ ಖರೀದಿಸಿ ರೈತರಿಗೆ ಪೂರೈಕೆ ಮಾಡಲಿದೆ ಎಂದು ತಿಳಿಸಿದರು.

    ನವದೆಹಲಿ ವಿಶೇಷ ಪ್ರತಿನಿಧಿ ಹಾಗೂ ಶಿರಾ ಶಾಸಕ ಟಿ.ಬಿ.ಜಯಚಂದ್ರ ಮಾತನಾಡಿ, ರಾಜ್ಯದಾದ್ಯಂತ ಸರ್ಕಾರವು ಕುಸುಮ್-ಸಿ ಯೋಜನೆಯ ಕಾರ್ಯಾರಂಭ ಮಾಡಿದ್ದು, ಪ್ರಾರಂಭಿಕವಾಗಿ ಶಿರಾ ತಾಲ್ಲೂಕಿನ ಚಂಗಾವರ ಹಾಗೂ ಚಿಕ್ಕಬಾಣಗೆರೆ ಗ್ರಾಮಗಳಲ್ಲಿ ಸೌರ ಘಟಕಗಳನ್ನು ನಿರ್ಮಿಸಲಾಗಿದೆ. ಇದರಿಂದ ಸ್ಥಳೀಯ ರೈತರು ಕೃಷಿ ಚಟುವಟಿಕೆಗಳನ್ನು ಕೈಗೊಳ್ಳಲು ಅನುಕೂಲವಾಗುವಂತೆ ತಡೆ ರಹಿತ ವಿದ್ಯುತ್ ಪೂರೈಕೆ ಮಾಡಲಾಗುವುದು. ಶೀಘ್ರದಲ್ಲಿಯೇ ಮುಖ್ಯಮಂತ್ರಿಗಳು ಸೌರ ಘಟಕಗಳ ಕಾರ್ಯಾರಂಭಕ್ಕೆ ಹಸಿರು ನಿಶಾನೆ ತೋರಲಿದ್ದಾರೆ ಎಂದರಲ್ಲದೆ, ಕುಸುಮ್-ಸಿ ಯೋಜನೆಯಿಂದ ಬೆಸ್ಕಾಂ ಕಂಪನಿಗೆ ವಿದ್ಯುತ್ ಖರೀದಿ ದರ ಕಡಿಮೆಯಾಗಲಿದೆ ಎಂದು ತಿಳಿಸಿದರು.

    ಸಚಿವರು ನಂತರ ಸೋಲಾರ್ ಪ್ಲಾಂಟ್ ಅನ್ನು ಪರಿಶೀಲಿಸುತ್ತಾ, ಹಗಲಿನಲ್ಲಿ ಗುಣಮಟ್ಟದ ವಿದ್ಯುತ್ ಪೂರೈಕೆಯಾಗುತ್ತಿರುವ ಬಗ್ಗೆ ಸ್ಥಳೀಯ ರೈತರಿಂದ ಮಾಹಿತಿ ಪಡೆದರು. ಬಳಿಕ ಚಿಕ್ಕಬಾಣಗೆರೆ ಸೌರ ಘಟಕಕ್ಕೆ ಭೇಟಿ ನೀಡಿ ಪರಿಶೀಲಿಸಿದರು.
    ಈ ಸಂದರ್ಭದಲ್ಲಿ ಅಪರ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತಾ, ಕೆಪಿಟಿಸಿಎಲ್ ವ್ಯವಸ್ಥಾಪಕ ನಿರ್ದೇಶಕ ಪಂಕಜ್ ಕುಮಾರ್ ಪಾಂಡೆ, ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಮಹಂತೇಶ್ ಬೀಳಗಿ, ಬೆಸ್ಕಾಂ ಮುಖ್ಯ ಇಂಜಿನಿಯರ್(ಯೋಜನೆಗಳು) ರಮೇಶ್ ಗುಡಿ ಹಾಗೂ ಅಧೀಕ್ಷಕ ಇಂಜಿನಿಯರ್ ನರಸಿಂಹಮೂರ್ತಿ, ಕೆಪಿಟಿಸಿಎಲ್ ಅಧೀಕ್ಷಕ ಇಂಜಿನಿಯರ್ ಡಿ. ಶಿವಕುಮಾರ್, ಬೆಸ್ಕಾಂ ಮಧುಗಿರಿ ವಿಭಾಗದ ಕಾರ್ಯನಿರ್ವಾಹಕ ಇಂಜಿನಿಯರ್ ಜಿ.ಜಗಧೀಶ್, ತುಮಕೂರು ವಿಭಾಗದ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಶಾಂತ್ ಕೂಡ್ಲಿಗಿ,ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಶಾಂತರಾಜು ಇ., ನಗರ ಸಭೆ ಅಧ್ಯಕ್ಷ ಜೀಶಾನ್ ಮಹಮೂದ್, ರಾಮ್ ತರಂಗ್ ಖಾಸಗಿ ಕಂಪನಿಯ ಮುಖ್ಯಸ್ಥರಾದ ರವಿಶಂಕರ್, ಚಂದ್ರಶೇಖರ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

    admin
    • Website

    Related Posts

    ಕೆಆರ್ ಎಸ್ ಗೆ ಅಡಿಗಲ್ಲು ಹಾಕಿದ್ದೇ ಟಿಪ್ಪು ಸುಲ್ತಾನ್: ಕೆ.ಎನ್.ರಾಜಣ್ಣ ಹೇಳಿಕೆ

    October 5, 2025

    ತುಮಕೂರು |  ಬೇಗೂರು ಡೇರಿ ಸೂಪರ್ ಸೀಡ್: ಪ್ರತಿಭಟನೆ

    October 4, 2025

    ತುಮಕೂರು | ಸಮೀಕ್ಷೆಗೆ ತೆರಳಿದ್ದ ಶಿಕ್ಷಕಿಗೆ ಮುಸ್ಲಿಂ ಎಂಬ ಕಾರಣಕ್ಕೆ ಅವಮಾನ!

    October 4, 2025

    Comments are closed.

    Our Picks

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025

    ಸರ್ಕಾರಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇಲಿ ಕಚ್ಚಿ ನವಜಾತ ಶಿಶು ಸಾವು!

    September 4, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಕೆಆರ್ ಎಸ್ ಗೆ ಅಡಿಗಲ್ಲು ಹಾಕಿದ್ದೇ ಟಿಪ್ಪು ಸುಲ್ತಾನ್: ಕೆ.ಎನ್.ರಾಜಣ್ಣ ಹೇಳಿಕೆ

    October 5, 2025

    ತುಮಕೂರು: ಟಿಪ್ಪು ಸುಲ್ತಾನ್‌ ನನ್ನ ಬಹಳ ಅವಹೇಳನಕಾರಿಯಾಗಿ ತೋರಿಸಲಾಗುತ್ತೆ. ಆದ್ರೆ ನಾನು ಓದಿರುವ ಪ್ರಕಾರ ಕನ್ನಂಬಾಡಿ ಕಟ್ಟೆಯನ್ನ ಪ್ರಾರಂಭ ಮಾಡಿದ್ದೇ…

    ತುಮಕೂರು |  ಬೇಗೂರು ಡೇರಿ ಸೂಪರ್ ಸೀಡ್: ಪ್ರತಿಭಟನೆ

    October 4, 2025

    ದೇಶಕ್ಕೆ ಅನ್ನ ನೀಡುವ ರೈತನ ಯಾರು ಕೂಡ ಮರೆಯಬಾರದು: ವೀರಬಸವ ಮಹಾಸ್ವಾಮಿ

    October 4, 2025

    ನಕ್ಷತ್ರಗಳ ಬೆಳಕ ಹೊರತಾಗಿಯೂ ರಾತ್ರಿ ಆಕಾಶ ಕಪ್ಪೇಕೆ ?

    October 4, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.