ವಾಷಿಂಗ್ಟನ್: ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ ಸಿಲುಕಿಕೊಂಡಿರುವ ಸುನೀತಾ ವಿಲಿಯಮ್ಸ್ ಮಾರ್ಚ್ ಅಥವಾ ಎಪ್ರಿಲ್ ತಿಂಗಳಿನಲ್ಲಿ ಭೂಮಿಗೆ ಮರಳುವ ನಿರೀಕ್ಷೆಯಿದೆಯಂತೆ.
ಸುನೀತಾ ಕಳೆದ ಜುಲೈನಲ್ಲೇ ಮರಳಬೇಕಿತ್ತು. ಆದರೆ, ಅವರ ಸ್ಟಾರ್‌ಲೈನರ್ ಅಂತರಿಕ್ಷ ನೌಕೆಯಲ್ಲಿ ತೊಂದರೆ ಕಾಣಿಸಿಕೊಂಡಿದ್ದರಿಂದ ಅವರು ಮತ್ತು ಸಹ ಗಗನಯಾನಿ ಬುಚ್ ವಿಲ್ಮೋರ್ ಐಎಸ್‌ಎಸ್‌ನಲ್ಲೇ ಉಳಿದುಕೊಂಡಿದ್ದಾರೆ.
ಸದ್ಯ ಇಬ್ಬರನ್ನೂ ಕರೆತರಲು ಬದಲಿ ವ್ಯವಸ್ಥೆ ರೂಪಿಸಲಾಗಿದೆ. ನೂತನ ಯೋಜನೆಯಡಿ ನಾಸಾ ತನ್ನ ಗಗನಯಾನಿಗಳನ್ನು ಭೂಮಿಗೆ ಕರೆತರಲು ಮತ್ತೊಂದು ಖಾಸಗಿ ಬಾಹ್ಯಾಕಾಶ ಸಂಸ್ಥೆ, ಶ್ರೀಮಂತ ಉದ್ಯಮಿ ಎಲಾನ್ ಮಸ್ಕ್ ಒಡೆತನದ ‘ಸ್ಪೇಸ್ ಎಕ್ಸ್’ ಜತೆ ಒಪ್ಪಂದ ಮಾಡಿಕೊಂಡಿದೆ.
ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ(ಐಎಸ್‌ಎಸ್) ಸಿಲುಕಿಕೊಂಡಿರುವ ಸುನೀತಾ ವಿಲಿಯಮ್ಸ್ ಮತ್ತು ಬುಚ್ ವಿಲ್ಮೋರ್ ರನ್ನು ‘ಕ್ರ್ಯೂ ಡ್ರಾಗನ್’ ಅಂತರಿಕ್ಷ ನೌಕೆ ಭೂಮಿಗೆ ಹೊತ್ತು ತರಲಿದೆ. ಈ ನೌಕೆ ಶ್ರೀಮಂತ ಉದ್ಯಮಿ ಎಲಾನ್ ಮಸ್ಕ್ ಒಡೆತನದ ಸ್ಪೇಸ್‌ಎಕ್ಸ್ ಸಂಸ್ಥೆಗೆ ಸೇರಿದೆ. ಗರಿಷ್ಠ 7 ಮಂದಿ ಗಗನಯಾನಿಗಳನ್ನು ಹೊತ್ತೊಯ್ಯುವ ಸಾಮರ್ಥ್ಯ ಇದಕ್ಕಿದೆಯಂತೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx