nammatumakuru

    Subscribe to Updates

    Get the latest creative news from FooBar about art, design and business.

    What's Hot

    36 ಕೋಟಿ ರೂಪಾಯಿಯಿಂದ 180 ಕೋಟಿ ರೂ.ಗೆ  ಹೆಚ್ಚಳವಾದ ಪ್ರಧಾನಿ ಮೋದಿ ವಿದೇಶ ಪ್ರವಾಸ ಖರ್ಚು ವೆಚ್ಚ!

    August 8, 2026

    ಸರಗೂರು: ಮಾದರ ಮಹಾಸಭೆಯ ಉದ್ಘಾಟನೆ –ಪ್ರತಿಭಾ ಪುರಸ್ಕಾರ:  ಒಳಮೀಸಲಾತಿ ಜಾರಿಗೆ ಕೆ.ಎಚ್. ಮುನಿಯಪ್ಪ ಪ್ರತಿಪಾದನೆ

    August 8, 2026

    ಹಳ್ಳಿಯ ವಿದ್ಯಾರ್ಥಿಗಳು ಉನ್ನತ ಹುದ್ದೆಗೇರುವುದೇ ಎಂ.ಎಸ್.ಎ. ಟ್ರಸ್ಟ್‌ನ ಮುಖ್ಯ ಉದ್ದೇಶ: ಶಿವರಾಮ ಶೆಟ್ಟಿ

    August 8, 2026
    Facebook Twitter Instagram
    ಟ್ರೆಂಡಿಂಗ್
    • 36 ಕೋಟಿ ರೂಪಾಯಿಯಿಂದ 180 ಕೋಟಿ ರೂ.ಗೆ  ಹೆಚ್ಚಳವಾದ ಪ್ರಧಾನಿ ಮೋದಿ ವಿದೇಶ ಪ್ರವಾಸ ಖರ್ಚು ವೆಚ್ಚ!
    • ಸರಗೂರು: ಮಾದರ ಮಹಾಸಭೆಯ ಉದ್ಘಾಟನೆ –ಪ್ರತಿಭಾ ಪುರಸ್ಕಾರ:  ಒಳಮೀಸಲಾತಿ ಜಾರಿಗೆ ಕೆ.ಎಚ್. ಮುನಿಯಪ್ಪ ಪ್ರತಿಪಾದನೆ
    • ಹಳ್ಳಿಯ ವಿದ್ಯಾರ್ಥಿಗಳು ಉನ್ನತ ಹುದ್ದೆಗೇರುವುದೇ ಎಂ.ಎಸ್.ಎ. ಟ್ರಸ್ಟ್‌ನ ಮುಖ್ಯ ಉದ್ದೇಶ: ಶಿವರಾಮ ಶೆಟ್ಟಿ
    • ರಾಹುಲ್ ಗಾಂಧಿ ಪ್ರಧಾನಿಯಾಗಲಿ:  ಕಾಟೂರಿ ವೆಂಕಟೇಶ್ವರಲು ಪಾದಯಾತ್ರೆ
    • ಆಗಸ್ಟ್ 9ರಂದು ತಿಪಟೂರಿನಲ್ಲಿ ಪ್ರಥಮ ಬಾರಿಗೆ ರಾಜ್ಯಮಟ್ಟದ ಯೋಗ ಚಾಂಪಿಯನ್ಷಿಪ್ ಸ್ಪರ್ಧೆ
    • ಆ.10ರಂದು ರಾಷ್ಟ್ರೀಯ ಜಂತುಹುಳು ನಿವಾರಣಾ ಕಾರ್ಯಕ್ರಮ
    • ಶಿಕ್ಷಣ ನಿಮ್ಮ ಬದುಕಿಗೆ ಭದ್ರ ಬುನಾದಿ: ಶ್ರೀ ಸಿದ್ಧಲಿಂಗ ಮಹಾಸ್ವಾಮಿ
    • ಹೂ ಲೋಕ,  ಭೂರಮೆಯ  ರಥ :  ಪ್ರಕೃತಿ ಮಡಿಲಲ್ಲಿ ಚೆಲುವಿನ ರಥಯಾತ್ರೆ  ವಾಹ್..!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸಾರ್ವಜನಿಕರ ಮಾಹಿತಿಗಾಗಿ ಜ.6ರಂದು ಅಂತಿಮ ಮತದಾರರ ಪಟ್ಟಿ ಪ್ರಕಟ: ವೀಕ್ಷಕ ಶಿವಕುಮಾರ್
    ತುಮಕೂರು January 5, 2025

    ಸಾರ್ವಜನಿಕರ ಮಾಹಿತಿಗಾಗಿ ಜ.6ರಂದು ಅಂತಿಮ ಮತದಾರರ ಪಟ್ಟಿ ಪ್ರಕಟ: ವೀಕ್ಷಕ ಶಿವಕುಮಾರ್

    By adminJanuary 5, 2025No Comments2 Mins Read
    voters list

    ತುಮಕೂರು:  ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಸಾರ್ವಜನಿಕರ ಮಾಹಿತಿಗಾಗಿ ಜನವರಿ 6ರಂದು ಜಿಲ್ಲೆಯ ಎಲ್ಲಾ 2627 ಮತಗಟ್ಟೆ, ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿಗಳ ಕಚೇರಿ ಹಾಗೂ ಸಹಾಯಕ ಚುನಾವಣಾಧಿಕಾರಿಗಳ ಕಚೇರಿಯಲ್ಲಿ ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಲಾಗುವುದೆಂದು ತುಮಕೂರು ಜಿಲ್ಲಾ ಮತದಾರರ ಪಟ್ಟಿ ವೀಕ್ಷಕ ಶಿವಕುಮಾರ್ ಕೆ.ಬಿ. ತಿಳಿಸಿದರು.

    ಮತದಾರರ ಪಟ್ಟಿಗಳ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ–2025ರ ಸಂಬಂಧ ಜಿಲ್ಲಾಧಿಕಾರಿಗಳ ನ್ಯಾಯಾಲಯ ಸಭಾಂಗಣದಲ್ಲಿ ಶನಿವಾರ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತನಾಡಿದ ಅವರು, ಅಂತಿಮ ಮತದಾರರ ಪಟ್ಟಿಯನ್ನು ceo.karnataka.gov.in ಮತ್ತು tumkur.nic.in ವೆಬ್‌ ಸೈಟ್‌ಗಳಲ್ಲಿಯೂ ಪ್ರಚುರಪಡಿಸಲಾಗುವುದು ಎಂದು ತಿಳಿಸಿದರು.

    ಅಂತಿಮ ಮತದಾರರ ಪಟ್ಟಿಯನ್ವಯ ಜಿಲ್ಲೆಯಲ್ಲಿ 11,40,384 ಪುರುಷ, 11,65,030 ಮಹಿಳೆ ಹಾಗೂ 88 ಇತರೆ ಸೇರಿ ಒಟ್ಟು 23,05,502 ಮತದಾರರಿದ್ದಾರೆ. ರಾಜ್ಯದ ಜೆಂಡರ್ ರೇಷಿಯೋ 1001 ಇದ್ದು, ಜಿಲ್ಲೆಯ ಜೆಂಡರ್ ರೇಷಿಯೋ 1022 ಇರುವುದನ್ನು ಗಮನಿಸಿದ ಅವರು, ಜಿಲ್ಲೆಯ ಶಿರಾ ಹಾಗೂ ಪಾವಗಡ ವಿಧಾನಸಭಾ ಕ್ಷೇತ್ರಗಳನ್ನು ಹೊರತುಪಡಿಸಿ ಉಳಿಕೆ ಎಲ್ಲಾ ವಿಧಾನಸಭಾ ಕ್ಷೇತ್ರಗಳಲ್ಲೂ ಜೆಂಡರ್ ರೇಷಿಯೋ ರಾಜ್ಯದ ಜೆಂಡರ್ ರೇಷಿಯೋಗಿಂತ ಹೆಚ್ಚಾಗಿರುವುದರಿಂದ ಚುನಾವಣಾಧಿಕಾರಿ ಹಾಗೂ ಸಹಾಯಕ ಚುನಾವಣಾಧಿಕಾರಿಗಳು ಈ ಬಗ್ಗೆ ವಿಶೇಷ ಗಮನಹರಿಸಬೇಕು. ಮತಗಟ್ಟೆ ಮಟ್ಟದ ಅಧಿಕಾರಿಗಳು ಹಾಗೂ ಮೇಲ್ವಿಚಾರಕರ ಮೂಲಕ ಮತಗಟ್ಟೆ ವ್ಯಾಪ್ತಿಯಲ್ಲಿ ಪರಿಶೀಲನೆ ನಡೆಸಬೇಕು. ಮದುವೆಯಾಗಿ ಗಂಡನ ಮನೆಗೆ ಹೋಗಿರುವ, ವಿದ್ಯಾಭ್ಯಾಸ/ನೌಕರಿ ಕಾರಣಗಳಿಂದ ವರ್ಗಾವಣೆಗೊಂಡಿರುವ, ಮರಣ ಹೊಂದಿರುವ ಮಹಿಳಾ ಮತದಾರರನ್ನು ಗುರುತಿಸಬೇಕು. ಅಂತಹ ಮತದಾರರ ಹೆಸರುಗಳನ್ನು ನಿಯಮಾನುಸಾರ ಮತದಾರರ ಪಟ್ಟಿಯಿಂದ ತೆಗೆದುಹಾಕಲು ಕ್ರಮಕೈಗೊಂಡು ಜೆಂಡರ್ ರೇಷಿಯೋ ಕಡಿಮೆ ಮಾಡುವಂತೆ ಸೂಚನೆ ನೀಡಿದರು.

    ಯುವ ಮತದಾರರ ನೋಂದಣಿಗಾಗಿ ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳನ್ನು Dedicated AEROs for registration of young voters ಎಂದು ನಿಯೋಜಿಸಲಾಗಿದ್ದು, ಆಯಾ ತಾಲ್ಲೂಕು ವ್ಯಾಪ್ತಿಯ ಮತಗಟ್ಟೆಗಳಲ್ಲಿ ಯುವ ಮತದಾರರ ನೋಂದಣಿಗೆ ಹೆಚ್ಚಿನ ಆದ್ಯತೆ ನೀಡಲು ಕ್ರಮವಹಿಸಬೇಕೆಂದು ಸೂಚಿಸಿದರಲ್ಲದೆ, ಯಾವುದೇ ಅರ್ಹ ಮತದಾರರನ್ನು ಮತದಾರರ ಪಟ್ಟಿಯಿಂದ ಕೈಬಿಡದಂತೆ ಕ್ರಮಕೈಗೊಳ್ಳಬೇಕೆಂದು ಸೂಚಿಸಿದರು.

    ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಶುಭ ಕಲ್ಯಾಣ್ ಮಾತನಾಡಿ, ಭಾರತ ಚುನಾವಣಾ ಆಯೋಗ ನೀಡಿರುವ ನಿರ್ದೇಶನಗಳಂತೆ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯವನ್ನು ಕೈಗೊಳ್ಳಲಾಗುವುದು ಎಂದು ವೀಕ್ಷಕರ ಗಮನಕ್ಕೆ ತಂದರು.

    ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಜಿ.ಪ್ರಭು, ಅಪರ ಜಿಲ್ಲಾಧಿಕಾರಿ ಡಾ.ಎನ್.ತಿಪ್ಪೇಸ್ವಾಮಿ, ಪಾಲಿಕೆ ಆಯುಕ್ತ ಬಿ.ವಿ. ಅಶ್ವಿಜ, ಜಿಲ್ಲೆಯ ಎಲ್ಲಾ ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿ ಹಾಗೂ ಸಹಾಯಕ ಚುನಾವಣಾಧಿಕಾರಿಗಳು, ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ಮತ್ತಿತರರು ಹಾಜರಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

    admin
    • Website

    Related Posts

    ಹಳ್ಳಿಯ ವಿದ್ಯಾರ್ಥಿಗಳು ಉನ್ನತ ಹುದ್ದೆಗೇರುವುದೇ ಎಂ.ಎಸ್.ಎ. ಟ್ರಸ್ಟ್‌ನ ಮುಖ್ಯ ಉದ್ದೇಶ: ಶಿವರಾಮ ಶೆಟ್ಟಿ

    August 8, 2026

    ಆ.10ರಂದು ರಾಷ್ಟ್ರೀಯ ಜಂತುಹುಳು ನಿವಾರಣಾ ಕಾರ್ಯಕ್ರಮ

    August 8, 2026

    ಶಿಕ್ಷಣ ನಿಮ್ಮ ಬದುಕಿಗೆ ಭದ್ರ ಬುನಾದಿ: ಶ್ರೀ ಸಿದ್ಧಲಿಂಗ ಮಹಾಸ್ವಾಮಿ

    August 8, 2026

    Comments are closed.

    Our Picks

    36 ಕೋಟಿ ರೂಪಾಯಿಯಿಂದ 180 ಕೋಟಿ ರೂ.ಗೆ  ಹೆಚ್ಚಳವಾದ ಪ್ರಧಾನಿ ಮೋದಿ ವಿದೇಶ ಪ್ರವಾಸ ಖರ್ಚು ವೆಚ್ಚ!

    August 8, 2026

    NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    July 25, 2026

    ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

    July 21, 2026

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಷ್ಟ್ರೀಯ ಸುದ್ದಿ

    36 ಕೋಟಿ ರೂಪಾಯಿಯಿಂದ 180 ಕೋಟಿ ರೂ.ಗೆ  ಹೆಚ್ಚಳವಾದ ಪ್ರಧಾನಿ ಮೋದಿ ವಿದೇಶ ಪ್ರವಾಸ ಖರ್ಚು ವೆಚ್ಚ!

    August 8, 2026

    ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ವಿದೇಶ ಪ್ರವಾಸದ ವೆಚ್ಚ 2021 ರಿಂದ ಐದು ಪಟ್ಟು ಹೆಚ್ಚಾಗಿದೆ. ರಾಜ್ಯಸಭೆಗೆ ವಿದೇಶಾಂಗ…

    ಸರಗೂರು: ಮಾದರ ಮಹಾಸಭೆಯ ಉದ್ಘಾಟನೆ –ಪ್ರತಿಭಾ ಪುರಸ್ಕಾರ:  ಒಳಮೀಸಲಾತಿ ಜಾರಿಗೆ ಕೆ.ಎಚ್. ಮುನಿಯಪ್ಪ ಪ್ರತಿಪಾದನೆ

    August 8, 2026

    ಹಳ್ಳಿಯ ವಿದ್ಯಾರ್ಥಿಗಳು ಉನ್ನತ ಹುದ್ದೆಗೇರುವುದೇ ಎಂ.ಎಸ್.ಎ. ಟ್ರಸ್ಟ್‌ನ ಮುಖ್ಯ ಉದ್ದೇಶ: ಶಿವರಾಮ ಶೆಟ್ಟಿ

    August 8, 2026

    ರಾಹುಲ್ ಗಾಂಧಿ ಪ್ರಧಾನಿಯಾಗಲಿ:  ಕಾಟೂರಿ ವೆಂಕಟೇಶ್ವರಲು ಪಾದಯಾತ್ರೆ

    August 8, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.