ನವದೆಹಲಿ: ಭಾರತದಲ್ಲಿ ಕಳೆದ 24 ಗಂಟೆಯಲ್ಲಿ 2,51,209 ಲಕ್ಷ ಹೊಸ ಕೊರೊನಾ ಪ್ರಕರಣಗಳು ಪತ್ತೆಯಾಗಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಟ್ವೀಟ್ ಮಾಡಿದೆ.
ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 4,06,22,709 ಕ್ಕೆ ತಲುಪಿದೆ. ನಿನ್ನೆಗಿಂತ ಶೇ 12 ಪ್ರತಿಶತದಷ್ಟು ಕೊರೊನಾ ಸೋಂಕಿತರ ಸಂಖ್ಯೆ ಕಡಿಮೆಯಾಗಿದೆ. ದೇಶದಲ್ಲಿ ಕಳೆದ 24 ಗಂಟೆಯಲ್ಲಿ 627 ಜನ ಸಾವನ್ನಪಿದ್ದಾರೆ. ಸೋಂಕಿತರ ಪ್ರಮಾಣವು 15.88ರಷ್ಟು ಇಳಿಕೆಯಾಗಿದೆ ಎಂದು ತಿಳಿಸಿದೆ.
ದೇಶದಲ್ಲಿ ಪ್ರಸ್ತುತ 21, 05,611 ಲಕ್ಷ ಸಕ್ರಿಯ ಪ್ರಕರಣಗಳಿವೆ. ಸಕ್ರಿಯ ಪ್ರಕರಣಗಳು ಶೇ 5.18 ರಷ್ಟಿದೆ. ಕಳೆದ 24 ಗಂಟೆಯಲ್ಲಿ 3,47,443 ಜನ ಚೇತರಿಸಿಕೊಂಡಿದ್ದಾರೆ. ಚೇತರಿಕೆ ಪ್ರಮಾಣವು ಶೇ 93.6 ರಷ್ಟಿದೆ. ಸಾಪ್ತಾಹಿಕ ಧನಾತ್ಮಕ ದರವು 17.47 ಪ್ರತಿಷದಷ್ಟಿದೆ. ದೇಶದಲ್ಲಿ 164.44 ಕೊರೊನಾ ಲಸಿಕೆಗಳನ್ನು ನೀಡಲಾಗಿದೆ ಎಂದು ಸಚಿವಾಲಯ ತಿಳಿಸಿದೆ.
ವರದಿ: ಆಂಟೋನಿ ಬೇಗೂರು
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy