nammatumakuru

    Subscribe to Updates

    Get the latest creative news from FooBar about art, design and business.

    What's Hot

    ನಾಲ್ಕು ತಿಂಗಳಿನಿಂದ ಗೌರವಧನವಿಲ್ಲ: ರಾಜ್ಯ, ಕೇಂದ್ರ ಸರ್ಕಾರಗಳಿಂದ ವಿಳಂಬ ನೀತಿ: ಆಶಾಕಾರ್ಯಕರ್ತೆಯರಿಂದ ಪ್ರತಿಭಟನೆ

    May 12, 2026

    ತುಮಕೂರು: ಅಮ್ಲಾಪುರದ ಮದರಸಾದಲ್ಲಿ ಹೊರ ರಾಜ್ಯದ ಮಕ್ಕಳಿಗೆ ಹಿಂಸೆ: ಓಡಿಬಂದ 24 ಮಕ್ಕಳ ರಕ್ಷಣೆ

    May 12, 2026

    ವಡೇರಹಳ್ಳಿಯಲ್ಲಿ ಬಫರ್ ಡ್ಯಾಂ ವಿರೋಧಿಸಿ ರೈತರು, ಗ್ರಾಮಸ್ಥರಿಂದ ಪ್ರತಿಭಟನೆ

    May 12, 2026
    Facebook Twitter Instagram
    ಟ್ರೆಂಡಿಂಗ್
    • ನಾಲ್ಕು ತಿಂಗಳಿನಿಂದ ಗೌರವಧನವಿಲ್ಲ: ರಾಜ್ಯ, ಕೇಂದ್ರ ಸರ್ಕಾರಗಳಿಂದ ವಿಳಂಬ ನೀತಿ: ಆಶಾಕಾರ್ಯಕರ್ತೆಯರಿಂದ ಪ್ರತಿಭಟನೆ
    • ತುಮಕೂರು: ಅಮ್ಲಾಪುರದ ಮದರಸಾದಲ್ಲಿ ಹೊರ ರಾಜ್ಯದ ಮಕ್ಕಳಿಗೆ ಹಿಂಸೆ: ಓಡಿಬಂದ 24 ಮಕ್ಕಳ ರಕ್ಷಣೆ
    • ವಡೇರಹಳ್ಳಿಯಲ್ಲಿ ಬಫರ್ ಡ್ಯಾಂ ವಿರೋಧಿಸಿ ರೈತರು, ಗ್ರಾಮಸ್ಥರಿಂದ ಪ್ರತಿಭಟನೆ
    • ಬೌದ್ಧ ಧರ್ಮವು ಸಮಾನತೆ,  ಸೌಹಾರ್ದತೆ ಬೆಳೆಸುವಲ್ಲಿ ಪ್ರಮುಖ ಪಾತ್ರ ವಹಿಸಿದೆ: ಹರಾ ಮಹೇಶ್
    • ಗರ್ಭಕಂಠದ ಕ್ಯಾನ್ಸರ್ ತಡೆಗಟ್ಟಲು ಹೆಣ್ಣು ಮಕ್ಕಳಿಗೆ ಉಚಿತ ಲಸಿಕೆ: ಶಾಸಕ ಡಾ.ಎಚ್.ಡಿ.ರಂಗನಾಥ್
    • ಪಾವಗಡ: ಸಂವಿಧಾನ ಶಿಲ್ಪಿ ಡಾ.ಅಂಬೇಡ್ಕರ್ ಅವರ 135ನೇ ಜನ್ಮ ದಿನಾಚರಣೆ
    • ಕೈಮಗ್ಗ ನೇಕಾರರಿಗೆ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಹರಿಂದ ಅರ್ಜಿ ಆಹ್ವಾನ
    • ಸರ್ಕಾರಿ ನೌಕರರ ಮಕ್ಕಳ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸಾಂಸ್ಕೃತಿಕ ಚಟುವಟಿಕೆಗಳಿಂದ ಸರ್ವತೋಮುಖ ವಿಕಾಸ: ಸಚಿವ ಕೆ.ಎನ್.ರಾಜಣ್ಣ
    ತುಮಕೂರು January 8, 2025

    ಸಾಂಸ್ಕೃತಿಕ ಚಟುವಟಿಕೆಗಳಿಂದ ಸರ್ವತೋಮುಖ ವಿಕಾಸ: ಸಚಿವ ಕೆ.ಎನ್.ರಾಜಣ್ಣ

    By adminJanuary 8, 2025No Comments2 Mins Read
    k n rajanna

    ತುಮಕೂರು: ಶಿಕ್ಷಣ ಕಲಿಕೆ ಮತ್ತು ಸಾಂಸ್ಕೃತಿಕ ಚಟುವಟಿಕೆಗಳಿಂದ ವಿದ್ಯಾರ್ಥಿಗಳ ಸರ್ವತೋಮುಖ ವಿಕಾಸವಾಗುತ್ತದೆ ಎಂದು ಸಹಕಾರ ಸಚಿವ ಕೆ.ಎನ್.ರಾಜಣ್ಣ ಅಭಿಪ್ರಾಯ ವ್ಯಕ್ತಪಡಿಸಿದರು.

    ನಗರದ ಎಂಪ್ರೆಸ್ ಕರ್ನಾಟಕ ಪಬ್ಲಿಕ್ ಶಾಲೆಯ ಆಡಿಟೋರಿಯಂನಲ್ಲಿ ಬುಧವಾರ ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ), ರಾಜ್ಯ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ನಿಧಿ ಹಾಗೂ ಜಿಲ್ಲಾ ಪ್ರಾಚಾರ್ಯರ ಸಂಘದ ಸಹಯೋಗದಲ್ಲಿ ಏರ್ಪಡಿಸಿದ್ದ 2024–25ನೇ ಶೈಕ್ಷಣಿಕ ಸಾಲಿನ ಪದವಿ ಪೂರ್ವ ಕಾಲೇಜುಗಳ ರಾಜ್ಯ ಮಟ್ಟದ ಸಾಂಸ್ಕೃತಿಕ ಸ್ಪರ್ಧೆಗಳ ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಕಲಿಕೆಗೆ ಬಡವ, ಶ್ರೀಮಂತ ಎಂಬ ಭೇದ–ಭಾವ ಇರುವುದಿಲ್ಲ. ದೇವರು ಎಲ್ಲರಿಗೂ ಒಂದೇ ರೀತಿಯಾದ ಬುದ್ಧಿಶಕ್ತಿಯನ್ನು ಕೊಟ್ಟಿರುತ್ತಾನೆ. ಆ ಬುದ್ಧಿಶಕ್ತಿಯನ್ನು ಸೂಕ್ತ ರೀತಿಯಲ್ಲಿ ಬಳಸಿಕೊಂಡು ಉತ್ತಮ ವಿದ್ಯಾರ್ಥಿಗಳಾಗಿ ಹೊರ ಹೊಮ್ಮಬೇಕು ಎಂದು ಕರೆ ನೀಡಿದರು.


    Provided by
    Provided by

    ಉತ್ತಮ ಶಿಕ್ಷಣ ಪಡೆಯಲು ಲಭ್ಯವಿರುವ ಉತ್ತಮ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಂಡು ವಿದ್ಯಾರ್ಥಿಗಳು ಉನ್ನತ ಶಿಕ್ಷಣ ಪಡೆದು ಸಮಾಜದಲ್ಲಿ ಉತ್ತಮ ಪ್ರಜೆಗಳಾಗಿ ರೂಪುಗೊಳ್ಳಬೇಕು ಎಂದು ಹೇಳಿದರು.

    ಅಂಕ, ಪದವಿ ಮನುಷ್ಯನ ವ್ಯಕ್ತಿತ್ವದ ಮಾನದಂಡವಲ್ಲ. ವಿದ್ಯಾರ್ಥಿಗಳು ಶಿಕ್ಷಣದ ಜತೆಗೆ ಉತ್ತಮ ಪ್ರಜೆಗಳಾಗಿ ಹೊರಹೊಮ್ಮಿ ಅತ್ಯುತ್ತಮ ಭವಿಷ್ಯವನ್ನು ಕಂಡುಕೊಳ್ಳಬೇಕು ಎಂದು ಸಲಹೆ ನೀಡಿದರು.

    ವಿದ್ಯೆ ಸಾಧಕರ ಸ್ವತ್ತು ಹೊರತು ಸೋಮಾರಿಗಳದ್ದಲ್ಲ. ಶ್ರದ್ಧೆ, ಪ್ರಾಮಾಣಿಕತೆಯಿಂದ ಕಲಿತರೆ ಎಲ್ಲರಿಗೂ ವಿದ್ಯಾದೇವತೆ ಸರಸ್ವತಿ ಒಲಿಯುತ್ತಾಳೆ ಎಂದ ಅವರು, ಖ್ಯಾತ ವಿಜ್ಞಾನಿ ಆಲ್ಬರ್ಟ್ ಐನ್ಸ್ಟೈನ್ ಅವರು ಕಲಿಕೆಗೆ ವಯಸ್ಸಿನ ಮಿತಿ ಇಲ್ಲ ಎಂದು ಹೇಳಿದ್ದಾರೆ. ಅವರ ಮಾತು ಅಕ್ಷರಶಃ ಸತ್ಯ. ಕಲಿಕೆ ಎಂಬುದು ನಿಂತ ನೀರಲ್ಲ. ಪ್ರತಿನಿತ್ಯವೂ ಹೊಸತನ್ನು ಕಲಿಯುವುದು ಬಹಳಷ್ಟಿದೆ ಎಂದರು.

    ಶಾಲಾ–ಕಾಲೇಜುಗಳಲ್ಲಿ ಕ್ರೀಡಾ ಸ್ಪರ್ಧೆ ಆಯೋಜನೆ ಸಾಮಾನ್ಯ. ಆದರೆ ಸಾಂಸ್ಕೃತಿಕ ಸ್ಪರ್ಧೆಗಳು ನಡೆಸುತ್ತಿರುವುದು ವಿಶೇಷವಾಗಿದೆ. ಸ್ಪರ್ಧೆಗಳಲ್ಲಿ ಗೆಲ್ಲುವುದು ಮುಖ್ಯವಲ್ಲ, ಪಾಲ್ಗೊಳ್ಳುವುದು ಮುಖ್ಯ. ಇಂತಹ ಸ್ಪರ್ಧೆಗಳು ವಿದ್ಯಾರ್ಥಿಗಳ ಸರ್ವತೋಮುಖ ಅಭಿವೃದ್ಧಿಗೆ ಪೂರಕವಾಗಿವೆ ಎಂದರು.

    ಜಿಲ್ಲೆಯ ಪದವಿ ಪೂರ್ವ ಕಾಲೇಜಗಳಲ್ಲಿ ಬದಲಾವಣೆ ಬಯಸಿ, ಫಲಿತಾಂಶಗಳಲ್ಲಿ ಸಾಧನೆ ಮಾಡುವ ನಿಟ್ಟಿನಲ್ಲಿ ಉಪನಿರ್ದೇಶಕ ಡಾ: ಬಾಲಗುರುಮೂರ್ತಿ ಅವರು ಉತ್ತಮ ಹೆಜ್ಜೆ ಇಡುತ್ತಿದ್ದಾರೆ. ಪ್ರಾಂಶುಪಾಲರು, ಉಪನ್ಯಾಸಕರು ಸಹಕಾರ ನೀಡಿ ಉತ್ತಮ ಫಲಿತಾಂಶ ಬರಲು ಕಾರಣಕರ್ತರಾಗಬೇಕು ಎಂದು ಅವರು ತಿಳಿಸಿದರು.

    ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ: ಪುರುಷೋತ್ತಮ ಬಿಳಿಮಲೆ ನಮ್ಮದು ಬೆಸೆಯುವ ಸಂಸ್ಕೃತಿ. ಎಲ್ಲವನ್ನು ಬೆಸೆದುಕೊಂಡು ನಾಡನ್ನು ರೂಪಿಸಿಕೊಂಡಿದ್ದೇವೆ. ಹಾಗಾಗಿ ನಾವು ಕೋಮುವಾದಿಗಳಾಗದೆ ಜಾತಿವಾದಿಗಳಾಗದೆ ಕನ್ನಡವಾದಿಗಳಾಗಬೇಕು ಎಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು.

    ಪ್ರಾದೇಶಿಕವಾಗಿ ನೂರಾರು ಸಂಸ್ಕೃತಿಗಳು ನಮ್ಮ ನಾಡಿನಲ್ಲಿಯೇ ಇವೆ. ಇಂತಹ ವೈವಿಧ್ಯಮಯ ಸಂಸ್ಕೃತಿ ನಡುವೆ ಏಕ ಸಂಸ್ಕೃತಿಯ ಏರಿಕೆ ಮಾಡುವ ಹುನ್ನಾರ ನಡೆದಿದೆ. ಇದಕ್ಕೆ ನಾವು ಅವಕಾಶ ಕೊಡಬಾರದು ಎಂದರಲ್ಲದೆ, 2011ರ ಜನಗಣತಿ ಪ್ರಕಾರ ದೇಶದಲ್ಲಿ 19,560 ತಾಯ್ನುಡಿಗಳು ದಾಖಲಾಗಿವೆ. ಈ ಎಲ್ಲವೂ ಸಂಸ್ಕೃತಿಗಳೇ. ನಮ್ಮದು ವೈವಿಧ್ಯಮಯ ಭಾರತ. ಏಕ ಸಂಸ್ಕೃತಿಯದ್ದಲ್ಲ ಎಂದು ಹೇಳಿದರು.

    ಕೇಂದ್ರ ಸಾಹಿತ್ಯ ಅಕಾಡೆಮಿ ಪುರಸ್ಸೃತ ಕವಿ ಡಾ.ಬಿಳಿಗೆರೆ ಕೃಷ್ಣಮೂರ್ತಿ ಮಾತನಾಡಿ, ಸಾಂಸ್ಕೃತಿಕ ಬದುಕು ಬಡವಾದರೆ ನಾವೆಷ್ಟೇ ಶ್ರೀಮಂತರಾದರೂ ಪ್ರಯೋಜನವಿಲ್ಲ. ಹಾಗಾಗಿ ಸಾಂಸ್ಕೃತಿಕ ಕ್ರಾಂತಿ ನಡೆಯಬೇಕಿದೆ ಎಂದು ತಿಳಿಸಿದರಲ್ಲದೆ, ದೇಶದಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆ ಜಾರಿಗೆ ಬರಬೇಕಾದರೆ ಶತಮಾನಗಳ ತ್ಯಾಗ, ಬಲಿದಾನವಿದೆ.

    ಪ್ರಜಾಪ್ರಭುತ್ವದ ಧರ್ಮ ಉಳಿಯಲು ಸಾಂಸ್ಕೃತಿಕ ನಾಯಕರು ಬೇಕು ಎಂದು ತಿಳಿಸಿದರು.
    ಅಧ್ಯಕ್ಷತೆ ವಹಿಸಿದ್ದ ಶಾಸಕ ಜ್ಯೋತಿ ಗಣೇಶ್ ಮಾತನಾಡಿ, ಕಲೆ, ಸಾಹಿತ್ಯ, ಕ್ರೀಡೆ ಇಲ್ಲದ ಜೀವನ ಸತ್ತಂತೆ. ವಿದ್ಯಾರ್ಥಿ ಜೀವನದಲ್ಲಿ ವಿದ್ಯಾರ್ಥಿಗಳು ಈ ಎಲ್ಲ ಚಟುವಟಿಕೆಗಳಲ್ಲಿ ಭಾಗಿಯಾಗುವ ಮೂಲಕ ತಮ್ಮ ಉತ್ತಮ ಭವಿಷ್ಯವನ್ನು ರೂಪಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

    ಪ್ರಸ್ತುತ ದಿನಗಳಲ್ಲಿ ಭಾಷೆಗಳು, ಸಂಸ್ಕೃತಿಗಳು ನಶಿಸುತ್ತಿವೆ. ಇಂದಿನ ಪೀಳಿಗೆಗೂ ನಮಗೂ ಅಜಗಜಾಂತರ ವ್ಯತ್ಯಾಸಗಳು ಕಂಡು ಬರುತ್ತಿವೆ. ಹಾಗಾಗಿ ನಮಗೂ ಇಂದಿನ ಪೀಳಿಗೆಗೂ ಸಾಂಸ್ಸೃತಿಕ ಸೇತುವೆ ಕಟ್ಟುವ ಅನಿವಾರ್ಯತೆ ಇದೆ ಎಂದರು.

    ಸಮಾರಂಭದಲ್ಲಿ ಜಿಲ್ಲಾಧಿಕಾರಿ ಶುಭಕಲ್ಯಾಣ್, ಜಿಲ್ಲಾ ಪ್ರಾಂಶುಪಾಲರ ಸಂಘದ ಅಧ್ಯಕ್ಷ ಪ್ರಭಾಕರ್ರೆಡ್ಡಿ, ಹರಿಕಥಾ ವಿದ್ವಾನ್ ಡಾ: ಲಕ್ಷ್ಮಣದಾಸ್, ಬಸವರಾಜು, ಮಹಾಲಿಂಗೇಶ್, ಮಲ್ಲಯ್ಯ, ಡಾ.ಸದಾಶಿವಯ್ಯ, ಚಂದ್ರಶೇಖರ್ ಆರಾಧ್ಯ, ರವಿಕುಮಾರ್, ಗೋವಿಂದರಾಜು ಮತ್ತಿತರರು ಉಪಸ್ಥಿತರಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

    admin
    • Website

    Related Posts

    ನಾಲ್ಕು ತಿಂಗಳಿನಿಂದ ಗೌರವಧನವಿಲ್ಲ: ರಾಜ್ಯ, ಕೇಂದ್ರ ಸರ್ಕಾರಗಳಿಂದ ವಿಳಂಬ ನೀತಿ: ಆಶಾಕಾರ್ಯಕರ್ತೆಯರಿಂದ ಪ್ರತಿಭಟನೆ

    May 12, 2026

    ತುಮಕೂರು: ಅಮ್ಲಾಪುರದ ಮದರಸಾದಲ್ಲಿ ಹೊರ ರಾಜ್ಯದ ಮಕ್ಕಳಿಗೆ ಹಿಂಸೆ: ಓಡಿಬಂದ 24 ಮಕ್ಕಳ ರಕ್ಷಣೆ

    May 12, 2026

    ವಡೇರಹಳ್ಳಿಯಲ್ಲಿ ಬಫರ್ ಡ್ಯಾಂ ವಿರೋಧಿಸಿ ರೈತರು, ಗ್ರಾಮಸ್ಥರಿಂದ ಪ್ರತಿಭಟನೆ

    May 12, 2026

    Comments are closed.

    Our Picks

    ಪಂಚ ರಾಜ್ಯಗಳ ಚುನಾವಣೆ ಫಲಿತಾಂಶ: ತಮಿಳುನಾಡಿನಲ್ಲಿ ನಟ ವಿಜಯ್ ಅಬ್ಬರ, ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮುನ್ನಡೆ

    May 4, 2026

    ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕೋರ್ಟ್ ಕದ ತಟ್ಟಿದ ನಟ ದರ್ಶನ್: ಮೇ 4ಕ್ಕೆ ವಿಚಾರಣೆ

    April 29, 2026

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ನಾಲ್ಕು ತಿಂಗಳಿನಿಂದ ಗೌರವಧನವಿಲ್ಲ: ರಾಜ್ಯ, ಕೇಂದ್ರ ಸರ್ಕಾರಗಳಿಂದ ವಿಳಂಬ ನೀತಿ: ಆಶಾಕಾರ್ಯಕರ್ತೆಯರಿಂದ ಪ್ರತಿಭಟನೆ

    May 12, 2026

    ತುಮಕೂರು: ಕಳೆದ ನಾಲ್ಕು ತಿಂಗಳಿಂದ ವೇತನವಿಲ್ಲದೆ ಆಶಾ ಕಾರ್ಯಕರ್ತೆಯರ ಜೀವನ ನಡೆಸುವುದು ಕಷ್ಟಕರವಾಗಿದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರದ ಎರಡು…

    ತುಮಕೂರು: ಅಮ್ಲಾಪುರದ ಮದರಸಾದಲ್ಲಿ ಹೊರ ರಾಜ್ಯದ ಮಕ್ಕಳಿಗೆ ಹಿಂಸೆ: ಓಡಿಬಂದ 24 ಮಕ್ಕಳ ರಕ್ಷಣೆ

    May 12, 2026

    ವಡೇರಹಳ್ಳಿಯಲ್ಲಿ ಬಫರ್ ಡ್ಯಾಂ ವಿರೋಧಿಸಿ ರೈತರು, ಗ್ರಾಮಸ್ಥರಿಂದ ಪ್ರತಿಭಟನೆ

    May 12, 2026

    ಬೌದ್ಧ ಧರ್ಮವು ಸಮಾನತೆ,  ಸೌಹಾರ್ದತೆ ಬೆಳೆಸುವಲ್ಲಿ ಪ್ರಮುಖ ಪಾತ್ರ ವಹಿಸಿದೆ: ಹರಾ ಮಹೇಶ್

    May 12, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.