ಬೆಂಗಳೂರು: ಆಂಧ್ರ ಪ್ರದೇಶದ ತಿರುಪತಿ ತಿರುಮಲ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಬುಧವಾರ ರಾತ್ರಿ ಸಂಭವಿಸಿದ ಕಾಲ್ತುಳಿತದಲ್ಲಿ ಬಳ್ಳಾರಿ ಮೂಲದ ಮಹಿಳೆಯೊಬ್ಬರೂ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.
ಮೃತರನ್ನು ಬಳ್ಳಾರಿ ಮೂಲದ ನಿರ್ಮಲಾ (50) ಎಂದು ಗುರುತಿಸಲಾಗಿದೆ.
ದುರ್ಘಟನೆಯಲ್ಲಿ 60ಕ್ಕೂ ಹೆಚ್ಚು ಮಂದಿ ಅಸ್ವಸ್ಥಗೊಂಡಿದ್ದು, ಗಾಯಾಳುಗಳಿಗೆ ಚಿಕಿತ್ಸೆ ಮುಂದುವರಿದಿದೆ,ಗುರುವಾರ ಬೆಳಗ್ಗೆ 5 ಗಂಟೆಯಿಂದ ಶ್ರೀನಿವಾಸಂ, ಸತ್ಯನಾರಾಯಣಪುರಂ ಮತ್ತು ಬೈರಾಗಿಪಟ್ಟೆಡ ಸೇರಿದಂತೆ 9 ಪ್ರದೇಶಗಳಲ್ಲಿ ಸ್ಥಾಪಿಸಲಾಗಿರುವ 94 ಕೌಂಟರ್ ಗಳ ಮೂಲಕ ವೈಕುಂಠ ದ್ವಾರ ದರ್ಶನ ಟಿಕೆಟ್ ನೀಡಲು ಟಿಟಿಡಿ ಯೋಜಿಸಿತ್ತು. ಆದರೆ, ಟೋಕನ್ ಗಳಿಗಾಗಿ ಬುಧವಾರ ಸಂಜೆಯೇ ದೊಡ್ಡ ಸಂಖ್ಯೆಯಲ್ಲಿ ಜನರು ಜಮಾಯಿಸಿದ್ದರು.
ಈ ನಡುವೆ ಟಿಕೆಟ್ ಕೌಂಟರ್ ಸಿಬ್ಬಂದಿಯೊಬ್ಬರು ಅಸ್ವಸ್ಥಗೊಂಡ ಹಿನ್ನೆಲೆಯಲ್ಲಿ ಅವರನ್ನು ಹೊರಗೆ ಕರೆದೊಯ್ಯಲು ಗೇಟ್ ತೆರೆದಾಗ ಹೊರಗಿದ್ದವರೆಲ್ಲರೂ ಗುಂಪು ಗುಂಪಾಗಿ ಒಳಗೆ ನುಗ್ಗಲು ಯತ್ನಿಸಿದ್ದಾರೆ. ಈ ವೇಳೆ ಕಾಲ್ತುಳಿತ ಸಂಭವಿಸಿದೆ ಎಂದು ತಿಳಿದುಬಂದಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx


