nammatumakuru

    Subscribe to Updates

    Get the latest creative news from FooBar about art, design and business.

    What's Hot

    ತಿಪಟೂರಿನಲ್ಲಿ 2078ನೇ ಮದ್ಯವರ್ಜನ ಶಿಬಿರಕ್ಕೆ ಚಾಲನೆ: ವ್ಯಸನಮುಕ್ತ ಸಮಾಜ ನಿರ್ಮಾಣಕ್ಕೆ ಪೂಜ್ಯ ಹೆಗ್ಗಡೆಯವರ ಕೊಡುಗೆ ಅನನ್ಯ: ಡಾ. ಶ್ರೀಧರ್

    July 1, 2026

    ಖಾಸಗಿ ಆಂಬುಲೆನ್ಸ್ ಸೇವೆ ಶುಲ್ಕ ನಿಯಂತ್ರಣಕ್ಕೆ ಜಿಲ್ಲಾಧಿಕಾರಿಗೆ ಕರವೇ ಮನವಿ

    July 1, 2026

    ಕೊರಟಗೆರೆ: ಮಾದಕ ವ್ಯಸನ ತಡೆಗೆ ‘ಸ್ವಾಸ್ಥ್ಯ ಸಂಕಲ್ಪ’ ಜಾಗೃತಿ

    July 1, 2026
    Facebook Twitter Instagram
    ಟ್ರೆಂಡಿಂಗ್
    • ತಿಪಟೂರಿನಲ್ಲಿ 2078ನೇ ಮದ್ಯವರ್ಜನ ಶಿಬಿರಕ್ಕೆ ಚಾಲನೆ: ವ್ಯಸನಮುಕ್ತ ಸಮಾಜ ನಿರ್ಮಾಣಕ್ಕೆ ಪೂಜ್ಯ ಹೆಗ್ಗಡೆಯವರ ಕೊಡುಗೆ ಅನನ್ಯ: ಡಾ. ಶ್ರೀಧರ್
    • ಖಾಸಗಿ ಆಂಬುಲೆನ್ಸ್ ಸೇವೆ ಶುಲ್ಕ ನಿಯಂತ್ರಣಕ್ಕೆ ಜಿಲ್ಲಾಧಿಕಾರಿಗೆ ಕರವೇ ಮನವಿ
    • ಕೊರಟಗೆರೆ: ಮಾದಕ ವ್ಯಸನ ತಡೆಗೆ ‘ಸ್ವಾಸ್ಥ್ಯ ಸಂಕಲ್ಪ’ ಜಾಗೃತಿ
    • ಕೊರಟಗೆರೆಯಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ ಆರಂಭ ; ಜು.29ರವರೆಗೆ ಮನೆ-ಮನೆ ಭೇಟಿ
    • ಮತದಾರರ ಪಟ್ಟಿ ಪರಿಷ್ಕರಣೆಗೆ ಮನೆ–ಮನೆಗೆ ಭೇಟಿ ನೀಡುವ ಗಣತಿದಾರರಿಗೆ ಸಹಕರಿಸಲು ಮನವಿ
    • ಬೀದರ್‌: ರಾಡ್‌ನಿಂದ ಮಾರಣಾಂತಿಕ ಹಲ್ಲೆಗೈದು ಪತ್ನಿಯನ್ನು ಕೊಂದ ಪತಿ
    • ಬೀದರ್‌ | ಹೆದ್ದಾರಿಯಲ್ಲಿ ಬೈಕ್‌ ಗೆ ಕಾರು ಡಿಕ್ಕಿ: ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ‌, ಓರ್ವ ಗಂಭೀರ ಗಾಯ
    • ವೈದ್ಯರು – ಸಮಾಜದ ಜೀವನಾಡಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಜಿಲ್ಲೆಯಲ್ಲಿ 13 ಬಾಲ್ಯ ವಿವಾಹ ಪ್ರಕರಣ ವರದಿ:  ಅಧಿಕಾರಿಗಳ ಮೇಲೆ ಶಿಸ್ತು ಕ್ರಮಕ್ಕೆ ಜಿಲ್ಲಾಧಿಕಾರಿ ಸೂಚನೆ
    ಜಿಲ್ಲಾ ಸುದ್ದಿ January 11, 2025

    ಜಿಲ್ಲೆಯಲ್ಲಿ 13 ಬಾಲ್ಯ ವಿವಾಹ ಪ್ರಕರಣ ವರದಿ:  ಅಧಿಕಾರಿಗಳ ಮೇಲೆ ಶಿಸ್ತು ಕ್ರಮಕ್ಕೆ ಜಿಲ್ಲಾಧಿಕಾರಿ ಸೂಚನೆ

    By adminJanuary 11, 2025No Comments2 Mins Read
    shubha kalyan

    ತುಮಕೂರು:  ಜಿಲ್ಲೆಯಲ್ಲಿ ಕಳೆದ 2024ರ ಏಪ್ರಿಲ್ ಮಾಹೆಯಿಂದ ಡಿಸೆಂಬರ್‌ ವರೆಗೆ ಒಟ್ಟು 13 ಬಾಲ್ಯ ವಿವಾಹ ಪ್ರಕರಣಗಳು ವರದಿಯಾಗಿದ್ದು, ಬಾಲ್ಯ ವಿವಾಹವನ್ನು ತಡೆಯುವ ನಿಟ್ಟಿನಲ್ಲಿ ಸಮರ್ಪಕವಾಗಿ ಕಾರ್ಯನಿರ್ವಹಿಸದ ಅಧಿಕಾರಿಗಳ ಮೇಲೆ ಶಿಸ್ತುಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸಭೆಯಲ್ಲಿ ಎಚ್ಚರಿಕೆ ನೀಡಿದರು.

    ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ 2 ಮತ್ತು 3ನೇ ತ್ರೈಮಾಸಿಕಕ್ಕೆ ಸಂಬಂಧಿಸಿದಂತೆ ಗುರುವಾರ ಜರುಗಿದ ಜಿಲ್ಲಾ ಮಟ್ಟದ ಸಮನ್ವಯ ಸಮಿತಿಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ಬಾಲ್ಯ ವಿವಾಹಗಳು ನಡೆಯುವಾಗ ಅಧಿಕಾರಿಗಳ ಗಮನಕ್ಕೆ ಯಾಕೆ ಬಂದಿಲ್ಲ? ಇಂತಹ ಪ್ರಕರಣಗಳು ಮರುಕಳಿಸಬಾರದು. ಕರ್ತವ್ಯ ನಿರ್ಲಕ್ಷತೆ ತೋರುವ ಯಾವುದೇ ಸಿಬ್ಬಂದಿಯನ್ನು ಸೇವೆಯಲ್ಲಿ ಮುಂದುವರೆಸಬಾರದು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದ ಅವರು, ಬಾಲ್ಯ ವಿವಾಹಗಳನ್ನು ತಡೆಯಲು ಕೈಗೊಂಡ ಕ್ರಮಗಳ ಬಗ್ಗೆ ಕೂಡಲೇ ತಾಲ್ಲೂಕುವಾರು ವರದಿ ನೀಡಬೇಕು ಎಂದು ನಿರ್ದೇಶನ ನೀಡಿದರು.

    ಬಾಲ್ಯ ವಿವಾಹಗಳು ನಡೆಯದಂತೆ ತಡೆಯಲು ಶಾಲಾ–ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಅರಿವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು ಎಂದು ಶಾಲಾ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

    ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಮಹಿಳಾ ಸಾಂತ್ವನ ಕೇಂದ್ರಗಳ ಬಗ್ಗೆ ಮಾಹಿತಿ ಪಡೆದ ಜಿಲ್ಲಾಧಿಕಾರಿಗಳು, ಸಾಂತ್ವನ ಕೇಂದ್ರಗಳು ಮಹಿಳೆಯರು ಸುಲಭವಾಗಿ ಗುರುತಿಸಿರುವ ಸ್ಥಳದಲ್ಲಿರಬೇಕು. ಕೇಂದ್ರದಲ್ಲಿ ಶೋಷಣೆಗೊಳಗಾದ, ನೊಂದ ಮಹಿಳೆಯರ ರಕ್ಷಣೆ, ಕಾನೂನಿನ ನೆರವು, ತಾತ್ಕಾಲಿಕ ಆಶ್ರಯ, ಆಪ್ತ ಸಮಾಲೋಚನೆ ಇತ್ಯಾದಿ ನೆರವುಗಳನ್ನು ಒದಗಿಸಬೇಕು. ಸಾಂತ್ವನ ಕೇಂದ್ರಗಳಲ್ಲಿ ಸ್ವೀಕರಿಸಲಾದ ಮಹಿಳಾ ದೌರ್ಜನ್ಯ ಪ್ರಕರಣಗಳನ್ನು ಶೀಘ್ರವಾಗಿ ವಿಲೇ ಮಾಡಬೇಕೆಂದು ಸೂಚನೆ ನೀಡಿದರು.

    ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಚೇತನ್ ಕುಮಾರ್ ಮಾತನಾಡಿ, ಸ್ವೀಕಾರ ಕೇಂದ್ರ, ಸಖಿ ಒನ್ ಸ್ಟಾಪ್ ಸೆಂಟರ್, ಉದ್ಯೋಗಿನಿ ಯೋಜನೆ, ಚೇತನ ಯೋಜನೆ, ಧನಶ್ರೀ ಯೋಜನೆ ಸೇರಿದಂತೆ ವಿವಿಧ ಯೋಜನೆಗಳ ಪ್ರಗತಿ ಮಾಹಿತಿಯನ್ನು ಸಭೆಗೆ ತಿಳಿಸಿದರು.

    ಸಭೆಯಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನೂರುನ್ನೀಸಾ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ದಿನೇಶ್, ವಿವಿಧ ತಾಲ್ಲೂಕಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಸೇರಿದಂತೆ ಮತ್ತಿತರರು ಹಾಜರಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx


    Provided by
    Provided by
    admin
    • Website

    Related Posts

    ಬೀದರ್‌: ರಾಡ್‌ನಿಂದ ಮಾರಣಾಂತಿಕ ಹಲ್ಲೆಗೈದು ಪತ್ನಿಯನ್ನು ಕೊಂದ ಪತಿ

    July 1, 2026

    ಬೀದರ್‌ | ಹೆದ್ದಾರಿಯಲ್ಲಿ ಬೈಕ್‌ ಗೆ ಕಾರು ಡಿಕ್ಕಿ: ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ‌, ಓರ್ವ ಗಂಭೀರ ಗಾಯ

    July 1, 2026

    ಸಮಸ್ಯೆಯನ್ನು ಆಲಿಸಲು ಪ್ರತಿನಿತ್ಯ ಪೋತಿ ಖಾತೆ ಅಭಿಯಾನ: ಜಿಲ್ಲಾಧಿಕಾರಿ ಶುಭ ಕಲ್ಯಾಣ್

    June 30, 2026

    Comments are closed.

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತಿಪಟೂರು

    ತಿಪಟೂರಿನಲ್ಲಿ 2078ನೇ ಮದ್ಯವರ್ಜನ ಶಿಬಿರಕ್ಕೆ ಚಾಲನೆ: ವ್ಯಸನಮುಕ್ತ ಸಮಾಜ ನಿರ್ಮಾಣಕ್ಕೆ ಪೂಜ್ಯ ಹೆಗ್ಗಡೆಯವರ ಕೊಡುಗೆ ಅನನ್ಯ: ಡಾ. ಶ್ರೀಧರ್

    July 1, 2026

    ತಿಪಟೂರು: ವ್ಯಸನಮುಕ್ತ ಸಮಾಜದ ನಿರ್ಮಾಣಕ್ಕಾಗಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮತ್ತು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್…

    ಖಾಸಗಿ ಆಂಬುಲೆನ್ಸ್ ಸೇವೆ ಶುಲ್ಕ ನಿಯಂತ್ರಣಕ್ಕೆ ಜಿಲ್ಲಾಧಿಕಾರಿಗೆ ಕರವೇ ಮನವಿ

    July 1, 2026

    ಕೊರಟಗೆರೆ: ಮಾದಕ ವ್ಯಸನ ತಡೆಗೆ ‘ಸ್ವಾಸ್ಥ್ಯ ಸಂಕಲ್ಪ’ ಜಾಗೃತಿ

    July 1, 2026

    ಕೊರಟಗೆರೆಯಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ ಆರಂಭ ; ಜು.29ರವರೆಗೆ ಮನೆ-ಮನೆ ಭೇಟಿ

    July 1, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.