ಚಿಕ್ಕಮಗಳೂರು: ನನಗೆ ಯಾರ ಬೆಂಬಲವೂ ಬೇಡ, ನನಗಾಗಿ ಯಾವ ನಾಯಕರು, ಶಾಸಕರು, ಬೆಂಬಲಿಗರು ಕೂಗೋದು ಬೇಡ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು.
ಶೃಂಗೇರಿ ಮಠಕ್ಕೆ ಭೇಟಿ ನೀಡಿದ ವೇಳೆ ಮಾಧ್ಯಮಗಳ ಜೊತೆಗೆ ಮಾತನಾಡಿದರು. ಟೆಂಪಲ್ ರನ್ ಎಂಬ ಮಾಧ್ಯಮದವರ ಪ್ರಶ್ನೆಗೆ, ನಾನು ದಿನ ಪೂಜೆ ಮಾಡ್ತೀನಿ. ನಾನು ಧರ್ಮದ ಮೇಲೆ ನಂಬಿಕೆ ಇಟ್ಟವನು. ಸಮಾಜ, ಜನ, ರಾಜ್ಯ, ಪಕ್ಷ, ಕುಟುಂಬಕ್ಕಾಗಿ ಪೂಜೆ ಮಾಡ್ತೀನಿ. ಟೆಂಪಲ್ ರನ್ ಏನಿಲ್ಲ, ಹಾಗಾದ್ರೆ ದೇವಸ್ಥಾನ ಏಕೆ, ಬೀಗ ಹಾಕ್ಬಿಡಿ. ದೇವನೊಬ್ಬ ನಾಮ ಹಲವು ಎನ್ನುವ ತತ್ವದ ಮೇಲೆ ನಂಬಿಕೆ ಇಟ್ಟವನು ನಾನು. ಅವರವರ ನಂಬಿಕೆ ಅವರವರ ಆಚಾರ-ವಿಚಾರ ಅವರಿಗೆ ಬಿಟ್ಟದ್ದು ಎಂದರು.
ರಾಜಕಾರಣದಲ್ಲಿ ಯಾವ ತಿರುವು ಅವಶ್ಯಕತೆ ಇಲ್ಲ. ಪಕ್ಷ, ಹೈಕಮಾಂಡ್ ಹೇಳಿದ್ದೇ ಅಂತಿಮ. ನನಗೆ ಯಾರ ಒತ್ತಾಯ, ಬೆಂಬಲ ಏನೂ ಬೇಡ. ನನಗಾಗಿ ಕಾರ್ಯಕರ್ತರು, ಶಾಸಕರು, ಬೆಂಬಲಿಗರು, ಕೂಗೋದು ಬೇಡ. ಮಾಡೋ ಕೆಲಸ ಮಾಡೋಣ, ಫಲಾಫಲ ದೇವರಿಗೆ ಬಿಡೋಣ ಎಂದು ಹೇಳಿಕೆ ನೀಡಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx