ತುಮಕೂರು: ಯುವಜನತೆ ಸ್ವಾಮಿ ವಿವೇಕಾನಂದರಆದರ್ಶ ಮತ್ತು ಚಿಂತನೆಗಳನ್ನು ಅಳವಡಿಸಿಕೊಂಡರೆ ಜೀವನದಲ್ಲಿಯಶಸ್ಸು ಸಾಧ್ಯವಿದೆ. ನಮ್ಮದೇಶದ ಮಹತ್ತರ ಅಭಿವೃದ್ಧಿ ಮತ್ತು ಬೆಳವಣಿಗೆಯಲ್ಲಿ ಯುವ ಸಮುದಾಯದ ಪಾತ್ರ ಮಹತ್ವದಿ ಇದನ್ನು ಅರಿತು ಕಾರ್ಯೋಮುಖರಾಗಬೇಕು ಎಂದು ತುಮಕೂರು ವಿಶ್ವವಿದ್ಯಾನಿಲಯ ವಾಣಿಜ್ಯಶಾಸ್ತ್ರ ಅಧ್ಯಯನ ಮತ್ತು ಸಂಶೋಧನ ವಿಭಾಗದ ಮುಖ್ಯಸ್ಥ ಪ್ರೊ.ಬಿ.ಶೇಖರ್ ತಿಳಿಸಿದರು.
ವಿಶ್ವವಿದ್ಯಾನಿಲಯ ಕಲಾ ಕಾಲೇಜಿನ ವ್ಯವಹಾರ ಆಡಳಿತ ವಿಭಾಗದ ವತಿಯಿಂದ ನಡೆದ ರಾಷ್ಟ್ರೀಯ ಯುವ ದಿನಾಚರಣೆ ಮತ್ತು ಸಂಕ್ರಾಂತಿ ಸಂಭ್ರಮಕಾರ್ಯಕ್ರಮವನ್ನು ಉದ್ಘಾಟಸಿ ಅವರು ಮಾತನಾಡಿದರು.
ಕಾಲೇಜಿನ ಪ್ರಾಂಶುಪಾಲ ಪ್ರೊ. ಬಿ.ಕರಿಯಣ್ಣ, ಸಂಕ್ರಾಂತಿಯು ನಮ್ಮ ಧಾನ್ಯಗಳನ್ನು ಪೂಜಿಸಿ ಸಂಭ್ರಮಿಸುವ ಸಡಗರದ ಹಬ್ಬವಾಗಿದೆ. ಈಗಿನ ಯುವಜನತೆ ನಮ್ಮ ನೆಲದ ಸಂಸ್ಕೃತಿಯನ್ನು ಮರೆಯುತ್ತಿರುವ ಈ ಸಂದರ್ಭದಲ್ಲಿ ಈ ಸಂಕ್ರಾಂತಿ ಸಂಭ್ರಮದಂತಹ ಕಾರ್ಯಕ್ರಮಗಳಿಂದ ವಿದ್ಯಾರ್ಥಿಗಳಲ್ಲಿ ಮೌಲ್ಯವನ್ನು ತುಂಬಿಸಲು ಸಾಧ್ಯವಾಗುತ್ತಿದೆ ಎಂದರು.
ವಿಭಾಗದ ಮುಖ್ಯಸ್ಥ ಡಾ.ಎಂ.ಡಿ.ಶ್ರೀನಿವಾಸ್ ಮೂರ್ತಿ, ಉಪನ್ಯಾಸಕರಾದ ಮಂಜುಳಾದೇವಿ, ರಾಜೇಶ್‌ಮತ್ತಿತರರು ಹಾಜರಿದ್ದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx