nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬರಗಾಲದ ಆತಂಕ ಬೇಡ, ಕಾಂಗ್ರೆಸ್ ಸರ್ಕಾರ, ನಾವೂ ಇದ್ದೇವೆ: ಕೆ.ಎನ್. ರಾಜಣ್ಣ

    August 13, 2026

    ತುರುವೇಕೆರೆ: ಜಿ.ಪರಮೇಶ್ವರ್ ಅವರಿಂದ ಬರ ಅಧ್ಯಯನದ ಆತುರದ ವೀಕ್ಷಣೆ: ರೈತರಿಗೆ ನಿರಾಸೆ

    August 13, 2026

    ಆ.29: ಪಾವಗಡದಲ್ಲಿ ಉದ್ಯೋಗ ಮೇಳ

    August 13, 2026
    Facebook Twitter Instagram
    ಟ್ರೆಂಡಿಂಗ್
    • ಬರಗಾಲದ ಆತಂಕ ಬೇಡ, ಕಾಂಗ್ರೆಸ್ ಸರ್ಕಾರ, ನಾವೂ ಇದ್ದೇವೆ: ಕೆ.ಎನ್. ರಾಜಣ್ಣ
    • ತುರುವೇಕೆರೆ: ಜಿ.ಪರಮೇಶ್ವರ್ ಅವರಿಂದ ಬರ ಅಧ್ಯಯನದ ಆತುರದ ವೀಕ್ಷಣೆ: ರೈತರಿಗೆ ನಿರಾಸೆ
    • ಆ.29: ಪಾವಗಡದಲ್ಲಿ ಉದ್ಯೋಗ ಮೇಳ
    • ದೇವೇಗೌಡರ ಪತ್ನಿ ಚೆನ್ನಮ್ಮ ನಿಧನಕ್ಕೆ ವಿಧಾನಸಭೆಯಲ್ಲಿ ಸಂತಾಪ; ಸರ್ಕಾರಿ ಗೌರವ ನಿರ್ಧಾರ ಸಮರ್ಥಿಸಿಕೊಂಡ ಸಿಎಂ ಡಿ.ಕೆ. ಶಿವಕುಮಾರ್
    • ಮೇಕೆ ಮೇಲೆ ದಾಳಿ ಮಾಡಲು ಬಂದ ಚಿರತೆ ಸೆರೆ
    • ವಿಐಪಿ ಸೆಲ್ ನಿಂದ ಸಾಮಾನ್ಯ ಕೈದಿಗಳ ಸೆಲ್ ಗೆ ಪ್ರಜ್ವಲ್ ರೇವಣ್ಣ ಶಿಫ್ಟ್: ಮೊಬೈಲ್ ನಲ್ಲಿ ಅಶ್ಲೀಲ ವಿಡಿಯೋಗಳು ಪತ್ತೆ!
    • ಸರಗೂರು: ತಳಮಟ್ಟದ ಕಾರ್ಯಕರ್ತರೇ ಪಕ್ಷದ ಶಕ್ತಿ – ಬಿಜೆಪಿ ಜಿಲ್ಲಾಧ್ಯಕ್ಷ ಕೆ. ಎನ್. ಸುಬ್ಬಣ್ಣ ಕರೆ
    • ವಿದ್ಯಾರ್ಥಿಗಳಲ್ಲಿ ಪ್ರತಿಭೆಗೆ ಕೊರತೆಯಿಲ್ಲ, ಪ್ರಾಮಾಣಿಕತೆ ಬೆಳೆಸಿಕೊಳ್ಳುವುದು ಮುಖ್ಯ: ಸಾಹಿತಿ ರಿಜ್ವಾನ್ ಪಾಷಾ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮೌಲ್ಯವರ್ಧಿತ ಆಹಾರ ಉತ್ಪನ್ನಗಳ ಹೆಚ್ಚಳದಲ್ಲಿ  ಸಂಶೋಧನೆ, ಸಿ.ಎಸ್.ಆರ್ ನಿಧಿ ಬಳಕೆ ಆಗಲಿ: ಉಪರಾಷ್ಟ್ರಪತಿ ಜಗದೀಪ ಧನಕರ್
    ರಾಜ್ಯ ಸುದ್ದಿ January 16, 2025

    ಮೌಲ್ಯವರ್ಧಿತ ಆಹಾರ ಉತ್ಪನ್ನಗಳ ಹೆಚ್ಚಳದಲ್ಲಿ  ಸಂಶೋಧನೆ, ಸಿ.ಎಸ್.ಆರ್ ನಿಧಿ ಬಳಕೆ ಆಗಲಿ: ಉಪರಾಷ್ಟ್ರಪತಿ ಜಗದೀಪ ಧನಕರ್

    By adminJanuary 16, 2025No Comments2 Mins Read
    jagdeep dhankar

    ಧಾರವಾಡ: ಆಹಾರ ಉತ್ಪನ್ನಗಳ ಉತ್ಪಾದನೆಯಲ್ಲಿ ನಾವು ಸ್ವಾವಲಂಬಿಗಳಾಗಿದ್ದು, ಮೌಲ್ಯವರ್ಧಿತ ಆಹಾರ ಉತ್ಪನ್ನಗಳ  ಹೆಚ್ಚಳಕ್ಕಾಗಿ ಕೃಷಿ ಕ್ಷೇತ್ರದಲ್ಲಿ ಹೆಚ್ಚು ಸಂಶೋಧನೆಗಳಾಗಬೇಕು ಮತ್ತು ಸಿ.ಎಸ್.ಆರ್, ಐ.ಸಿ.ಎ.ಆರ್ ನಿಧಿಗಳ ಬಳಕೆಗೆ ಕೃಷಿ ಸಂಶೋಧನೆ ಕ್ಷೇತ್ರದಲ್ಲಿ ಆದ್ಯತೆ ನೀಡಬೇಕೆಂದು ಉಪರಾಷ್ಟ್ರಪತಿ ಜಗದೀಪ ಧನಕರ್ ಅವರು ಹೇಳಿದರು.

    ಅವರು ಇಂದು ಬೆಳಿಗ್ಗೆ ಧಾರವಾಡ ಕೃಷಿ ವಿಶ್ವವಿದ್ಯಾಲಯದ ಕೃಷಿ ಮಹಾವಿದ್ಯಾಲಯ ಅಮೃತ ಮಹೋತ್ಸವ ಹಾಗೂ ಹಳೆಯ ವಿದ್ಯಾರ್ಥಿಗಳ ಸಮ್ಮಿಲನ ಕಾರ್ಯಕ್ರಮ ಉದ್ಘಾಟಿಸಿ, ಮಾತನಾಡಿದರು.

    ಕೃಷಿ ಭಾರತದ ಆರ್ಥಿಕತೆಯ ಬೆನ್ನೆಲಬು, ರೈತರ ತಲಾ ಆದಾಯವನ್ನೂ ಇನ್ನು ಎಂಟುಪಟ್ಟು ಹೆಚ್ಚಿಸುವ ಗುರಿಯನ್ನು ಕೇಂದ್ರ ಸರಕಾರ ಹೊಂದಿದೆ. ಇದಕ್ಕೆ ಪೂರಕವಾದ ಚಟುವಟಿಕೆಗಳನ್ನು ಹಮ್ಮಿಕೊಳ್ಳಲು ಅನುವಾಗುವಂತೆ ಕೃಷಿಯಲ್ಲಿ ಸಾಂಪ್ರದಾಯಿಕತೆ ಉಳಿಸಿಕೊಂಡು ಆಧುನಿಕತೆ ಅಳವಡಿಸಿಕೊಳ್ಳಲು ಅನೇಕ ಯೋಜನೆಗಳನ್ನು ಜಾರಿಗೊಳಿಸಿದೆ ಎಂದು ಉಪರಾಷ್ಟ್ರಪತಿಗಳು ತಿಳಿಸಿದರು.

    ಕೃಷಿಗೆ ಭಾರತ ಸರಕಾರ ಮೊದಲಿನಿಂದಲೂ ಆದ್ಯತೆ ನೀಡಿದೆ. ಜೈ ಜವಾನ್, ಜೈ ಕಿಸಾನ್, ಜೈ ವಿಜ್ಞಾನ ಜೊತೆಗೆ ಈಗ ಪ್ರಧಾನಿ ನರೇಂದ್ರ ಮೋದಿ ಅವರು ಜೈ ಅನುಸಂದಾನ ಸೇರಿಸಿ, ಮಹತ್ವಪೂರ್ಣಗೊಳಿಸಿದ್ದಾರೆ. ರೈತರ ಹೊಲಗಳು ಸಮೃದ್ಧ ಬೆಳೆಗಳಿಂದ ಬೆಳೆದಾಗ ಮಾತ್ರ ದೇಶವು ಹೊಳೆಯುತ್ತದೆ. ಎಲ್ಲ ಸಂಶೋಧನೆಗಳು ಪ್ರಯೋಗಾಲಯದಿಂದ ನೇರವಾಗಿ ರೈತರ ತೋಟಗಳಿಗೆ ತಲುಪಬೇಕು. ತಜ್ಞರು, ಸಂಶೋಧಕರ ಲಾಭವನ್ನು ರೈತರು ಪಡೆದುಕೊಳ್ಳಬೇಕು. ಅಂದಾಗ ಕೃಷಿ ವಿಶ್ವವಿದ್ಯಾಲಯ, ಕೃಷಿ ಮಹಾವಿದ್ಯಾಲಯಗಳ ಸೇವೆ ಸಾರ್ಥಕವಾಗುತ್ತದೆ ಎಂದು ಉಪರಾಷ್ಟ್ರಪತಿಗಳು ಹೇಳಿದರು.

    ಧಾರವಾಡ ಕೃಷಿ ವಿಶ್ವವಿದ್ಯಾಲಯ, ಮಾದರಿ ವಿಶ್ವವಿದ್ಯಾಲಯವಾಗಿದೆ. ರಾಷ್ಟ್ರ, ಅಂತರಾಷ್ಟ್ರೀಯ ಮಟ್ಟದಲ್ಲಿ ಕೀರ್ತಿಗಳಿಸಿದೆ. ಇಲ್ಲಿನ ಸಂಶೋಧನೆಗಳಿಗೆ ಅಂತರಾಷ್ಟ್ರೀಯ ಮಾನ್ಯತೆ ಸಿಕ್ಕಿದೆ. ಇದು ನಮಗೆಲ್ಲ ಹೆಮ್ಮೆ ಮತ್ತು ಗೌರವ ತಂದಿದೆ ಎಂದು ಅವರು ಹೇಳಿದರು.

    ಘನ ಉಪಸ್ಥಿತರಿದ್ದ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಅವರು ಮಾತನಾಡಿ, ಭಾರತೀಯರಿಗೆ ಕೃಷಿ ಮೂಲ ಉದ್ಯೋಗವಾಗಿದೆ. ದೇಶದ ಅಭಿವೃದ್ಧಿಗೆ ಇದು ಪೂರಕವಾಗಿದೆ. ಪ್ರತಿ ಕ್ಷೇತ್ರದಲ್ಲಿ ಸ್ಪರ್ಧೆ ಇರುವಂತೆ ಕೃಷಿಯಲ್ಲಿಯೂ ಸ್ಪರ್ಧೆ ಏರ್ಪಟ್ಟಿದೆ ಎಂದು ಅವರು ಹೇಳಿದರು.

    ಕೃಷಿಯಲ್ಲಿ ಆಧುನಿಕ ಪದ್ಧತಿಗಳನ್ನು ಅಳವಡಿಸಿ, ಆದಾಯ ಹೆಚ್ಚಿಸಲು ಕ್ರಮವಹಿಸಬೇಕು. ರೈತರಿಗೆ ಹೆಚ್ಚು ಲಾಭ ಮತ್ತು ಉಪಯುಕ್ತವಾಗುವ ಕೃಷಿ ಸಂಶೋಧನೆಗಳನ್ನು ತಜ್ಞರು, ವಿಜ್ಞಾನಿಗಳು, ವಿದ್ಯಾರ್ಥಿಗಳು ಮಾಡಬೇಕೆಂದು ಅವರು ತಿಳಿಸಿದರು.

    ಕೇಂದ್ರ ಗ್ರಾಹಕರ ವ್ಯವಹಾರಗಳ, ಆಹಾರ ಮತ್ತು ಸಾರ್ವಜನಿಕ ವಿತರಣೆ ಮತ್ತು ಹೊಸ ಹಾಗೂ ನವೀಕರಿಸಬಹುದಾದ ಇಂಧನ ಸಚಿವರಾದ ಪ್ರಲ್ಹಾದ ಜೋಶಿ ಅವರು ಮಾತನಾಡಿ, ಧಾರವಾಡ ಕೃಷಿ ವಿಶ್ವವಿದ್ಯಾಲಯ ಜನಸಾಮಾನ್ಯರ ಅದರಲ್ಲೂ ಸಾಮಾನ್ಯ ರೈತರ ವಿಶ್ವವಿದ್ಯಾಲಯವಾಗಿದೆ. ಕೃಷಿ ಕ್ಷೇತ್ರಕ್ಕೆ ಮಹತ್ವದ ಕೊಡುಗೆಗಳನ್ನು ನೀಡಿದೆ. ಕೃಷಿ ಮಹಾವಿದ್ಯಾಲಯಕ್ಕೆ 75 ವರ್ಷ ಪೂರ್ಣಗೊಂಡು, ಅಮೃತ ಮಹೋತ್ಸವ ಆಚರಿಸುತ್ತಿರುವುದು ಸಂತಸ ತಂದಿದೆ ಎಂದರು.

    ಧಾರವಾಡ ಕೃಷಿ ವಿಶ್ವವಿದ್ಯಾಲಯ ಆವರಣದಲ್ಲಿ ಕೇಂದ್ರ ಸರಕಾರದಿಂದ ಹವಾಮಾನ ಸಂಶೋಧನ ಕೇಂದ್ರ ಸ್ಥಾಪಿಸಲು ಅನುಮತಿ ದೊರೆತಿದ್ದು, ಇದು ಸುಮಾರು 175 ಕಿ.ಮೀ. ವ್ಯಾಪ್ತಿಯಲ್ಲಿ ಇರುವ ನಿಖರವಾದ ಹವಾಮಾನ ವರದಿಯನ್ನು ನೀಡುತ್ತದೆ. ರೈತರಿಗೆ ಇದರಿಂದ ತುಂಬಾ ಅನುಕೂಲವಾಗುತ್ತದೆ ಎಂದು ತಿಳಿಸಿದರು.

    ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರಕಾರ ಕೃಷಿ ವಲಯಕ್ಕೆ ಆದ್ಯತೆ ನೀಡಿದ್ದು, ಪ್ರಸಕ್ತ ವರ್ಷ ಕೇಂದ್ರ ಬಜೆಟ್‍ದಲ್ಲಿ 127 ಸಾವಿರ ಕೋಟಿ ರೂ.ಗಳ ಹಣ ಪೂರೈಸಿದೆ. ಸಕ್ಕರೆ ಉತ್ಪಾದನೆ, ತೈಲ ಉತ್ಪಾದನೆ ಮತ್ತು ನವೀಕರಿಸಬಹುದಾದ ಇಂಧನಗಳ ಹೆಚ್ಚಳಕ್ಕೆ ಅಗತ್ಯವಿರುವ ಕಚ್ಚಾವಸ್ತುಗಳ ಉತ್ಪಾದನೆ, ಸಂಸ್ಕರಣೆ ಪೂರಕವಾದ ಯೋಜನೆ ಕಾರ್ಯಕ್ರಮಗಳನ್ನು ಹೆಚ್ಚು ಹೆಚ್ಚು ಜಾರಿಗೊಳಿಸಲಾಗಿದೆ ಎಂದು ಅವರು ಹೇಳಿದರು.

    ರಾಜ್ಯ ಕಾರ್ಮಿಕ ಇಲಾಖೆ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಎಸ್. ಲಾಡ್, ಡಾ. ಸುದೇಶ ಜಗದೀಪ ಧನಕರ್ ಅವರು ವೇದಿಕೆಯಲ್ಲಿದ್ದರು.

    ಧಾರವಾಡ ಕೃಷಿ ವಿಶ್ವವಿದ್ಯಾಲಯದ ಕುಲಪತಿ ಡಾ.ಪಿ. ಎಲ್.ಪಾಟೀಲ ಅವರು ಸ್ವಾಗತಿಸಿದರು. ಕೃಷಿ ವಿಶ್ವವಿದ್ಯಾಲಯ ವ್ಯವಸ್ಥಾಪನಾ ಮಂಡಳಿ ಸದಸ್ಯರಾದ ಬಸವರಾಜ ಕುಂದಗೋಳಮಠ, ರವಿಕುಮಾರ ಮಾಳಿಗೇರ, ಪಾರ್ವತಿ ಕುರ್ಲೆ, ಶ್ರೀನಿವಾಸ ಕೋಟ್ಯಾನ್ ಸೇರಿದಂತೆ ಇತರ ಸದಸ್ಯರು, ಜಿಲ್ಲಾಧಿಕಾರಿ ದಿವ್ಯ ಪ್ರಭು, ಮಹಾನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ, ಪೊಲೀಸ್ ವರಿಷ್ಠಾಧಿಕಾರಿ ಡಾ. ಗೋಪಾಲ ಬ್ಯಾಕೋಡ ಸೇರಿದಂತೆ ಇತರ ಹಿರಿಯ ಅಧಿಕಾರಿಗಳು, ಕೃಷಿ ವಿವಿ ವಿಶ್ರಾಂತ ಕುಲಪತಿಗಳು, ಪ್ರಾಧ್ಯಾಪಕರು, ಅಧಿಕಾರಿಗಳು, ಹಳೆಯ ವಿದ್ಯಾರ್ಥಿಗಳು ಸಮಾರಂಭದಲ್ಲಿ ಅಪಾರ ಸಂಖ್ಯೆಯಲ್ಲಿ ಭಾಗವಹಿಸಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

    admin
    • Website

    Related Posts

    ದೇವೇಗೌಡರ ಪತ್ನಿ ಚೆನ್ನಮ್ಮ ನಿಧನಕ್ಕೆ ವಿಧಾನಸಭೆಯಲ್ಲಿ ಸಂತಾಪ; ಸರ್ಕಾರಿ ಗೌರವ ನಿರ್ಧಾರ ಸಮರ್ಥಿಸಿಕೊಂಡ ಸಿಎಂ ಡಿ.ಕೆ. ಶಿವಕುಮಾರ್

    August 13, 2026

    ವಿಐಪಿ ಸೆಲ್ ನಿಂದ ಸಾಮಾನ್ಯ ಕೈದಿಗಳ ಸೆಲ್ ಗೆ ಪ್ರಜ್ವಲ್ ರೇವಣ್ಣ ಶಿಫ್ಟ್: ಮೊಬೈಲ್ ನಲ್ಲಿ ಅಶ್ಲೀಲ ವಿಡಿಯೋಗಳು ಪತ್ತೆ!

    August 13, 2026

    ಬೀದರ್: ₹83 ಲಕ್ಷ ಶೂಟ್ಔಟ್ ದರೋಡೆ ಪ್ರಕರಣ ಭೇದಿಸಿದ ಪೊಲೀಸರು; ಬಿಹಾರದಲ್ಲಿ ಇಬ್ಬರು ಆರೋಪಿಗಳ ಬಂಧನ!

    August 13, 2026

    Comments are closed.

    Our Picks

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026

    ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ

    August 9, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಮಧುಗಿರಿ

    ಬರಗಾಲದ ಆತಂಕ ಬೇಡ, ಕಾಂಗ್ರೆಸ್ ಸರ್ಕಾರ, ನಾವೂ ಇದ್ದೇವೆ: ಕೆ.ಎನ್. ರಾಜಣ್ಣ

    August 13, 2026

    ಮಧುಗಿರಿ: ತಾಲೂಕಿನ ರೈತರು, ಕೂಲಿ ಕಾರ್ಮಿಕರು ಬರಗಾಲ ಬರುತ್ತದೆ ಎಂದು ಭಯ ಪಡುವ ಅಗತ್ಯವಿಲ್ಲ, ನಮ್ಮ ಕಾಂಗ್ರೆಸ್ ಸರ್ಕಾರ ಹಾಗೂ…

    ತುರುವೇಕೆರೆ: ಜಿ.ಪರಮೇಶ್ವರ್ ಅವರಿಂದ ಬರ ಅಧ್ಯಯನದ ಆತುರದ ವೀಕ್ಷಣೆ: ರೈತರಿಗೆ ನಿರಾಸೆ

    August 13, 2026

    ಆ.29: ಪಾವಗಡದಲ್ಲಿ ಉದ್ಯೋಗ ಮೇಳ

    August 13, 2026

    ದೇವೇಗೌಡರ ಪತ್ನಿ ಚೆನ್ನಮ್ಮ ನಿಧನಕ್ಕೆ ವಿಧಾನಸಭೆಯಲ್ಲಿ ಸಂತಾಪ; ಸರ್ಕಾರಿ ಗೌರವ ನಿರ್ಧಾರ ಸಮರ್ಥಿಸಿಕೊಂಡ ಸಿಎಂ ಡಿ.ಕೆ. ಶಿವಕುಮಾರ್

    August 13, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.