ಬೆಳಗಾವಿ: ಸತೀಶ್ ಜಾರಕಿಹೊಳಿಗೆ ನೋಟಿಸ್ ನೀಡಲಾಗಿದೆ ಎನ್ನುವುದು ವದಂತಿ, ಅವರಿಗೆ ನೋಟಿಸ್ ನೀಡಲು ಯಾವುದೇ ಕಾರಣಗಳಿಲ್ಲ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಸ್ಪಷ್ಟಪಡಿಸಿದ್ದಾರೆ.
ಬೆಳಗಾವಿ ಸಾಂಬ್ರಾ ವಿಮಾನನಿಲ್ದಾಣದಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಕಾಂಗ್ರೆಸ್ ನೋಟಿಸ್ ನೀಡಿದೆ ಎಂಬ ವದಂತಿಗಳನ್ನೆಲ್ಲ ಯಾರೂ ಹಬ್ಬಿಸುತ್ತಿದ್ದಾರೆ ನನಗೆ ಗೊತ್ತಿಲ್ಲ. ಯಾವ ಸಚಿವರಿಗೂ, ಯಾವ ವ್ಯಕ್ತಿಗೂ ನೋಟಿಸ್ ನೀಡಲು ಯಾವುದೇ ಕಾರಣವಿಲ್ಲ ಎಂದು ಸುರ್ಜೇವಾಲ ಅವರು ಸ್ಪಷ್ಟಪಡಿಸಿದರು
ಬಿಜೆಪಿ ಪ್ರಾಯೋಜಿತ ಆಧಾರ ರಹಿತ ಮಾತುಗಳ ಮೇಲೆ ವಿಶ್ವಾಸ ಇಡಬೇಡಿ, ಯಾವ ಸಚಿವರಿಗೂ ನೋಟಿಸ್ ನೀಡಲು ಕಾರಣವಿಲ್ಲ. ಇವೆಲ್ಲ ಕೇವಲ ವದಂತಿ ಎಂದು ಸಷ್ಪಪಡಿಸಿದರು.
ಕೆಪಿಸಿಸಿ ಅಧ್ಯಕ್ಷ ಸ್ಥಾನ ಬದಲಾವಣೆ ಚರ್ಚೆ ವಿಚಾರಕ್ಕೆ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಆಗುತ್ತಿದ್ದರೆ, ಅವರು ಇಲ್ಲಿ ಯಾಕೆ ಬರುತ್ತಿದ್ದರು ಎಂದು ಮರುಪ್ರಶ್ನಿಸುವ ಮೂಲಕ ಅದಕ್ಕೂ ಸುರ್ಜೇವಾಲ ತೆರೆ ಎಳೆದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx