ಬೆಳಗಾವಿ: ನಮಗೆ ಯಾರೂ ಮಾತನಾಡಬೇಡಿ ಅಂತ ಹೇಳಿಲ್ಲ, ಪಕ್ಷಕ್ಕೆ ಮುಜುಗರ ಆಗಬಾರದು ಎಂಬ ಅರಿವು ನಮಗೂ ಇದೆ ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.
ಬೆಳಗಾವಿ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಗುರುವಾರ ರಾತ್ರಿ ಮಾಧ್ಯಮಗಳ ಜೊತೆಗೆ ಅವರು ಮಾತನಾಡಿ, ಎಲ್ಲೂ ಸಹ ನಾವು ಅಧ್ಯಕ್ಷರ ಬದಲಾವಣೆ ಬಗ್ಗೆ ಪ್ರಸ್ತಾಪ ಮಾಡಿಲ್ಲ. ನೈಜ ಸ್ಥಿತಿ ಹೇಳಲು ಹೋದಾಗ ಅದು ಬೇರೆ ಇರುತ್ತದೆ. ಅದನ್ನೆ ಬಿಂಬಿಸಲು ಹೋದರೆ ನಮಗೆ ಮತ್ತು ಪಕ್ಷಕ್ಕೂ ಕಷ್ಟ ಆಗುತ್ತದೆ. ಅಧ್ಯಕ್ಷರ ಬದಲಾವಣೆ ಮಾಡುವ ಅಧಿಕಾರ ನಮಗಿಲ್ಲ ಎಂದು ಸ್ಪಷ್ಟಪಡಿಸಿದರು.
ನಾನು ಗೃಹ ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಅಧ್ಯಕ್ಷನಾಗಿ ಮುಂದುವರಿದಿದ್ದೆ ಎಂಬ ಡಾ.ಜಿ.ಪರಮೇಶ್ವರ್ ಹೇಳಿಕೆ ಬಗ್ಗೆ, ಆ ರೀತಿ ನಾವು ಏನೂ ಹೇಳಿಯೇ ಇಲ್ಲ. ನಾವೇನಿದ್ದರೂ ಹೈಕಮಾಂಡ್ ಅಂತಾನೇ ಹೇಳಿದ್ದೇವೆ. ಆ ವಿಚಾರ ನಮ್ಮ ವ್ಯಾಪ್ತಿಗೆ ಬರುವುದಿಲ್ಲ. ನಾವು ಏನೋ ಹೇಳುವುದರಿಂದ ಪಕ್ಷಕ್ಕೆ ಮುಜುಗರ ಆಗಬಾರದು ಅಂತಾ ಸ್ಪಷ್ಟೀಕರಣ ಕೊಟ್ಟಿದ್ದೇವೆ ಎಂದು ಪುನರುಚ್ಚರಿಸಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx