nammatumakuru

    Subscribe to Updates

    Get the latest creative news from FooBar about art, design and business.

    What's Hot

    ನಿಮ್ಮ ಮೊಬೈಲ್ ರೀಚಾರ್ಜ್‌ನಿಂದ ಟೆಲಿಕಾಂ ಕಂಪನಿಗಳಿಗೆ ಎಷ್ಟು ಲಾಭ?

    October 14, 2026

    ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಹಿಂದೆ ಯಾರು? ಕೆ.ಎನ್.ರಾಜಣ್ಣ ಹೇಳಿದ್ದೇನು?

    October 14, 2026

    “ದಮ್ಮು, ತಾಕತ್ತು ಇದ್ದರೆ ಹೋರಾಟಕ್ಕೆ ಬನ್ನಿ”; ನಟ ಸುದೀಪ್‌ ಗೆ ಉಗ್ರಪ್ಪ ಸವಾಲು?

    October 14, 2026
    Facebook Twitter Instagram
    ಟ್ರೆಂಡಿಂಗ್
    • ನಿಮ್ಮ ಮೊಬೈಲ್ ರೀಚಾರ್ಜ್‌ನಿಂದ ಟೆಲಿಕಾಂ ಕಂಪನಿಗಳಿಗೆ ಎಷ್ಟು ಲಾಭ?
    • ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಹಿಂದೆ ಯಾರು? ಕೆ.ಎನ್.ರಾಜಣ್ಣ ಹೇಳಿದ್ದೇನು?
    • “ದಮ್ಮು, ತಾಕತ್ತು ಇದ್ದರೆ ಹೋರಾಟಕ್ಕೆ ಬನ್ನಿ”; ನಟ ಸುದೀಪ್‌ ಗೆ ಉಗ್ರಪ್ಪ ಸವಾಲು?
    • ಸಿಹಿ ತಿನ್ನದಿದ್ದರೂ ಮಧುಮೇಹ ಬರಬಹುದು! ಈ ಲಕ್ಷಣಗಳನ್ನು ನಿರ್ಲಕ್ಷಿಸಬೇಡಿ
    • ತುಮಕೂರು ದಸರಾ ಉತ್ಸವ-2026: ಪಂಜಿನ ಕವಾಯತು ತಾಲೀಮು ವೀಕ್ಷಣೆ
    • ತುಮಕೂರು ದಸರಾ ಉತ್ಸವ–2026ರ ಅಂಗವಾಗಿ ಮಹಿಳಾ ಕೌಶಲ್ಯ ಮೇಳ ಉದ್ಘಾಟನೆ
    • ದೆಹಲಿಯ ಬೀದಿಯಲ್ಲಿ ಕಾರ್ಯಕರ್ತರೊಂದಿಗೆ ಸರಳತೆಯ ಸಹಭೋಜನ: ಜನರ ನಡುವಿನ ನಾಯಕ ಬಿ.ಕೆ. ಹರಿಪ್ರಸಾದ್
    • ಅಕ್ಟೋಬರ್ 15ರಂದು ಸಚಿವ ಈಶ್ವರ್ ಖಂಡ್ರೆ ಅವರಿಗೆ ಮಾದಿಗ ಸಮಾಜದಿಂದ ಅಭಿನಂದನಾ ಸಮಾರಂಭ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸಕಾರಾತ್ಮಕ ಚಿಂತನೆ ಬೆಳೆಸಿಕೊಳ್ಳಿ: ವಿದ್ಯಾರ್ಥಿಗಳಿಗೆ ನಟ ಅನಿರುದ್ಧ್ ಕರೆ
    ರಾಜ್ಯ ಸುದ್ದಿ January 17, 2025

    ಸಕಾರಾತ್ಮಕ ಚಿಂತನೆ ಬೆಳೆಸಿಕೊಳ್ಳಿ: ವಿದ್ಯಾರ್ಥಿಗಳಿಗೆ ನಟ ಅನಿರುದ್ಧ್ ಕರೆ

    By adminJanuary 17, 2025No Comments2 Mins Read
    tumakuru vv

    ತುಮಕೂರು:  ತುಮಕೂರು ವಿಶ್ವವಿದ್ಯಾನಿಲಯದಲ್ಲಿ ಶುಕ್ರವಾರ ಕಲ್ಪತರು ಉತ್ಸವದ ಸಂಭ್ರಮ; ಹಬ್ಬದ ವಾತಾವರಣ ಮನೆಮಾಡಿತ್ತು. ಸಿನಿಮಾ ತಾರೆಯರಾದ ಅನಿರುದ್ಧ ಜಟ್ಕರ್, ಅನುಷಾ ರಾಯ್ ಹಾಗೂ ದೀಪಿಕಾ ದಾಸ್‍ ಉತ್ಸವದ ಮೆರುಗನ್ನು ಹೆಚ್ಚಿಸಿದರು.

    ಕಲಾತಂಡಗಳ ಮೆರವಣಿಗೆಯಲ್ಲಿ ವಿವಿಧ ವಿಭಾಗಗಳ ವಿದ್ಯಾರ್ಥಿಗಳು ಭಾಗವಹಿಸಿ ಸಾಂಪ್ರದಾಯಿಕ ಉಡುಗೆ–ತೊಡುಗೆಗಳೊಂದಿಗೆ ವಿವಿಧ ಕಲಾಪ್ರಕಾರಗಳನ್ನು ಪ್ರತಿನಿಧಿಸಿದರು. ವೀರಗಾಸೆ, ಯಕ್ಷಗಾನ, ಕೋಲಾಟ, ಡೊಳ್ಳು ಕುಣಿತ ಹೀಗೆ 20ಕ್ಕೂ ಹೆಚ್ಚು ವಿದ್ಯಾರ್ಥಿ ಕಲಾತಂಡಗಳು ಭಾಗವಹಿಸಿದವು. ಮೆರವಣಿಗೆ ತುಮಕೂರು ವಿಶ್ವವಿದ್ಯಾನಿಲಯದಿಂದ ಆರಂಭವಾಗಿ ಶಿವಕುಮಾರ ಸ್ವಾಮೀಜಿ ವೃತದ ಮೂಲಕ ಸಾಗಿತು.

    ಚಿತ್ರನಟ ಅನಿರುದ್ಧ ಜಟ್ಕರ್ ಮಾತನಾಡಿ, ನಮ್ಮ ಚಿಂತನೆಗಳು ಯಾವಾಗಲೂ ಸಕಾರಾತ್ಮಕವಾಗಿರಬೇಕು. ವಿದ್ಯೆ ಎಂಬುದು ಶಕ್ತಿಯುತವಾದ ಆಯುಧ. ವಿದ್ಯೆಯನ್ನು ಸಕಾರಾತ್ಮಕವಾದ ಕಾರ್ಯಗಳಿಗೆ ಬಳಸಿಕೊಂಡರೆ ಸಮಾಜದಲ್ಲಿರುವ ಕೊಳಕನ್ನು ತೊಳೆಯಬಹುದು ಎಂದು ವಿದ್ಯಾರ್ಥಿಗಳಿಗೆ ಕಿವಿ ಮಾತನ್ನು ಹೇಳಿದರು.

    ಶಿಕ್ಷಣ ಕೇವಲ ಉದ್ಯೋಗಕ್ಕೆ ಸೀಮಿತವಾಗಬಾರದು. ಸಾಮಾಜಿಕ ಕಾರ್ಯಗಳಲ್ಲಿ ವಿದ್ಯಾರ್ಥಿಗಳು ತೊಡಗಿಸಿಕೊಳ್ಳಬೇಕು ಎಂದರು.

    ನಟಿ ಅನುಷಾ ರಾಯ್ ಮಾತನಾಡಿ, ಯಾರೂ ಕದಿಯಲು ಸಾಧ್ಯವಾಗದ ಎರಡು ವಿಷಯಗಳೆಂದರೆ ವಿದ್ಯೆ ಮತ್ತು ಕಲೆ. ಶಿಕ್ಷಣ ಬದುಕಿಗೆ ಬಹಳ ಮುಖ್ಯವಾದ ಅಂಶ. ವಿದ್ಯಾರ್ಥಿ ಬದುಕು ಜೀವನದ ಒಂದು ದೊಡ್ಡಘಟ್ಟ. ಈ ಹಂತದಲ್ಲಿ ನಿಮ್ಮ ಪ್ರತಿಭೆಗಳನ್ನು ನೀವೇ ಗುರುತಿಸಿಕೊಳ್ಳಬೇಕು ಎಂದರು.

    ಮತ್ತೋರ್ವ ನಟಿ ದೀಪಿಕಾ ದಾಸ್ ಮಾತನಾಡಿ,  ಶಿಕ್ಷಣದ ಜೊತೆಜೊತೆಯಲ್ಲಿ ವಿದ್ಯಾರ್ಥಿಗಳು ಸ್ಪರ್ಧೆಗಳಲ್ಲಿ ಭಾಗವಹಿಸಬೇಕು. ಸಾಂಸ್ಕೃತಿಕ ನಗರ ಎಂದೇ ಪ್ರಸಿದ್ಧವಾದ ಈ ನಾಡಿನಲ್ಲಿ ಹುಟ್ಟಿ ಬೆಳೆದಿರುವಂತಹ ಪ್ರತಿಭೆಗಳು ಬಹಳ ದೊಡ್ಡ ಮಟ್ಟದಲ್ಲಿ ಹೆಸರು ಮಾಡಿದ್ದಾರೆ ಎಂದರು.

    ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ತುಮಕೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ.ಎಂ.ವೆಂಕಟೇಶ್ವರಲು, ಶಿಕ್ಷಣವೆಂಬುದು ಕೇವಲ ಅಕ್ಷರ ಕಲಿಕೆಯಲ್ಲಿ ಮಾತ್ರ ಇರುವುದಿಲ್ಲ. ವಿದ್ಯಾರ್ಥಿಗಳಲ್ಲಿರುವ ಪ್ರತಿಭೆಯನ್ನು ಗುರುತಿಸಿಕೊಳ್ಳಲು ವೇದಿಕೆ ಸೃಷ್ಟಿ ಮಾಡುವುದು ಕೂಡ ಶಿಕ್ಷಣ ಸಂಸ್ಥೆಗಳ ಕರ್ತವ್ಯ ಎಂದರು.

    ಕಾರ್ಯಕ್ರಮದಲ್ಲಿ ತುಮಕೂರು ವಿಶ್ವವಿದ್ಯಾನಿಲಯದ ಕುಲಸಚಿವೆ ನಾಹಿದಾ ಜಮ್‍ ಜಮ್, ಪರೀಕ್ಷಾಂಗ ಕುಲಸಚಿವ ಪ್ರೊ.ಪ್ರಸನ್ನಕುಮಾರ್ ಕೆ. ಉಪಸ್ಥಿತರಿದ್ದರು.

    ಸಾಂಸ್ಕೃತಿಕ ಚಟುವಟಿಕೆಗಳ ಘಟಕದ ಸಂಯೋಜಕ ಡಾ. ದೇವರಾಜು ಎಸ್. ಸ್ವಾಗತಿಸಿದರು.  ವಿದ್ಯಾರ್ಥಿಕ್ಷೇಮಪಾಲನಾ ಘಟಕದ ನಿರ್ದೇಶಕ ಪ್ರೊ. ಬಸವರಾಜು ಜಿ. ವಂದಿಸಿದರು. ಸಹ ಪ್ರಾಧ್ಯಾಪಕ ಡಾ.ಸಿಬಂತಿ ಪದ್ಮನಾಭ ಕೆ. ವಿ. ನಿರೂಪಿಸಿದರು. ‘ಕೋರ’ ಹಾಗೂ ‘ಹ್ಯಾಶ್‍ಟ್ಯಾಗ್ ಪಾರುಪಾರ್ವತಿ’ ಚಿತ್ರತಂಡಗಳು ಭಾಗವಹಿಸಿದವು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

    admin
    • Website

    Related Posts

    ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಹಿಂದೆ ಯಾರು? ಕೆ.ಎನ್.ರಾಜಣ್ಣ ಹೇಳಿದ್ದೇನು?

    October 14, 2026

    “ದಮ್ಮು, ತಾಕತ್ತು ಇದ್ದರೆ ಹೋರಾಟಕ್ಕೆ ಬನ್ನಿ”; ನಟ ಸುದೀಪ್‌ ಗೆ ಉಗ್ರಪ್ಪ ಸವಾಲು?

    October 14, 2026

     ರಾಜ್ಯದಲ್ಲಿ ಮತ್ತೆ ಮಳೆ ಅಬ್ಬರ?  ಹವಾಮಾನ ವರದಿ ಏನು ಹೇಳುತ್ತದೆ; ನಿಮ್ಮ ಜಿಲ್ಲೆಯಲ್ಲಿ ಮಳೆಯಾಗುತ್ತಾ?

    October 13, 2026

    Comments are closed.

    Our Picks

    ನಿಮ್ಮ ಮೊಬೈಲ್ ರೀಚಾರ್ಜ್‌ನಿಂದ ಟೆಲಿಕಾಂ ಕಂಪನಿಗಳಿಗೆ ಎಷ್ಟು ಲಾಭ?

    October 14, 2026

    ದೆಹಲಿಯ ಬೀದಿಯಲ್ಲಿ ಕಾರ್ಯಕರ್ತರೊಂದಿಗೆ ಸರಳತೆಯ ಸಹಭೋಜನ: ಜನರ ನಡುವಿನ ನಾಯಕ ಬಿ.ಕೆ. ಹರಿಪ್ರಸಾದ್

    October 13, 2026

    ‘We’re Sorry’: ಸಿಜೆಪಿ ನಾಯಕ ಅಭಿಜಿತ್ ದೀಪ್ಕೆಗೆ ಅಜ್ಜಿಯ ಸಾವಿನ ಸುದ್ದಿ ಮುಟ್ಟಿಸಿದ ಪೊಲೀಸ್; ವೈರಲ್ ವೀಡಿಯೊ

    October 12, 2026

    ನಾನಾ ಪಾಟೇಕರ್ ಸಾವಿಗೆ ನಿಜ ಕಾರಣ ಏನು? ಮರಣೋತ್ತರ ಪರೀಕ್ಷೆ ವರದಿ ಬಯಲು!

    October 11, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಷ್ಟ್ರೀಯ ಸುದ್ದಿ

    ನಿಮ್ಮ ಮೊಬೈಲ್ ರೀಚಾರ್ಜ್‌ನಿಂದ ಟೆಲಿಕಾಂ ಕಂಪನಿಗಳಿಗೆ ಎಷ್ಟು ಲಾಭ?

    October 14, 2026

    ನವದೆಹಲಿ: ಭಾರತದಲ್ಲಿ ಇಂಟರ್ನೆಟ್ ಬಳಕೆದಾರರ ಸಂಖ್ಯೆ ಗಣನೀಯವಾಗಿ ಏರಿಕೆಯಾಗಿದ್ದು, 2026ರ ಜೂನ್ ಅಂತ್ಯದ ವೇಳೆಗೆ ಒಟ್ಟು ಇಂಟರ್ನೆಟ್ ಚಂದಾದಾರರ ಸಂಖ್ಯೆ…

    ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಹಿಂದೆ ಯಾರು? ಕೆ.ಎನ್.ರಾಜಣ್ಣ ಹೇಳಿದ್ದೇನು?

    October 14, 2026

    “ದಮ್ಮು, ತಾಕತ್ತು ಇದ್ದರೆ ಹೋರಾಟಕ್ಕೆ ಬನ್ನಿ”; ನಟ ಸುದೀಪ್‌ ಗೆ ಉಗ್ರಪ್ಪ ಸವಾಲು?

    October 14, 2026

    ಸಿಹಿ ತಿನ್ನದಿದ್ದರೂ ಮಧುಮೇಹ ಬರಬಹುದು! ಈ ಲಕ್ಷಣಗಳನ್ನು ನಿರ್ಲಕ್ಷಿಸಬೇಡಿ

    October 13, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.