ಪಾವಗಡ: ಪಟ್ಟಣದ ಶ್ರೀಮತಿ ಮತ್ತು ಶ್ರೀ ವೈ ಈ ರಂಗಯ್ಯ ಶೆಟ್ಟಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರಥಮ ಬಿಕಾಂ ನಲ್ಲಿ ಓದುತ್ತಿರುವ ಮಧುಗಿರಿ ತಾಲೂಕಿನ ಮಿಡಿಗೇಶಿ ಮೂಲದ ಮೈಥಿಲಿ ಎಂಬ ವಿದ್ಯಾರ್ಥಿನಿ ಶನಿವಾರ ತರಗತಿ ಮುಗಿಸಿ ಪಟ್ಟಣದ ಕಡೆ ಬರುವಾಗ ಚಳ್ಳಕೆರೆ ಕ್ರಾಸ್ ಬಳಿ ಕುಸಿದು ಬಿದ್ದಿದ್ದು ಆಕೆಯನ್ನು ಸಾರ್ವಜನಿಕ ಆಸ್ಪತ್ರೆಗೆ ಕರೆದುಕೊಂಡು ಬರುವ ಮಾರ್ಗ ಮಧ್ಯೆ ಸಾವನ್ನಪ್ಪಿದ್ದಾರೆ
ಇನ್ನು ಸಾರ್ವಜನಿಕ ಆಸ್ಪತ್ರೆಯ ಬಳಿ ವಿದ್ಯಾರ್ಥಿನಿಯ ಸ್ನೇಹಿತರ ಮತ್ತು ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು, ನಂತರ ವೈದ್ಯರು ಮರಣೋತ್ತರ ಪರೀಕ್ಷೆಯನ್ನು ನಡೆಸಿದ್ದು ಘಟನೆ ಪಾವಗಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಜರುಗಿದೆ.
ಮೃತ ವಿದ್ಯಾರ್ಥಿಯ ಆತ್ಮಕ್ಕೆ ಶಾಂತಿ ಸಿಗಲೆಂದು ಕಾಲೇಜಿನ ಪ್ರಾಂಶುಪಾಲರು, ಪ್ರಾಧ್ಯಾಪಕರುಗಳು ಸೇರಿದಂತೆ ವಿದ್ಯಾರ್ಥಿ ಬಳಗ ಸಂತಾಪ ಸೂಚಿಸಿದೆ.
ವರದಿ: ನಂದೀಶ್ ನಾಯ್ಕ, ಪಾವಗಡ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx