ಬೀದರ್: ಔರಾದ (ಬಾ) ಪೊಲೀಸ್ ಠಾಣೆಯ ಟ್ರ್ಯಾಕ್ಟರ್ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಕಳವಾದ 4 ಲಕ್ಷ ರೂ.ಗೂ ಅಧಿಕ ಮೌಲ್ಯದ ಟ್ರ್ಯಾಕ್ಟರ್ ವಶಕ್ಕೆ ಪಡೆದು ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ.
ಬೀದರ್ ಪೊಲೀಸ್ ಅಧೀಕ್ಷಕರಾದ ಪ್ರದೀಪ್ ಗುಂಟಿ ಅವರ ನಿರ್ದೇಶನ ಮತ್ತು ಮಾರ್ಗದರ್ಶನದಂತೆ, ಡಿವೈಎಸ್ ಪಿ ಶಿವಾನಂದ ಪವಾಡಶೆಟ್ಟಿ ಪೊಲೀಸ್ ಉಪಾಧೀಕ್ಷಕರು ಭಾಲ್ಕಿ ರಘುವೀರಸಿಂಗ ಠಾಕೂರ, ಸಿಪಿಐ ಔರಾದ ವೃತ್ತ ನೇತೃತ್ವದಲ್ಲಿ ಔರಾದ(ಬಿ) ಪೊಲೀಸ್ ಠಾಣೆಯ ಪಿ.ಎಸ್.ಐ ರೇಣುಕಾ, ಪಿಎಸ್ ಐ ವಸಿಮ್ ಪಟೇಲ್ ರವರು ತಮ್ಮ ಸಿಬ್ಬಂದಿ ಉತ್ತಮ, ಶಯ ಸಂಜುಕುಮಾರ, ಅರುಣಕುಮಾರ, ಜ್ಞಾನೇಶ್ವರ ರವರನ್ನೊಳಗೊಂಡ ತಂಡವು ಕಳವಾದ 4,80,500 ರೂ. ಮೌಲ್ಯದ ಟ್ರ್ಯಾಕ್ಟರ್ ಹಾಗೂ ಇಬ್ಬರು ಆರೋಪಿಗಳನ್ನು ದಸ್ತಗಿರಿ ಮಾಡಿದೆ.
ಕಳ್ಳತನ ಪ್ರಕರಣವನ್ನು ಚಾಕಚಕ್ಯತೆಯಿಂದ ಭೇದಿಸಿದ ಅಧಿಕಾರಿ ಮತ್ತು ಸಿಬ್ಬಂದಿಯವರ ಕಾರ್ಯವನ್ನು ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ ಶ್ಲಾಘಿಸಿದ್ದಾರೆ.
ವರದಿ: ಅರವಿಂದ ಮಲ್ಲಿಗೆ, ಬೀದರ್
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx