ಚಿತ್ರದುರ್ಗ : ಗಣರಾಜ್ಯೋತ್ಸವದ ಸಂದರ್ಭದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅವರಿಗೆ ಅವಮಾನ ಮಾಡಿದ ನ್ಯಾಯಾಧೀಶ ಮಲ್ಲಿಕಾರ್ಜುನ ಗೌಡ ಅವರ ವಿರುದ್ಧ ಸೂಕ್ತ ಕ್ರಮಕೈಗೊಳ್ಳುವಂತೆ ಒತ್ತಾಯಿಸಿ ಹಿರಿಯೂರು ತಾಲೂಕಿನ ಅಂಬೇಡ್ಕರ್ ವಿದ್ಯಾರ್ಥಿ ಪರಿಷತ್ ಅಡಿಯಲ್ಲಿ ವಿವಿಧ ಸಂಘಟನೆಗಳು ಪ್ರತಿಭಟನೆ ನಡೆಸಿದವು.
ಹಿರಿಯೂರಿನ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಿ, ಅಂಬೇಡ್ಕರ್ ಪ್ರತಿಮೆ(ವೃತ್ತ)ದಲ್ಲಿ ಪ್ರತಿಭಟನೆ ನಡೆಸಿ ಬಳಿಕ ತಹಶೀಲ್ದಾರ್ ಅವರಿಗೆ ಮನವಿ ಪತ್ರವನ್ನು ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ವಿದ್ಯಾರ್ಥಿ ಪರಿಷತ್ ಪದಾಧಿಕಾರಿಗಳು ಮತ್ತು ಅಂಬೇಡ್ಕರ್ ಅಭಿಮಾನಿಗಳು ಭಾಗವಹಿಸಿದರು.
ವರದಿ: ಮುರುಳಿಧರನ್ ಆರ್ ., ಹಿರಿಯೂರು ( ಚಿತ್ರದುರ್ಗ ).
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy