ಕೊರೊನಾ ವೈರಸ್ ಸಂಬಂಧಿಸಿದಂತಹದ್ದೇ ನಿಯೋಕೋವ್ ಎಂಬ ಹೊಸ ವೈರಸ್ ಅನ್ನ ಆಫ್ರಿಕಾದ ಬಾವಲಿಗಳಲ್ಲಿ ಪತ್ತೆ ಹಚ್ಚಲಾಗಿರೋದಾಗಿ ಚೀನಾದ ವುಹಾನ್ ವಿಜ್ಞಾನಿಗಳು ತಿಳಿಸಿದ್ದಾರೆ.. ಇದು SARs-CoV-2 ಅಥವಾ ಅದರ ರೂಪಾಂತರವಲ್ಲ. ಇದು MERS ಕೊರೊನಾವೈರಸ್ಗೆ ಸಂಬಂಧಿಸಿದೆ. ಅಲ್ಲದೇ ಈ ವೈರಸ್ ರೂಪಾಂತರಗೊಂಡಿದ್ದೇ ಆದಲ್ಲಿ ಮುಂಬರುವ ದಿನಗಳಲ್ಲಿ ಮನುಷ್ಯರಿಗೆ ಹೆಚ್ಚು ಅಪಾಯಕಾರಿಯಾಗಿ ಪರಿಣಮಿಸಲಿದೆ ಎಂದು ವಿಜ್ಞಾನಿಗಳು ಎಚ್ಚರಿಸಿದ್ದಾರೆ.
ಮಿಡಲ್ ಈಸ್ಟ್ ರೆಸ್ಪಿರೇಟರಿ ಸಿಂಡ್ರೋಮ್ ಎಂಬ ಉಸಿರಾಟ ತೊಂದರೆ ಕಾಯಿಲೆಗೆ ಕಾರಣವಾಗುವ ವೈರಸ್ ಗೆ ಇರುವಂತಹ ಗುಣಲಕ್ಷಣಗಳನ್ನೇ ನಿಯೊಕೋವ್ ವೈರಾಣು ಹೊಂದಿದೆ ಎಂದು ಸಂಶೋಧಕರು ತಿಳಿಸಿದ್ದಾರೆ.
ಈ ವೈರಸ್ ಕುರಿತು ಹೆಚ್ಚಿನ ಅಧ್ಯಯನದ ಅಗತ್ಯ ಇದೆ ಎಂದಿದ್ದಾರೆ. ವಿಶ್ವ ಆರೋಗ್ಯ ಸಂಸ್ಥೆ ಕೂಡ ಇದೇ ಅಭಿಪ್ರಾಯವನ್ನು ವ್ಯಕ್ತಪಡಿಸಿದೆ. ಈ ವೈರಸ್ ರೂಪಾಂತರಗೊಳ್ಳುವ ಸಾಮರ್ಥ್ಯವನ್ನು ಹೊಂದಿದೆ ಎಂದು ಸಂಶೋಧಕರು ತಿಳಿಸಿದ್ದಾರೆ.
ಅಲ್ಲದೇ ಇದು ಎಷ್ಟು ಅಪಾಯಕಾರಿ ಎಂಬುದನ್ನ ತಿಳಿಯಲು ಮತ್ತಷ್ಟು ಅಧ್ಯಯನದ ಅಗತ್ಯವಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ತಿಳಿಸಿದೆ.
ವರದಿ: ಆಂಟೋನಿ ಬೇಗೂರು
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy