nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮದ್ಯ ಪ್ರಿಯರಿಗೆ ಬೆಲೆ ಏರಿಕೆ ಶಾಕ್: ರಾಜ್ಯದಲ್ಲಿ ಮತ್ತೆ ದುಬಾರಿಯಾಗಲಿದೆಯೇ ಮದ್ಯ?

    April 19, 2026

    ಕೊರಟಗೆರೆ: ಹಳೇ ದ್ವೇಷಕ್ಕೆ ಮನೆ ಮುಂದಿನ ವಾಹನಗಳಿಗೆ ಬೆಂಕಿ ಹಚ್ಚಿದ್ದ ವೈದ್ಯನ ಬಂಧನ

    April 19, 2026

    ಚಿರತೆಯಿಂದ ಅತ್ತೆಯನ್ನು ರಕ್ಷಿಸಿದ ಸೊಸೆ ಸುಜಾತಾಗೆ ‘ಕಿತ್ತೂರು ರಾಣಿ ಚೆನ್ನಮ್ಮ’ ಪ್ರಶಸ್ತಿ

    April 19, 2026
    Facebook Twitter Instagram
    ಟ್ರೆಂಡಿಂಗ್
    • ಮದ್ಯ ಪ್ರಿಯರಿಗೆ ಬೆಲೆ ಏರಿಕೆ ಶಾಕ್: ರಾಜ್ಯದಲ್ಲಿ ಮತ್ತೆ ದುಬಾರಿಯಾಗಲಿದೆಯೇ ಮದ್ಯ?
    • ಕೊರಟಗೆರೆ: ಹಳೇ ದ್ವೇಷಕ್ಕೆ ಮನೆ ಮುಂದಿನ ವಾಹನಗಳಿಗೆ ಬೆಂಕಿ ಹಚ್ಚಿದ್ದ ವೈದ್ಯನ ಬಂಧನ
    • ಚಿರತೆಯಿಂದ ಅತ್ತೆಯನ್ನು ರಕ್ಷಿಸಿದ ಸೊಸೆ ಸುಜಾತಾಗೆ ‘ಕಿತ್ತೂರು ರಾಣಿ ಚೆನ್ನಮ್ಮ’ ಪ್ರಶಸ್ತಿ
    • ಜನಗಣತಿ ಆ್ಯಪ್ ತಲೆನೋವು: ತುಮಕೂರಿನಲ್ಲಿ ಶಿಕ್ಷಕರ ಹೈರಾಣು!
    • ಏ.20ರಂದು ಶ್ರೀಜಗಜ್ಯೋತಿ ಬಸವೇಶ್ವರರ ಜಯಂತಿ
    • ಎತ್ತಿನಹೊಳೆ ಯೋಜನೆಗೆ ಅರಣ್ಯ ಇಲಾಖೆ ಅನುಮತಿ: ಕಾಮಗಾರಿ ವೇಗ, ಅಧಿಕಾರಿಗಳಿಗೆ ಅಭಿನಂದನೆ
    • ವಿದ್ಯಾವಂತರಲ್ಲೇ ಹೆಚ್ಚುತ್ತಿರುವ ಜಾತಿ ಪ್ರಜ್ಞೆ: ಲೇಖಕಿ ಎಂ.ಸಿ.ಲಲಿತ ವಿಷಾದ
    • ತಿಪಟೂರು: ಬೆಡ್‌ ಶೀಟ್ ಕಾರ್ಖಾನೆಯಲ್ಲಿ ಭೀಕರ ಅಗ್ನಿ ಅವಘಡ; ಪಕ್ಕದ ಪೊರಕೆ ತಯಾರಿಕಾ ಘಟಕಕ್ಕೂ ಬೆಂಕಿ ಕೆನ್ನಾಲಿಗೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ರಾಜ್ಯದ ಎಪಿಎಂಸಿ ಗಳಲ್ಲಿ ಸಾವಯವ ಉತ್ಪನ್ನಗಳಿಗೆ ಮಾರುಕಟ್ಟೆ ವ್ಯವಸ್ಥೆ:  ಸಿಎಂ ಭರವಸೆ
    ರಾಜ್ಯ ಸುದ್ದಿ January 24, 2025

    ರಾಜ್ಯದ ಎಪಿಎಂಸಿ ಗಳಲ್ಲಿ ಸಾವಯವ ಉತ್ಪನ್ನಗಳಿಗೆ ಮಾರುಕಟ್ಟೆ ವ್ಯವಸ್ಥೆ:  ಸಿಎಂ ಭರವಸೆ

    By adminJanuary 24, 2025No Comments2 Mins Read
    siddaramaiah

    ಬೆಂಗಳೂರು: ಕೃಷಿ ಪ್ರಧಾನವಾದ ಮಂಡ್ಯ  ಜಿಲ್ಲೆಯಲ್ಲಿ ಕೃಷಿ, ತೋಟಗಾರಿಕೆ, ಪಶುಸಂಗೋಪನೆ ಸೇರಿದಂತೆ  ಒಂದು ಸಂಯೋಜಿತ ಕೃಷಿ ವಿಶ್ವವಿದ್ಯಾಲಯ ಸ್ಥಾಪಿಸಲು ತೀರ್ಮಾನಿಸಲಾಗಿದ್ದು, ಇದರಿಂದ ಮಂಡ್ಯ, ಹಾಸನ, ಮೈಸೂರು ಚಾಮರಾಜನಗರ ಭಾಗದ ರೈತರಿಗೆ  ಸಾವಯವ ಹಾಗೂ ಸಿರಿಧಾನ್ಯ ಕೃಷಿಗೆ ಮಾರ್ಗದರ್ಶನ ಹಾಗೂ ಪ್ರೋತ್ಸಾಹ ದೊರೆಯಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

    ಅವರು ಅಂತರರಾಷ್ಟ್ರೀಯ ವಾಣಿಜ್ಯ  ಮೇಳ ಸಾವಯವ ಮತ್ತು ಸಿರಿಧಾನ್ಯ 2025 ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.


    Provided by
    Provided by

    ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ರೈತರ ಹಲವು ದಿನಗಳ ಬೇಡಿಕೆಯಾದ ಎಂಎಸ್ ಪಿ (ಕನಿಷ್ಟ ಬೆಂಬಲ ಬೆಲೆ) ಯೋಜನೆಯನ್ನು ಜಾರಿಗೆ ತರಬೇಕೆಂದು ಕೇಂದ್ರಸರ್ಕಾರವನ್ನು ಒತ್ತಾಯಿಸಿದರು.

    ರಾಗಿ ತಿಂದವನು ನಿರೋಗಿ ಸಿರಿಧಾನ್ಯಗಳ ಸೇವೆನೆ ಆರೋಗ್ಯಕ್ಕೆ ಉತ್ತಮ:

    ಭಾರತ ಕೃಷಿ ಪ್ರಧಾನ ದೇಶವಾಗಿದ್ದು, ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬಿಗಳಾಗಿದ್ದೇವೆ. ದೇಶಕ್ಕೆ ಸ್ವಾತಂತ್ರ್ಯ ದೊರೆತ ಸಂದರ್ಭದಲ್ಲಿ ಆಹಾರದ ಕೊರತೆಯಿತ್ತು. ಆದರೆ ಈಗ ಹಲವಾರು ಆಹಾರಧಾನ್ಯಗಳನ್ನು ಭಾರತ ರಫ್ತು ಮಾಡುತ್ತಿರುವುದು ಹೆಮ್ಮೆಯ ವಿಷಯ. ವಿರಳ ಮಳೆಯಿರುವ ಪ್ರದೇಶಗಳಲ್ಲಿ ಹೆಚ್ಚಾಗಿ ಸಾವಯವ ಸಿರಿಧಾನ್ಯಗಳನ್ನು ಬೆಳೆಯಲಾಗುತ್ತದೆ. ಕೃಷಿ ಕುಟುಂಬಕ್ಕೆ ಸೇರಿದ ತಮ್ಮ ಕುಟುಂಬದವರೂ ಕೂಡ ಸಿರಿಧಾನ್ಯಗಳ ಕೃಷಿ ಮಾಡುತ್ತಿದ್ದುದನ್ನು ಸ್ಮರಿಸಿದ ಮುಖ್ಯಮಂತ್ರಿಗಳು, ರಾಗಿ ತಿಂದವನು ನಿರೋಗಿ ಎಂಬಂತೆ, ಸಿರಿಧಾನ್ಯಗಳ ಸೇವೆನೆ ಆರೋಗ್ಯಕ್ಕೆ ಉತ್ತಮವಾಗಿದೆ ಎಂದು ತಿಳಿಸಿದರು.

    ಸಿರಿಧಾನ್ಯ ಉತ್ಪಾದನ-ಕರ್ನಾಟಕ 3ನೇ ಸ್ಥಾನ:

    ಭಾರತದಲ್ಲಿ ಸಿರಿಧಾನ್ಯಗಳ ಉತ್ಪಾದನೆಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಹೆಚ್ಚಿನ ಒತ್ತು ನೀಡಿದೆ. ಸಾವಯವ ಕೃಷಿ ವಿಸ್ತೀರ್ಣದಲ್ಲಿ ಭಾರತವು ವಿಶ್ವದಲ್ಲಿ 2ನೇ ಸ್ಥಾನ ಹಾಗೂ ಒಟ್ಟು ಸಾವಯವ ಉತ್ಪಾದಕರಲ್ಲಿ ಮೊದಲನೇ ಸ್ಥಾನದಲ್ಲಿದೆ. ವಿಶ್ವದಲ್ಲಿ ಅಂದಾಜು 903.61 ಲಕ್ಷ ಟನ್‌ಗಳಷ್ಟು ಸಿರಿಧಾನ್ಯಗಳ ಉತ್ಪಾದನೆಯಾಗುತ್ತಿದ್ದು, ಇದರಲ್ಲಿ ಶೇ.38.50 ರಷ್ಟು ಪಾಲು ನಮ್ಮ ಭಾರತ ದೇಶದ್ದಾಗಿದ್ದು, ವಿಶ್ವದ ಅತಿದೊಡ್ಡ ಸಿರಿಧಾನ್ಯ ಉತ್ಪಾದನೆಯಲ್ಲಿ ಮುಂಚೂಣಿ ರಾಷ್ಟ್ರವಾಗಿದೆ. ನಮ್ಮ ರಾಜ್ಯವು ಸಿರಿಧಾನ್ಯಗಳ ವಿಸ್ತೀರ್ಣ ಮತ್ತು ಉತ್ಪಾದನೆಯಲ್ಲಿ ದೇಶದಲ್ಲಿಯೇ 3ನೇ ಸ್ಥಾನದಲ್ಲಿರುತ್ತದೆ ಎಂದರು.

    ಸಾವಯವ ಕೃಷಿ ನೀತಿ:

    ಭಾರತದ ಒಟ್ಟು ಸಾವಯವ ರಫ್ತು ಪ್ರಮಾಣವು 2.61 ಲಕ್ಷ ಟನ್ ಆಗಿದ್ದು, ಈ ಪೈಕಿ ಸಾವಯವದ ಆಹಾರ ರಫ್ತಿನಿಂದ ಸುಮಾರು 4008 ಕೋಟಿ ರೂ.ಗಳಷ್ಟು  ಆದಾಯವಾಗಿರುತ್ತದೆ.  ಸಾವಯವ ಮತ್ತು ಸಿರಿಧಾನ್ಯಗಳಿಗೆ ವ್ಯವಸ್ಥಿತ ಮಾರುಕಟ್ಟೆ ಮತ್ತು ಸರಬರಾಜು ಸರಪಳಿಯನ್ನು ಕಲ್ಪಿಸುವ ಉದ್ದೇಶದೊಂದಿಗೆ ಪರಿಷ್ಕೃತ “ಸಾವಯವ ಕೃಷಿ ನೀತಿ” ಯನ್ನು ನಮ್ಮ ಸರ್ಕಾರವು 2017ರಲ್ಲಿ ಹೊರತಂದಿದೆ. ರಾಜ್ಯದ ರೈತರಲ್ಲಿ ಸಾವಯವ ಕೃಷಿ ಪದ್ಧತಿಯ ಬಗ್ಗೆ ಅರಿವು ಮೂಡಿಸಲು”ಸಾವಯವ ಭಾಗ್ಯ ಯೋಜನೆಯನ್ನು” 2013 ನೇ ಸಾಲಿನಲ್ಲಿ ಹೊರತಂದು ಹೋಬಳಿಮಟ್ಟದಲ್ಲಿ ಮಾದರಿ ಸಾವಯವ ಗ್ರಾಮಗಳನ್ನು ಸ್ಥಾಪಿಸಿ ರೈತರನ್ನು ಒಗ್ಗೂಡಿಸಿ ಉತ್ತೇಜಿಸಲಾಗಿದೆ ಎಂದರು.

    ಸಂಶೋಧನಾ ಕೇಂದ್ರ:

    ರಾಜ್ಯದ ಸಿರಿಧಾನ್ಯ ಕ್ಷೇತ್ರವನ್ನು ವಿಸ್ತರಿಸುವ ನಿಟ್ಟಿನಲ್ಲಿ “ರೈತ ಸಿರಿ” ಯೋಜನೆಯಡಿ ಪ್ರಮುಖ ಸಿರಿಧಾನ್ಯಗಳಾದ ಊದಲು, ನವಣೆ, ಹಾರಕ, ಕೊರಲೆ, ಸಾಮೆ ಮತ್ತು ಬರಗು ಬೆಳೆಗಳನ್ನು ಬೆಳೆಯುವ ರೈತರಿಗೆ ಪ್ರತಿ ಹೆಕ್ಟೇರ್ ಗೆ ರೂ. 10,000/- ಗಳಂತೆ ಗರಿಷ್ಠ 2 ಹೆಕ್ಟೇರ್ ಗಳಿಗೆ ಪ್ರೋತ್ಸಾಹಧನವನ್ನು ಪಾವತಿಸಲಾಗುತ್ತಿದೆ. ರಾಜ್ಯದ ಸಾವಯವ ಉತ್ಪನ್ನಗಳ ಮಾರಾಟಕ್ಕೆ ಸೂಕ್ತ ಮಾರುಕಟ್ಟೆ ಹಾಗೂ ಉತ್ತಮ ಧಾರಣೆ ದೊರಕಿಸಿಕೊಡಲು ರಾಜ್ಯದ ಸಾವಯವ ಕೃಷಿಕರ ಸಂಘಗಳನ್ನು ಒಗ್ಗೂಡಿಸಿ 15 ಪ್ರಾಂತೀಯ ಸಾವಯವ ಒಕ್ಕೂಟಗಳನ್ನು ರಚಿಸಲಾಗಿದೆ. ಸಾವಯವ ಹಾಗೂ ಸಿರಿಧಾನ್ಯಗಳ ಕೃಷಿಗೆ ಸಂಬಂಧಿಸಿದ ಸಂಶೋಧನಾ ಕೇಂದ್ರಗಳನ್ನು ರಾಜ್ಯದ ಕೃಷಿ ವಿಶ್ವವಿದ್ಯಾಲಯಗಳಲ್ಲಿ ಸ್ಥಾಪಿಸಲಾಗಿದೆ. ಸಿರಿಧಾನ್ಯಗಳ ಉತ್ತೇಜನದಲ್ಲಿ ಕರ್ನಾಟಕ ಸರ್ಕಾರವು ಕೈಗೊಂಡಿರುವ ವಿಶೇಷ ಪ್ರಯತ್ನಗಳನ್ನು ಗುರುತಿಸಿ ಕೇಂದ್ರ ಸರ್ಕಾರವು ಪ್ರಶಂಸನಾ ಪತ್ರ  ವನ್ನು ಕರ್ನಾಟಕ ಸರ್ಕಾರದ ಕೃಷಿ ಇಲಾಖೆಗೆ ನೀಡಿರುತ್ತದೆ ಎಂದರು.

    ಎಪಿಎಂಸಿಗಳಲ್ಲಿ ಮಾರುಕಟ್ಟೆ ವ್ಯವಸ್ಥೆ:

    ಮುಂದಿನ ಆರ್ಥಿಕ ವರ್ಷದಿಂದ ರಾಜ್ಯದ ಸಾವಯವ ಉತ್ಪನ್ನಗಳ ಮಾರಾಟಕ್ಕೆ ಎಪಿಎಂಸಿಗಳಲ್ಲಿ ಮಾರುಕಟ್ಟೆ ವ್ಯವಸ್ಥೆ ಕಲ್ಪಿಸಲಾಗುವುದು. ಕರ್ನಾಟಕ ಸರ್ಕಾರ ಸಿರಿಧಾನ್ಯಗಳ ಕೃಷಿ, ಮಾರುಕಟ್ಟೆ ಹಾಗೂ ಇತರೆ ಸೌಲಭ್ಯಗಳನ್ನು ನೀಡುವ ಮೂಲಕ ಸಿರಿಧಾನ್ಯ ಕೃಷಿಯ ಅಭಿವೃದ್ಧಿಗೆ ಪ್ರೋತ್ಸಾಹ ನೀಡಲು ಬದ್ಧವಾಗಿದೆ ಎಂದರು.

    ಕಾರ್ಯಕ್ರಮದಲ್ಲಿ ಉಪ ಮಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಇತರರಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

    admin
    • Website

    Related Posts

    ಮದ್ಯ ಪ್ರಿಯರಿಗೆ ಬೆಲೆ ಏರಿಕೆ ಶಾಕ್: ರಾಜ್ಯದಲ್ಲಿ ಮತ್ತೆ ದುಬಾರಿಯಾಗಲಿದೆಯೇ ಮದ್ಯ?

    April 19, 2026

    ಮದ್ಯದ ಅಮಲಿನಲ್ಲಿದ್ದ ವ್ಯಕ್ತಿಗೆ ಟೆಸ್ಟ್ ಡ್ರೈವ್‌ ಕಾರು ನೀಡಿದ ಶೋರೂಂ ಸಿಬ್ಬಂದಿ; ಸರಣಿ ಅಪಘಾತ, ಪಾದಚಾರಿಗೆ ಗಂಭೀರ ಗಾಯ

    April 17, 2026

    ರಾಜ್ಯದಲ್ಲಿ ಬರಗಾಲದ ಕರಿನೆರಳು: ಅಧಿಕಾರಕ್ಕಾಗಿ ಸಿಎಂ–ಡಿಸಿಎಂ ಕಚ್ಚಾಟ: ಆರ್. ಅಶೋಕ್ ತೀವ್ರ ವಾಗ್ದಾಳಿ

    April 17, 2026

    Comments are closed.

    Our Picks

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಮದ್ಯ ಪ್ರಿಯರಿಗೆ ಬೆಲೆ ಏರಿಕೆ ಶಾಕ್: ರಾಜ್ಯದಲ್ಲಿ ಮತ್ತೆ ದುಬಾರಿಯಾಗಲಿದೆಯೇ ಮದ್ಯ?

    April 19, 2026

    ಬೆಂಗಳೂರು: ಕರ್ನಾಟಕದ ಮದ್ಯ ಪ್ರಿಯರಿಗೆ ರಾಜ್ಯ ಸರ್ಕಾರ ಶಾಕ್ ನೀಡಲು ಮುಂದಾಗಿದೆ. ಶೀಘ್ರದಲ್ಲೇ ಮದ್ಯದ ಬೆಲೆಯಲ್ಲಿ ಶೇಕಡಾ 20 ರಷ್ಟು…

    ಕೊರಟಗೆರೆ: ಹಳೇ ದ್ವೇಷಕ್ಕೆ ಮನೆ ಮುಂದಿನ ವಾಹನಗಳಿಗೆ ಬೆಂಕಿ ಹಚ್ಚಿದ್ದ ವೈದ್ಯನ ಬಂಧನ

    April 19, 2026

    ಚಿರತೆಯಿಂದ ಅತ್ತೆಯನ್ನು ರಕ್ಷಿಸಿದ ಸೊಸೆ ಸುಜಾತಾಗೆ ‘ಕಿತ್ತೂರು ರಾಣಿ ಚೆನ್ನಮ್ಮ’ ಪ್ರಶಸ್ತಿ

    April 19, 2026

    ಜನಗಣತಿ ಆ್ಯಪ್ ತಲೆನೋವು: ತುಮಕೂರಿನಲ್ಲಿ ಶಿಕ್ಷಕರ ಹೈರಾಣು!

    April 19, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.